/ ಸಂಜೆಯಾಗುವಾಗ ಮತ್ತು ಬೆಳಗಾಗುವಾಗ "ಕುಲ್ ಹುವಲ್ಲಾಹು ಅಹದ್" (ಸೂರ ಇಖ್ಲಾಸ್) ಮತ್ತು ರಕ್ಷೆ ಬೇಡುವ ಎರಡು ಸೂರಗಳನ್ನು (ಸೂರ ಫಲಕ್ ಮತ್ತು ಸೂರ ನಾಸ್) ಮೂರು ಬಾರಿ ಪಠಿಸು. ಅದು ನಿನಗೆ ಎಲ್ಲದ್ದಕ್ಕೂ ಸಾಕಾಗುತ್ತದೆ...

ಸಂಜೆಯಾಗುವಾಗ ಮತ್ತು ಬೆಳಗಾಗುವಾಗ "ಕುಲ್ ಹುವಲ್ಲಾಹು ಅಹದ್" (ಸೂರ ಇಖ್ಲಾಸ್) ಮತ್ತು ರಕ್ಷೆ ಬೇಡುವ ಎರಡು ಸೂರಗಳನ್ನು (ಸೂರ ಫಲಕ್ ಮತ್ತು ಸೂರ ನಾಸ್) ಮೂರು ಬಾರಿ ಪಠಿಸು. ಅದು ನಿನಗೆ ಎಲ್ಲದ್ದಕ್ಕೂ ಸಾಕಾಗುತ್ತದೆ...

ಅಬ್ದುಲ್ಲಾ ಬಿನ್ ಖುಬೈಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ನಾವು ಮಳೆ ಮತ್ತು ತೀವ್ರ ಕತ್ತಲೆಯ ರಾತ್ರಿ ಅಲ್ಲಾಹನ ಸಂದೇಶವಾಹಕರನ್ನು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಗಾಗಿ ನಮಾಝ್ ಮಾಡಲು ಹುಡುಕುತ್ತಾ ಹೊರಟೆವು. ನಾನು ಅವರನ್ನು ಕಂಡಾಗ, ಅವರು ಹೇಳಿದರು: “ಹೇಳು.” ಆದರೆ ನಾನು ಏನೂ ಹೇಳಲಿಲ್ಲ. ನಂತರ ಅವರು ಹೇಳಿದರು: “ಹೇಳು.” ಆದರೆ ನಾನು ಏನೂ ಹೇಳಲಿಲ್ಲ. ಅವರು ಹೇಳಿದರು: “ಹೇಳು.” ನಾನು ಕೇಳಿದೆ: "ನಾನು ಏನು ಹೇಳಬೇಕು?" ಅವರು ಹೇಳಿದರು: ಸಂಜೆಯಾಗುವಾಗ ಮತ್ತು ಬೆಳಗಾಗುವಾಗ "ಕುಲ್ ಹುವಲ್ಲಾಹು ಅಹದ್" (ಸೂರ ಇಖ್ಲಾಸ್) ಮತ್ತು ರಕ್ಷೆ ಬೇಡುವ ಎರಡು ಸೂರಗಳನ್ನು (ಸೂರ ಫಲಕ್ ಮತ್ತು ಸೂರ ನಾಸ್) ಮೂರು ಬಾರಿ ಪಠಿಸು. ಅದು ನಿನಗೆ ಎಲ್ಲದ್ದಕ್ಕೂ ಸಾಕಾಗುತ್ತದೆ."
رواه أبو داود والترمذي والنسائي

ವಿವರಣೆ

ಮಹಾನ್ ಸಹಾಬಿ ಅಬ್ದುಲ್ಲಾ ಬಿನ್ ಖುಬೈಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ತಿಳಿಸುವುದೇನೆಂದರೆ, ಒಮ್ಮೆ ಅವರು ತೀವ್ರ ಮಳೆ ಮತ್ತು ಕತ್ತಲೆಯ ರಾತ್ರಿಯಲ್ಲಿ ನಮಾಝಿಗೆ ನೇತೃತ್ವ ನೀಡಲು ಅಲ್ಲಾಹನ ಸಂದೇಶವಾಹಕರನ್ನು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹುಡುಕುತ್ತಾ ಹೊರಟು, ಅವರನ್ನು ಕಂಡರು. ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅವರೊಡನೆ, “ಹೇಳು” ಎಂದರು, ಅಂದರೆ ಪಠಿಸು ಎಂದರ್ಥ. ಆದರೆ ಅವರು ಏನೂ ಪಠಿಸಲಿಲ್ಲ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಮ್ಮ ಆಜ್ಞೆಯನ್ನು ಪುನರಾವರ್ತಿಸಿದರು. ಆಗ ಅಬ್ದುಲ್ಲಾ ಕೇಳಿದರು: “ಓ ಅಲ್ಲಾಹನ ಸಂದೇಶವಾಹಕರೇ! ನಾನು ಏನು ಪಠಿಸಬೇಕು?” ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸಂಜೆ ಮತ್ತು ಬೆಳಗ್ಗೆ ಸೂರ ಇಖ್ಲಾಸ್ (ಕುಲ್ ಹುವಲ್ಲಾಹು ಅಹದ್) ಮತ್ತು ರಕ್ಷೆ ಬೇಡುವ ಎರಡು ಸೂರಗಳು (ಕುಲ್ ಅಊದು ಬಿರಬ್ಬಿಲ್ ಫಲಕ್ ಮತ್ತು ಕುಲ್ ಅಊದು ಬಿರಬ್ಬಿ ನ್ನಾಸ್) ಮೂರು ಬಾರಿ ಪಠಿಸು. ಅವು ನಿನ್ನನ್ನು ಎಲ್ಲಾ ಕೆಡುಕುಗಳಿಂದ ಕಾಪಾಡುತ್ತದೆ ಮತ್ತು ಎಲ್ಲಾ ಕೇಡುಗಳಿಂದ ರಕ್ಷಿಸುತ್ತದೆ.

Hadeeth benefits

  1. ಬೆಳಗ್ಗೆ ಮತ್ತು ಸಂಜೆ ಸೂರ ಇಖ್ಲಾಸ್ ಮತ್ತು ರಕ್ಷೆ ಬೇಡುವ ಎರಡು ಸೂರಗಳನ್ನು ಪಠಿಸುವುದು ಅಪೇಕ್ಷಣೀಯವಾಗಿದೆ. ಅವು ಎಲ್ಲಾ ಕೆಡುಕುಗಳಿಗೆ ರಕ್ಷಣೆಯಾಗಿದೆ.
  2. ಸೂರ ಇಖ್ಲಾಸ್ ಮತ್ತು ರಕ್ಷೆ ಬೇಡುವ ಎರಡು ಸೂರಗಳನ್ನು ಪಠಿಸುವುದರ ಶ್ರೇಷ್ಠತೆಯನ್ನು ತಿಳಿಸಲಾಗಿದೆ.