- ಅಜ್ಞಾನ ಕಾಲದಲ್ಲಿ ಮಾಡಿದ ದುಷ್ಕರ್ಮಗಳ ಬಗ್ಗೆ ಸಹಾಬಿಗಳಿಗೆ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ಇದ್ದ ಕಾಳಜಿ ಮತ್ತು ಆತಂಕವನ್ನು ಈ ಹದೀಸ್ ವ್ಯಕ್ತಪಡಿಸುತ್ತದೆ.
- ಇಸ್ಲಾಂ ಧರ್ಮದಲ್ಲಿ ದೃಢವಾಗಿ ನಿಲ್ಲಲು ಈ ಹದೀಸ್ ಪ್ರೇರೇಪಿಸುತ್ತದೆ.
- ಈ ಹದೀಸ್ ಇಸ್ಲಾಂ ಧರ್ಮವನ್ನು ಸ್ವೀಕರಿಸುವುದರ ಶ್ರೇಷ್ಠತೆಯನ್ನು ಹಾಗೂ ಅದು ಹಿಂದಿನ ಪಾಪಗಳನ್ನು ಪರಿಹಾರ ಮಾಡುತ್ತದೆಯೆಂಬುದನ್ನು ವಿವರಿಸುತ್ತದೆ.
- ಧರ್ಮಪರಿತ್ಯಾಗಿಗಳು ಮತ್ತು ಕಪಟ ವಿಶ್ವಾಸಿಗಳು ಅಜ್ಞಾನ ಕಾಲದಲ್ಲಿ ಮಾಡಿದ ದುಷ್ಕರ್ಮಗಳಿಗೂ ಮತ್ತು ಇಸ್ಲಾಂ ಧರ್ಮವನ್ನು ಸ್ವೀಕರಿಸಿದ ಬಳಿಕ ಮಾಡಿದ ಪಾಪಗಳಿಗೂ ವಿಚಾರಣೆ ಎದುರಿಸಬೇಕಾಗುತ್ತದೆ ಎಂದು ಈ ಹದೀಸ್ ತಿಳಿಸುತ್ತದೆ.