ಪರಸ್ಪರ ಪ್ರೀತಿ, ಕರುಣೆ ಮತ್ತು ಸಹಾನುಭೂತಿ ತೋರುವುದರಲ್ಲಿ ಸತ್ಯವಿಶ್ವಾಸಿಗಳ ಉದಾಹರಣೆಯು ಒಂದು ದೇಹದಂತೆ. ಅದರ ಒಂದು ಅಂಗವು ನೋವಿನಿಂದ ಬಳಲುವಾಗ, ದೇಹದ ಉಳಿದೆಲ್ಲಾ ಭಾಗಗಳು ನಿದ್ರಾಹೀನತೆ ಮತ್ತು ಜ್ವರದ ಮೂಲಕ ಅದಕ್ಕೆ ಸ್ಪಂದಿಸುತ್ತವೆ...
ನುಅಮಾನ್ ಬಿನ್ ಬಶೀರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಪರಸ್ಪರ ಪ್ರೀತಿ, ಕರುಣೆ ಮತ್ತು ಸಹಾನುಭೂತಿ ತೋರುವುದರಲ್ಲಿ ಸತ್ಯವಿಶ್ವಾಸಿಗಳ ಉದಾಹರಣೆಯು ಒಂದು ದೇಹದಂತೆ. ಅದರ ಒಂದು ಅಂಗವು ನೋವಿನಿಂದ ಬಳಲುವಾಗ, ದೇಹದ ಉಳಿದೆಲ್ಲಾ ಭಾಗಗಳು ನಿದ್ರಾಹೀನತೆ ಮತ್ತು ಜ್ವರದ ಮೂಲಕ ಅದಕ್ಕೆ ಸ್ಪಂದಿಸುತ್ತವೆ."
متفق عليه
ವಿವರಣೆ
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ವಿವರಿಸುವುದೇನೆಂದರೆ, ಮುಸ್ಲಿಮರು ಪರಸ್ಪರರ ಒಳಿತನ್ನು ಇಷ್ಟಪಡುವುದು, ಕರುಣೆ ತೋರುವುದು, ಸಹಾಯ ಮಾಡುವುದು, ಬೆಂಬಲಿಸುವುದು ಮತ್ತು ತೊಂದರೆಗೆ ಒಳಗಾದಾಗ ಪರಸ್ಪರ ನೆರವು ನೀಡುವುದರಲ್ಲಿ ಅವರ ಸ್ಥಿತಿಯು ಒಂದೇ ದೇಹದಂತೆ ಇರಬೇಕು. ಅದರ ಒಂದು ಅಂಗಕ್ಕೆ ಅನಾರೋಗ್ಯ ಬಾಧಿಸಿದರೆ, ಸಂಪೂರ್ಣ ದೇಹವು ನಿದ್ರಾಹೀನತೆ ಮತ್ತು ಜ್ವರದ ಮೂಲಕ ಸ್ಪಂದಿಸುವಂತೆ ಸ್ಪಂದಿಸಬೇಕು.
Hadeeth benefits
ಮುಸ್ಲಿಮರ ಹಕ್ಕುಗಳನ್ನು ಗೌರವಿಸಬೇಕು ಮತ್ತು ಅವರ ನಡುವೆ ಪರಸ್ಪರ ಸಹಕಾರ ಮತ್ತು ಸಹಾನುಭೂತಿಯನ್ನು ಪ್ರೋತ್ಸಾಹಿಸಬೇಕು.
ಸತ್ಯವಿಶ್ವಾಸಿಗಳು ಪರಸ್ಪರ ಪ್ರೀತಿಸಬೇಕು ಮತ್ತು ಬೆಂಬಲಿಸಬೇಕು.
Share
Use the QR code to easily share the message of Islam with others