/ ಅಲ್ಲಾಹುಮ್ಮ ಅನ್ತ ಸ್ಸಲಾಂ, ವಮಿನ್ಕ ಸ್ಸಲಾಂ, ತಬಾರಕ್ತ ದಲ್ ಜಲಾಲಿ ವಲ್ ಇಕ್ರಾಮ್

ಅಲ್ಲಾಹುಮ್ಮ ಅನ್ತ ಸ್ಸಲಾಂ, ವಮಿನ್ಕ ಸ್ಸಲಾಂ, ತಬಾರಕ್ತ ದಲ್ ಜಲಾಲಿ ವಲ್ ಇಕ್ರಾಮ್

ಸೌಬಾನ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಾಝ್ ಮುಗಿಸಿದರೆ ಮೂರು ಬಾರಿ ಇಸ್ತಿಗ್ಫಾರ್ (ಕ್ಷಮೆಯಾಚನೆ) ಮಾಡುತ್ತಿದ್ದರು. ನಂತರ ಹೀಗೆ ಹೇಳುತ್ತಿದ್ದರು: "ಅಲ್ಲಾಹುಮ್ಮ ಅನ್ತ ಸ್ಸಲಾಂ, ವಮಿನ್ಕ ಸ್ಸಲಾಂ, ತಬಾರಕ್ತ ದಲ್ ಜಲಾಲಿ ವಲ್ ಇಕ್ರಾಮ್" (ಓ ಅಲ್ಲಾಹ್! ನೀನು ಅಸ್ಸಲಾಂ (ಶಾಂತಿ) ಮತ್ತು ನಿನ್ನಿಂದಲೇ ಶಾಂತಿ. ಓ ಮಹಿಮೆ ಪ್ರತಿಷ್ಠೆಗಳನ್ನು ಹೊಂದಿರುವವನೇ! ನೀನು ಅನುಗ್ರಹಪೂರ್ಣನಾಗಿರುವೆ.” (ವರದಿಗಾರರಲ್ಲಿ ಒಬ್ಬರಾದ) ವಲೀದ್ ಹೇಳುತ್ತಾರೆ: ನಾನು ಔಝಾಈರೊಡನೆ ಕೇಳಿದೆ: "ನಾನು ಕ್ಷಮೆಯಾಚನೆ ಮಾಡುವುದು ಹೇಗೆ?" ಅವರು ಉತ್ತರಿಸಿದರು: "ಅಸ್ತಗ್ಫಿರುಲ್ಲಾಹ್, ಅಸ್ತಗ್ಫಿರುಲ್ಲಾಹ್ ಎಂದು ಹೇಳುವುದು."
رواه مسلم

ವಿವರಣೆ

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಾಝ್ ಮುಗಿಸಿದರೆ ಮೂರು ಬಾರಿ ಅಸ್ತಗ್ಫಿರುಲ್ಲಾಹ್ (ನಾನು ಅಲ್ಲಾಹನಲ್ಲಿ ಕ್ಷಮೆಯಾಚಿಸುತ್ತೇನೆ) ಎಂದು ಹೇಳುತ್ತಿದ್ದರು. ನಂತರ ತನ್ನ ಪರಿಪಾಲಕನನ್ನು (ಅಲ್ಲಾಹನನ್ನು) ಮಹಿಮೆಪಡಿಸುತ್ತಾ ಹೀಗೆ ಹೇಳುತ್ತಿದ್ದರು: "ಅಲ್ಲಾಹುಮ್ಮ ಅನ್ತ ಸ್ಸಲಾಂ, ವಮಿನ್ಕ ಸ್ಸಲಾಂ, ತಬಾರಕ್ತ ದಲ್ ಜಲಾಲಿ ವಲ್ ಇಕ್ರಾಮ್" (ಓ ಅಲ್ಲಾಹ್! ನೀನು ಅಸ್ಸಲಾಂ (ಶಾಂತಿ) ಮತ್ತು ನಿನ್ನಿಂದಲೇ ಶಾಂತಿ. ಓ ಮಹಿಮೆ ಪ್ರತಿಷ್ಠೆಗಳನ್ನು ಹೊಂದಿರುವವನೇ! ನೀನು ಅನುಗ್ರಹಪೂರ್ಣನಾಗಿರುವೆ.” ಅಲ್ಲಾಹು ಅವನ ಗುಣಲಕ್ಷಣಗಳ ವಿಷಯದಲ್ಲಿ ಸುರಕ್ಷಿತನು ಮತ್ತು ಪರಿಪೂರ್ಣನು. ಅವನಿಗೆ ಯಾವುದೇ ಕುಂದು-ಕೊರತೆಗಳು ಅಥವಾ ಅಪೂರ್ಣತೆಗಳಿಲ್ಲ. ಅದೇ ರೀತಿ, ಈ ಪ್ರಾರ್ಥನೆಯಲ್ಲಿ ಇಹಲೋಕದ ಮತ್ತು ಪರಲೋಕದ ಎಲ್ಲಾ ಕೆಡುಕುಗಳಿಂದ ಅಲ್ಲಾಹನಲ್ಲಿ ಮಾತ್ರ ಪ್ರಾರ್ಥಿಸಲಾಗುತ್ತದೆ. ಪರಮ ಪರಿಶುದ್ಧನಾದ ಅವನ ಒಳಿತುಗಳು ಇಹಲೋಕದಲ್ಲೂ ಪರಲೋಕದಲ್ಲೂ ಅತ್ಯಧಿಕವಾಗಿವೆ. ಅವನು ಮಹಿಮೆ ಮತ್ತು ಒಳಿತುಗಳ ಒಡೆಯನಾಗಿದ್ದಾನೆ.

Hadeeth benefits

  1. ನಮಾಝ್ ನಿರ್ವಹಿಸಿದ ನಂತರ ಕ್ಷಮೆಯಾಚಿಸುವುದು ಮತ್ತು ಅದನ್ನು ರೂಢಿ ಮಾಡುವುದು ಅಪೇಕ್ಷಣೀಯವಾಗಿದೆಯೆಂದು ಈ ಹದೀಸ್ ತಿಳಿಸುತ್ತದೆ.
  2. ಆರಾಧನೆಯಲ್ಲಿ ಸಂಭವಿಸುವ ಅಪೂರ್ಣತೆಗಳನ್ನು ಪೂರ್ಣಗೊಳಿಸಲು ಮತ್ತು ಅನುಸರಣೆಯಲ್ಲಿ ಸಂಭವಿಸುವ ಕೊರತೆಗಳನ್ನು ತುಂಬಿಕೊಳ್ಳಲು ಕ್ಷಮೆಯಾಚಿಸುವುದು ಅಪೇಕ್ಷಣೀಯವಾಗಿದೆಯೆಂದು ಈ ಹದೀಸ್ ತಿಳಿಸುತ್ತದೆ.