- ಸುನ್ನತ್‌ಗೆ ಅಂಟಿಕೊಳ್ಳುವುದು ಮತ್ತು ಅದನ್ನು ಅನುಸರಿಸುವುದರ ಪ್ರಾಮುಖ್ಯತೆಯನ್ನು ತಿಳಿಸಲಾಗಿದೆ.
- ಮನಮುಟ್ಟುವ ಪ್ರವಚನಗಳ ಮಹತ್ವ ಮತ್ತು ಹೃದಯಗಳನ್ನು ಮೃದುಗೊಳಿಸುವುದರ ಮಹತ್ವವನ್ನು ತಿಳಿಸಲಾಗಿದೆ.
- ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಂತರ ಸರಿಯಾದ ಸನ್ಮಾರ್ಗದಲ್ಲಿ ಮುನ್ನಡೆದ ನಾಲ್ಕು ಖಲೀಫರಾದ ಅಬೂಬಕರ್, ಉಮರ್, ಉಸ್ಮಾನ್ ಮತ್ತು ಅಲಿ (ಅಲ್ಲಾಹು ಅವರೆಲ್ಲರ ಬಗ್ಗೆ ಸಂಪ್ರೀತನಾಗಲಿ) ರನ್ನು ಅನುಸರಿಸಬೇಕೆಂದು ಆಜ್ಞಾಪಿಸಲಾಗಿದೆ.
- ಧರ್ಮದಲ್ಲಿ ಹೊಸ ಆವಿಷ್ಕಾರಗಳನ್ನು ನಿಷೇಧಿಸಲಾಗಿದೆ ಮತ್ತು ಪ್ರತಿಯೊಂದು ಹೊಸ ಆಚಾರವೂ ದಾರಿಗೇಡಾಗಿದೆಯೆಂದು ತಿಳಿಸಲಾಗಿದೆ.
- ಅಲ್ಲಾಹನ ಆಜ್ಞೆಗಳಿಗೆ ವಿರುದ್ಧವಾಗದ ವಿಷಯಗಳಲ್ಲಿ ಆಡಳಿತಗಾರರ ಮಾತನ್ನು ಕೇಳಬೇಕು ಮತ್ತು ಅನುಸರಿಸಬೇಕೆಂದು ತಿಳಿಸಲಾಗಿದೆ.
- ಎಲ್ಲಾ ಸಂದರ್ಭಗಳಲ್ಲೂ ಎಲ್ಲಾ ಸಮಯದಲ್ಲೂ ಅಲ್ಲಾಹನನ್ನು ಭಯಪಡುವುದರ ಪ್ರಾಮುಖ್ಯತೆಯನ್ನು ತಿಳಿಸಲಾಗಿದೆ.
- ಮುಸ್ಲಿಮ್ ಸಮುದಾಯದಲ್ಲಿ ಭಿನ್ನಾಭಿಪ್ರಾಯಗಳು ಉಂಟಾಗಬಹುದೆಂದು ಒಪ್ಪಿಕೊಳ್ಳಲಾಗಿದೆ. ಭಿನ್ನಾಭಿಪ್ರಾಯಗಳು ಉಂಟಾಗುವಾಗ ಅದಕ್ಕೆ ಪರಿಹಾರವು ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಚರ್ಯೆಗೆ ಮತ್ತು ಸನ್ಮಾರ್ಗಿಗಳಾದ ಖಲೀಫರುಗಳ ಚರ್ಯೆಗೆ ಮರಳುವುದೆಂದು ತಿಳಿಸಲಾಗಿದೆ.