- ಒಳಿತಿನ ಕರ್ಮಗಳಿಗೆ ಹಲವು ಪಟ್ಟು ಪ್ರತಿಫಲಗಳನ್ನು ನೀಡುವುದು ಮತ್ತು ಕೆಡುಕಿನ ಕರ್ಮಗಳಿಗೆ ಹಲವು ಪಟ್ಟು ಶಿಕ್ಷೆಗಳನ್ನು ನೀಡದಿರುವುದು ಅಲ್ಲಾಹು ಈ ಸಮುದಾಯದ ಮೇಲೆ ತೋರಿದ ಮಹಾ ಅನುಗ್ರಹವೆಂದು ಈ ಹದೀಸ್ ವಿವರಿಸುತ್ತದೆ.
- ಕರ್ಮಗಳಲ್ಲಿ ಮತ್ತು ಅದರ ಪರಿಣಾಮಗಳಲ್ಲಿ ಉದ್ದೇಶವು (ನಿಯ್ಯತ್) ಹೊಂದಿರುವ ಪ್ರಮುಖ ಪಾತ್ರವನ್ನು ಈ ಹದೀಸ್ ತಿಳಿಸುತ್ತದೆ.
- ಒಳಿತನ್ನು ಮಾಡಲು ಉದ್ದೇಶಿಸಿ ನಂತರ ಅದನ್ನು ಮಾಡದಿದ್ದರೂ ಅವನ ಹೆಸರಲ್ಲಿ ಒಂದು ಒಳಿತು ಮಾಡಿದ ಪುಣ್ಯವನ್ನು ದಾಖಲಿಸುವುದು ಸರ್ವಶಕ್ತನಾದ ಅಲ್ಲಾಹನ ಅನುಕಂಪ ಮತ್ತು ಉದಾರತೆಯೆಂದು ಈ ಹದೀಸ್ ತಿಳಿಸುತ್ತದೆ.