ನಿಶ್ಚಯವಾಗಿಯೂ, ಒಳಿತಿನ ವಿಷಯದಲ್ಲಿ ಅಲ್ಲಾಹು ಸತ್ಯವಿಶ್ವಾಸಿಗೆ ಅನ್ಯಾಯ ಮಾಡುವುದಿಲ್ಲ. ಒಳಿತು ಮಾಡಿದ್ದಕ್ಕಾಗಿ ಅವನಿಗೆ ಇಹಲೋಕದಲ್ಲಿ (ಜೀವನೋಪಾಯವನ್ನು) ನೀಡಲಾಗುತ್ತದೆ ಮತ್ತು ಪರಲೋಕದಲ್ಲೂ ಪ್ರತಿಫಲ ನೀಡಲಾಗುತ್ತದೆ...
ಅನಸ್ ಇಬ್ನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಶ್ಚಯವಾಗಿಯೂ, ಒಳಿತಿನ ವಿಷಯದಲ್ಲಿ ಅಲ್ಲಾಹು ಸತ್ಯವಿಶ್ವಾಸಿಗೆ ಅನ್ಯಾಯ ಮಾಡುವುದಿಲ್ಲ. ಒಳಿತು ಮಾಡಿದ್ದಕ್ಕಾಗಿ ಅವನಿಗೆ ಇಹಲೋಕದಲ್ಲಿ (ಜೀವನೋಪಾಯವನ್ನು) ನೀಡಲಾಗುತ್ತದೆ ಮತ್ತು ಪರಲೋಕದಲ್ಲೂ ಪ್ರತಿಫಲ ನೀಡಲಾಗುತ್ತದೆ. ಆದರೆ ಸತ್ಯನಿಷೇಧಿಯು ಇಹಲೋಕದಲ್ಲಿ ಅಲ್ಲಾಹನ ಸಂಪ್ರೀತಿಗಾಗಿ ಮಾಡಿದ ಒಳಿತುಗಳಿಗಾಗಿ ಅವನಿಗೆ ಆಹಾರವನ್ನು ನೀಡಲಾಗುವುದು. ಹೀಗೆ ಅವನು ಪರಲೋಕಕ್ಕೆ ತಲುಪಿದಾಗ, ಪ್ರತಿಫಲ ನೀಡಲಾಗುವ ಯಾವುದೇ ಒಳಿತುಗಳು ಅವನಲ್ಲಿ ಉಳಿದಿರುವುದಿಲ್ಲ."
رواه مسلم
ವಿವರಣೆ
ಈ ಹದೀಸಿನಲ್ಲಿ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸತ್ಯವಿಶ್ವಾಸಿಗಳ ಮೇಲೆ ಅಲ್ಲಾಹನಿಗಿರುವ ಮಹಾ ಉದಾರತೆಯನ್ನು, ಮತ್ತು ಸತ್ಯನಿಷೇಧಿಗಳೊಂದಿಗೆ ಅವನು ತೋರಿಸುವ ನ್ಯಾಯವನ್ನು ವಿವರಿಸುತ್ತಾರೆ. ಸತ್ಯವಿಶ್ವಾಸಿ ಮಾಡಿದ ಯಾವುದೇ ಸತ್ಕರ್ಮದ ಪ್ರತಿಫಲವು ಅವನಿಗೆ ನಷ್ಟವಾಗುವುದಿಲ್ಲ. ಬದಲಿಗೆ, ಪರಲೋಕದಲ್ಲಿ ಅವನಿಗೆ ಪ್ರತಿಫಲ ನೀಡಲಾಗುವುದರ ಜೊತೆಗೆ ಇಹಲೋಕದಲ್ಲೂ ಅವನು ತೋರಿದ ವಿಧೇಯತೆಗೆ ಅವನಿಗೆ ಪ್ರತಿಫಲವನ್ನು ನೀಡಲಾಗುತ್ತದೆ. ಪರಲೋಕದಲ್ಲಿ ಅವೆಲ್ಲದರ ಪ್ರತಿಫಲವನ್ನು ಅವನಿಗೆ ಸಂರಕ್ಷಿಸಿ ಇಡಲಾಗುವುದು. ಆದರೆ ಸತ್ಯನಿಷೇಧಿಯು ಇಹಲೋಕದಲ್ಲಿ ಮಾಡಿದ ಒಳಿತುಗಳಿಗೆ ಅಲ್ಲಾಹು ಇಹಲೋಕದಲ್ಲೇ ಪ್ರತಿಫಲವನ್ನು ನೀಡುವನು. ಹೀಗೆ ಅವನು ಪರಲೋಕಕ್ಕೆ ತಲುಪಿದರೆ ಅಲ್ಲಿ ಅವನಿಗೆ ನೀಡಲು ಯಾವುದೇ ಪ್ರತಿಫಲವು ಉಳಿದಿರುವುದಿಲ್ಲ. ಏಕೆಂದರೆ ಸತ್ಕರ್ಮಗಳಿಗೆ ಪರಲೋಕದಲ್ಲಿ ಪ್ರತಿಫಲ ಸಿಗಬೇಕಾದರೆ ಅದನ್ನು ಮಾಡುವ ವ್ಯಕ್ತಿ ಸತ್ಯವಿಶ್ವಾಸಿಯಾಗಿರಬೇಕು.
Hadeeth benefits
ಸತ್ಯನಿಷೇಧದಲ್ಲಿ ಸಾಯುವವನಿಗೆ ಅವನ ಕರ್ಮಗಳು ಪ್ರಯೋಜನ ನೀಡುವುದಿಲ್ಲ.
Share
Use the QR code to easily share the message of Islam with others