ಉಮರ್ ಬಿನ್ ಖತ್ತಾಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಕರ್...
ಪ್ರತಿಯೊಂದು ಕರ್ಮವನ್ನೂ ಉದ್ದೇಶಗಳ ಆಧಾರದ ಮೇಲೆ ಪರಿಗಣಿಸಲಾಗುತ್ತದೆಯೆಂದು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ವಿವರಿಸುತ್ತಾರೆ. ಈ ನಿಯಮವು ಆರಾಧ...
ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಮ್ಮ ಈ ವಿಷಯದಲ್ಲಿ...
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ವಿವರಿಸುವುದೇನೆಂದರೆ, ಧರ್ಮದಲ್ಲಿ ಹೊಸದಾದ ಒಂದು ಕಾರ್ಯವನ್ನು ಯಾರಾದರೂ ಆವಿಷ್ಕರಿಸಿದರೆ, ಅಥವಾ ಕುರ್‌ಆನ್ ಮತ...
ಉಮರ್ ಬಿನ್ ಖತ್ತಾಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಂದು ದಿನ ನಾವು ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ)...
ಇಲ್ಲಿ ಉಮರ್ ಬಿನ್ ಖತ್ತಾಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ತಿಳಿಸುವುದೇನೆಂದರೆ, ಒಮ್ಮೆ ಜಿಬ್ರೀಲ್ (ಅವರ ಮೇಲೆ ಶಾಂತಿಯಿರಲಿ) ಅಪರಿಚಿತ ವ್ಯಕ್ತಿಯ ರೂಪದಲ್ಲಿ ಸಹಾಬಿಗಳ (ಅಲ್...
ಅಬ್ದುಲ್ಲಾ ಬಿನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರ...
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಸ್ಲಾಂ ಧರ್ಮವನ್ನು ಐದು ಸ್ತಂಭಗಳಿಂದ ಎತ್ತಿಹಿಡಿಯಲಾದ ಬಲಿಷ್ಠ ಕಟ್ಟಡಕ್ಕೆ ಹೋಲಿಸಿದ್ದಾರೆ. ಇಸ್ಲಾಂ ಧರ್ಮದ ಇತರ ಬೋಧ...
ಮುಆದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಮ್ಮೆ ಉಫೈರ್ ಎಂಬ ಹೆಸರಿನ ಒಂದು ಕತ್ತೆಯ ಮೇಲೆ ನಾನು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶ...
ಈ ಹದೀಸಿನಲ್ಲಿ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ದಾಸರ ಮೇಲಿರುವ ಅಲ್ಲಾಹನ ಹಕ್ಕನ್ನು ಮತ್ತು ಅಲ್ಲಾಹನ ಮೇಲಿರುವ ದಾಸರ ಹಕ್ಕನ್ನು ವಿವರಿಸುತ್ತಿದ್ದಾರೆ....

ಉಮರ್ ಬಿನ್ ಖತ್ತಾಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಕರ್ಮಗಳು ಉದ್ದೇಶದ (ನಿಯ್ಯತ್) ಮೇಲೆ ಅವಲಂಬಿತವಾಗಿವೆ. ಪ್ರತಿಯೊಬ್ಬರಿಗೂ ಅವರ ಉದ್ದೇಶಕ್ಕೆ ತಕ್ಕಂತೆ ಪ್ರತಿಫಲ ಸಿಗುತ್ತದೆ. ಆದ್ದರಿಂದ ಯಾರ ಹಿಜ್ರ (ವಲಸೆ) ಅಲ್ಲಾಹು ಮತ್ತು ಅವನ ಸಂದೇಶವಾಹಕರಿಗಾಗಿದೆಯೋ, ಅವನ ಹಿಜ್ರವನ್ನು ಅಲ್ಲಾಹು ಮತ್ತು ಅವನ ಸಂದೇಶವಾಹಕರಿಗೆಂದೇ ಪರಿಗಣಿಸಲಾಗುವುದು. ಆದರೆ ಯಾರು ಐಹಿಕ ಲಾಭವನ್ನು ಪಡೆಯಲು ಅಥವಾ ಒಬ್ಬ ಮಹಿಳೆಯನ್ನು ವಿವಾಹವಾಗಲು ಹಿಜ್ರ ಮಾಡುತ್ತಾನೋ ಅವನ ಹಿಜ್ರವನ್ನು ಅದೇ ಉದ್ದೇಶಕ್ಕೆಂದು ಪರಿಗಣಿಸಲಾಗುವುದು." ಬುಖಾರಿಯ ವರದಿಯಲ್ಲಿ ಹೀಗಿದೆ: "ಕರ್ಮಗಳು ಉದ್ದೇಶಗಳ (ನಿಯ್ಯತ್‌ಗಳ) ಮೇಲೆ ಅವಲಂಬಿತವಾಗಿವೆ. ಪ್ರತಿಯೊಬ್ಬರಿಗೂ ಅವರ ಉದ್ದೇಶಕ್ಕೆ ತಕ್ಕಂತೆ ಪ್ರತಿಫಲ ಸಿಗುತ್ತದೆ."

ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಮ್ಮ ಈ ವಿಷಯದಲ್ಲಿ (ಧರ್ಮದಲ್ಲಿ) ಅದರಲ್ಲಿಲ್ಲದ ಒಂದನ್ನು ಯಾರಾದರೂ ಆವಿಷ್ಕರಿಸಿದರೆ, ಅದು ತಿರಸ್ಕೃತವಾಗಿದೆ." [ಬುಖಾರಿ ಮತ್ತು ಮುಸ್ಲಿಂ]. ಮುಸ್ಲಿಂರ ವರದಿಯಲ್ಲಿ ಹೀಗಿದೆ: "ನಮ್ಮ ಆಜ್ಞೆಯಿಲ್ಲದ ಒಂದು ಕರ್ಮವನ್ನು ಯಾರಾದರೂ ನಿರ್ವಹಿಸಿದರೆ ಅದು ತಿರಸ್ಕೃತವಾಗಿದೆ."

ಉಮರ್ ಬಿನ್ ಖತ್ತಾಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಂದು ದಿನ ನಾವು ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿ ಕುಳಿತಿದ್ದೆವು. ಆಗ ಶುಭ್ರ ಬಿಳಿ ಬಣ್ಣದ ಬಟ್ಟೆ ಧರಿಸಿದ ಮತ್ತು ಕಡುಗಪ್ಪು ಕೂದಲನ್ನು ಹೊಂದಿದ್ದ ಒಬ್ಬ ವ್ಯಕ್ತಿ ಅಲ್ಲಿಗೆ ಬಂದರು. ಅವರಲ್ಲಿ ಪ್ರಯಾಣದ ಯಾವುದೇ ಕುರುಹು ಗೋಚರಿಸುತ್ತಿರಲಿಲ್ಲ. ನಮ್ಮಲ್ಲಿ ಯಾರಿಗೂ ಅವರ ಪರಿಚಯವಿರಲಿಲ್ಲ. ಎಲ್ಲಿಯವರೆಗೆಂದರೆ ಅವರು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿ ಬಂದು (ಎರಡು ಕಾಲುಗಳನ್ನು ಮಡಚಿಟ್ಟು), ತಮ್ಮ ಮೊಣಕಾಲನ್ನು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮೊಣಕಾಲಿಗೆ ತಾಗಿಸಿ ಕುಳಿತರು. ನಂತರ ತಮ್ಮ ಕೈಯನ್ನು ತೊಡೆಯ ಮೇಲಿಟ್ಟು ಹೇಳಿದರು: "ಓ ಮುಹಮ್ಮದ್! ನನಗೆ ಇಸ್ಲಾಮಿನ ಬಗ್ಗೆ ತಿಳಿಸಿಕೊಡಿ." ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಇಸ್ಲಾಮ್ ಎಂದರೆ ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ ಮತ್ತು ಮುಹಮ್ಮದ್ ಅಲ್ಲಾಹನ ಸಂದೇಶವಾಹಕರು ಎಂದು ಸಾಕ್ಷ್ಯವಹಿಸುವುದು, ನಮಾಝ್ ಸಂಸ್ಥಾಪಿಸುವುದು, ಝಕಾತ್ ನೀಡುವುದು, ರಮದಾನ್ ತಿಂಗಳಲ್ಲಿ ಉಪವಾಸ ಆಚರಿಸುವುದು ಮತ್ತು ಕಅಬಾಲಯಕ್ಕೆ ತಲುಪುವ ಸಾಮರ್ಥ್ಯವಿದ್ದರೆ ಕಅಬಾಲಯಕ್ಕೆ ಹಜ್ಜ್ ನಿರ್ವಹಿಸುವುದು." ಆ ವ್ಯಕ್ತಿ ಹೇಳಿದರು: "ನೀವು ಹೇಳಿದ್ದು ಸತ್ಯ." ಆ ವ್ಯಕ್ತಿ ಪ್ರಶ್ನೆ ಕೇಳಿ ನಂತರ ಅದನ್ನು ಸತ್ಯವೆಂದು ದೃಢೀಕರಿಸುವುದನ್ನು ನೋಡಿ ನಮಗೆ ಅಚ್ಚರಿಯಾಯಿತು! ಅವರು ಹೇಳಿದರು: "ನನಗೆ ಈಮಾನ್‌ನ ಬಗ್ಗೆ ತಿಳಿಸಿಕೊಡಿ." ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಉತ್ತರಿಸಿದರು: "ಈಮಾನ್ ಎಂದರೆ ಅಲ್ಲಾಹನಲ್ಲಿ, ಅವನ ದೇವದೂತರಲ್ಲಿ, ಅವನ ಗ್ರಂಥಗಳಲ್ಲಿ, ಅವನ ಸಂದೇಶವಾಹಕರುಗಳಲ್ಲಿ, ಅಂತ್ಯದಿನದಲ್ಲಿ ಮತ್ತು ವಿಧಿಯಲ್ಲಿ — ಅದರ ಒಳಿತು ಮತ್ತು ಕೆಡುಕುಗಳಲ್ಲಿ — ವಿಶ್ವಾಸವಿಡುವುದು." ಆ ವ್ಯಕ್ತಿ ಹೇಳಿದರು: "ನೀವು ಹೇಳಿದ್ದು ಸತ್ಯ." ಆ ವ್ಯಕ್ತಿ ಹೇಳಿದರು: "ನನಗೆ ಇಹ್ಸಾನ್‌ನ ಬಗ್ಗೆ ತಿಳಿಸಿಕೊಡಿ." ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಉತ್ತರಿಸಿದರು: "ಇಹ್ಸಾನ್ ಎಂದರೆ ನೀವು ಅಲ್ಲಾಹನನ್ನು ನೋಡುತ್ತಿರುವಂತೆ ಅವನನ್ನು ಆರಾಧಿಸುವುದು. ನೀವು ಅವನನ್ನು ನೋಡುವುದಿಲ್ಲವಾದರೂ ಅವನು ನಿಮ್ಮನ್ನು ನೋಡುತ್ತಿದ್ದಾನೆ." ಆ ವ್ಯಕ್ತಿ ಹೇಳಿದರು: "ನನಗೆ ಪ್ರಳಯದ ಬಗ್ಗೆ ತಿಳಿಸಿಕೊಡಿ." ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಉತ್ತರಿಸಿದರು: "ಪ್ರಳಯದ ಬಗ್ಗೆ ಪ್ರಶ್ನೆ ಕೇಳಲಾದವರಿಗೆ ಪ್ರಶ್ನೆ ಕೇಳಿದವರಿಗಿಂತಲೂ ಹೆಚ್ಚು ಜ್ಞಾನವಿಲ್ಲ." ಆ ವ್ಯಕ್ತಿ ಹೇಳಿದರು: "ಹಾಗಾದರೆ, ನನಗೆ ಅದರ ಚಿಹ್ನೆಗಳ ಬಗ್ಗೆ ತಿಳಿಸಿಕೊಡಿ." ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ದಾಸಿ ತನ್ನ ಒಡತಿಗೆ ಜನ್ಮ ನೀಡುವುದು ಮತ್ತು ನಗ್ನ ಪಾದಗಳ ಹಾಗೂ ನಗ್ನ ದೇಹಗಳ ಬಡ ಕುರಿಗಾಹಿಗಳು ಗಗನಚುಂಬಿ ಕಟ್ಟಡಗಳನ್ನು ಕಟ್ಟುವುದರಲ್ಲಿ ಪರಸ್ಪರ ಅಹಂಭಾವಪಡುವುದು ಅದರ ಚಿಹ್ನೆಗಳಾಗಿವೆ." ನಂತರ ಆ ವ್ಯಕ್ತಿ ಹೊರಟುಹೋದರು. ನಾನು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿ ಸ್ವಲ್ಪ ಹೊತ್ತು ಕುಳಿತುಕೊಂಡೆ. ನಂತರ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದರು: "ಓ ಉಮರ್! ಪ್ರಶ್ನೆ ಕೇಳಿದ ವ್ಯಕ್ತಿ ಯಾರೆಂದು ತಮಗೆ ತಿಳಿದಿದೆಯೇ?" ನಾನು ಹೇಳಿದೆ: "ಅಲ್ಲಾಹು ಮತ್ತು ಅವನ ಸಂದೇಶವಾಹಕರೇ ಹೆಚ್ಚು ಬಲ್ಲವರು." ಅವರು ಹೇಳಿದರು: "ಅವರು ಜಿಬ್ರೀಲ್. ನಿಮಗೆ ನಿಮ್ಮ ಧರ್ಮವನ್ನು ಕಲಿಸಲು ಅವರು ನಿಮ್ಮ ಬಳಿಗೆ ಬಂದಿದ್ದರು."

ಅಬ್ದುಲ್ಲಾ ಬಿನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಇಸ್ಲಾಂ ಧರ್ಮವನ್ನು ಐದು (ಸ್ತಂಭಗಳ) ಮೇಲೆ ನಿರ್ಮಿಸಲಾಗಿದೆ. ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ ಮತ್ತು ಮುಹಮ್ಮದ್ ಅಲ್ಲಾಹನ ದಾಸರು ಮತ್ತು ಸಂದೇಶವಾಹಕರು ಎಂದು ಸಾಕ್ಷ್ಯ ವಹಿಸುವುದು, ನಮಾಝ್ ಸಂಸ್ಥಾಪಿಸುವುದು, ಝಕಾತ್ ನೀಡುವುದು, ಹಜ್ಜ್ ನಿರ್ವಹಿಸುವುದು ಮತ್ತು ರಮದಾನ್ ತಿಂಗಳಲ್ಲಿ ಉಪವಾಸ ಆಚರಿಸುವುದು."

ಮುಆದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಮ್ಮೆ ಉಫೈರ್ ಎಂಬ ಹೆಸರಿನ ಒಂದು ಕತ್ತೆಯ ಮೇಲೆ ನಾನು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹಿಂದೆ ಕುಳಿತು ಪ್ರಯಾಣ ಮಾಡುತ್ತಿದ್ದೆ. ಆಗ ಅವರು ಹೇಳಿದರು: "ಓ ಮುಆದ್! ದಾಸರ ಮೇಲಿರುವ ಅಲ್ಲಾಹನ ಹಕ್ಕು ಏನೆಂದು ಮತ್ತು ಅಲ್ಲಾಹನ ಮೇಲಿರುವ ದಾಸರ ಹಕ್ಕು ಏನೆಂದು ನಿನಗೆ ತಿಳಿದಿದೆಯೇ?" ನಾನು ಹೇಳಿದೆ: "ಅಲ್ಲಾಹು ಮತ್ತು ಅವನ ಸಂದೇಶವಾಹಕರೇ ಹೆಚ್ಚು ತಿಳಿದವರು." ಅವರು ಹೇಳಿದರು: "ಅಲ್ಲಾಹನನ್ನು ಮಾತ್ರ ಆರಾಧಿಸುವುದು ಹಾಗೂ ಅವನೊಂದಿಗೆ ಏನನ್ನೂ ಸಹಭಾಗಿತ್ವ (ಶಿರ್ಕ್) ಮಾಡದಿರುವುದು ದಾಸರ ಮೇಲಿರುವ ಅಲ್ಲಾಹನ ಹಕ್ಕಾಗಿದೆ. ತನ್ನೊಂದಿಗೆ ಏನನ್ನೂ ಸಹಭಾಗಿತ್ವ (ಶಿರ್ಕ್) ಮಾಡದವರನ್ನು ಶಿಕ್ಷಿಸದಿರುವುದು ಅಲ್ಲಾಹನ ಮೇಲಿರುವ ದಾಸರ ಹಕ್ಕಾಗಿದೆ." ನಾನು ಕೇಳಿದೆ: "ಓ ಅಲ್ಲಾಹನ ಸಂದೇಶವಾಹಕರೇ! ನಾನು ಜನರಿಗೆ ಈ ಸಿಹಿಸುದ್ದಿಯನ್ನು ತಿಳಿಸಲೇ?" ಅವರು ಉತ್ತರಿಸಿದರು: "ಬೇಡ, ಅವರಿಗೆ ಸಿಹಿ ಸುದ್ದಿ ತಿಳಿಸಬೇಡ. ಅವರು ಅದರ ಮೇಲೆ ಅವಲಂಬಿತರಾಗಬಹುದು."

ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಒಮ್ಮೆ ಮುಆದ್ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹಿಂಭಾಗದಲ್ಲಿ ಕುಳಿತು ಪ್ರಯಾಣ ಮಾಡುತ್ತಿದ್ದಾಗ ಅವರು ಕರೆದರು: "ಓ ಮುಆದ್ ಬಿನ್ ಜಬಲ್!" ಮುಆದ್ ಉತ್ತರಿಸಿದರು: "ಓ ಅಲ್ಲಾಹನ ಸಂದೇಶವಾಹಕರೇ! ನಿಮ್ಮ ಸೇವೆ ಮಾಡಲು ನಾನಿಲ್ಲಿದ್ದೇನೆ." ಅವರು ಕರೆದರು: "ಓ ಮುಆದ್!" ಮುಆದ್ ಉತ್ತರಿಸಿದರು: "ಓ ಅಲ್ಲಾಹನ ಸಂದೇಶವಾಹಕರೇ! ನಿಮ್ಮ ಸೇವೆ ಮಾಡಲು ನಾನಿಲ್ಲಿದ್ದೇನೆ." ಹೀಗೆ ಅವರು ಮೂರು ಬಾರಿ ಕರೆದರು. ನಂತರ ಹೇಳಿದರು: "ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ ಮತ್ತು ಮುಹಮ್ಮದ್ ಅಲ್ಲಾಹನ ಸಂದೇಶವಾಹಕರಾಗಿದ್ದಾರೆ ಎಂದು ಯಾರು ತನ್ನ ಹೃದಯದಿಂದ ಪ್ರಾಮಾಣಿಕವಾಗಿ ಸಾಕ್ಷಿ ವಹಿಸುತ್ತಾನೋ ಅವನನ್ನು ಅಲ್ಲಾಹು ನರಕಾಗ್ನಿಗೆ ನಿಷಿದ್ಧಗೊಳಿಸದೇ ಇರಲಾರ." ಮುಆದ್ ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಜನರಿಗೆ ಸಂತೋಷವಾಗುವ ಈ ಸುದ್ದಿಯನ್ನು ನಾನು ಅವರಿಗೆ ತಿಳಿಸಲೇ?" ಅವರು ಹೇಳಿದರು: "ಬೇಡ, ಅವರು ಅದರ ಮೇಲೆ ಅವಲಂಬಿತರಾಗುವರು." (ಜ್ಞಾನವನ್ನು ಬಚ್ಚಿಟ್ಟ) ಪಾಪಕ್ಕೆ ಗುರಿಯಾಗದಿರಲು ಮುಆದ್ ಮರಣದ ಸಮಯದಲ್ಲಿ ಇದನ್ನು ಜನರಿಗೆ ತಿಳಿಸಿದರು.

ತಾರಿಕ್ ಬಿನ್ ಅಶೀಮ್ ಅಶ್ಜಈ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಯಾರು ಅಲ್ಲಾಹನ ಹೊರತು ಆರಾಧಿಸಲು ಅರ್ಹರಾದ ಅನ್ಯ ಆರಾಧ್ಯರಿಲ್ಲ ಎಂದು ಹೇಳುತ್ತಾರೋ ಮತ್ತು ಅಲ್ಲಾಹನ ಹೊರತಾಗಿ ಆರಾಧಿಸಲಾಗುವ ಎಲ್ಲವನ್ನೂ ನಿಷೇಧಿಸುತ್ತಾರೋ, ಅವರ ಆಸ್ತಿ ಮತ್ತು ಪ್ರಾಣವು ಪವಿತ್ರವಾಗಿವೆ. ಅವರನ್ನು ವಿಚಾರಣೆ ಮಾಡುವ ಹೊಣೆ ಅಲ್ಲಾಹನದ್ದಾಗಿದೆ."

ಜಾಬಿರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಒಬ್ಬ ವ್ಯಕ್ತಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! (ಸ್ವರ್ಗ ಮತ್ತು ನರಕವನ್ನು) ಕಡ್ಡಾಯಗೊಳಿಸುವ ಎರಡು ವಿಷಯಗಳು ಯಾವುವು?" ಅವರು ಉತ್ತರಿಸಿದರು: "ಅಲ್ಲಾಹನೊಡನೆ ಸಹಭಾಗಿತ್ವ (ಶಿರ್ಕ್) ಮಾಡದ ಸ್ಥಿತಿಯಲ್ಲಿ ನಿಧನರಾಗುವವರು ಸ್ವರ್ಗವನ್ನು ಪ್ರವೇಶಿಸುತ್ತಾರೆ; ಮತ್ತು ಅಲ್ಲಾಹನೊಡನೆ ಸಹಭಾಗಿತ್ವ ಮಾಡಿದ ಸ್ಥಿತಿಯಲ್ಲಿ ನಿಧನರಾಗುವವರು ನರಕವನ್ನು ಪ್ರವೇಶಿಸುತ್ತಾರೆ."

ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಒಂದು ಮಾತನ್ನು ಹೇಳಿದರು ಮತ್ತು ನಾನು ಇನ್ನೊಂದು ಮಾತನ್ನು ಹೇಳಿದೆ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಯಾರು ಅಲ್ಲಾಹನ ಹೊರತಾಗಿ ಬೇರೆಯವರನ್ನು ಪ್ರಾರ್ಥಿಸುವ ಸ್ಥಿತಿಯಲ್ಲಿ ಸಾವನ್ನಪ್ಪುತ್ತಾರೋ ಅವರು ನರಕವನ್ನು ಪ್ರವೇಶಿಸುವರು.” [ಬುಖಾರಿ]. ನಾನು ಹೇಳಿದೆ: "ಯಾರು ಅಲ್ಲಾಹನ ಹೊರತಾಗಿ ಬೇರೆಯವರನ್ನು ಪ್ರಾರ್ಥಿಸದ ಸ್ಥಿತಿಯಲ್ಲಿ ಸಾವನ್ನಪ್ಪುತ್ತಾರೋ ಅವರು ಸ್ವರ್ಗವನ್ನು ಪ್ರವೇಶಿಸುವರು."

ಇಬ್ನ್ ಅಬ್ಬಾಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಮುಆದ್ ಬಿನ್ ಜಬಲ್‌ರನ್ನು ಯಮನ್‌ಗೆ ಕಳುಹಿಸುವಾಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ನಿಶ್ಚಯವಾಗಿಯೂ ನೀವು ಗ್ರಂಥದವರ ಬಳಿಗೆ ಹೋಗುತ್ತಿದ್ದೀರಿ. ಆದ್ದರಿಂದ ನೀವು ಅವರ ಬಳಿಗೆ ಹೋದರೆ, ಅವರನ್ನು “ಅಲ್ಲಾಹನ ಹೊರತು ಆರಾಧನೆಗೆ ಯಾರೂ ಅರ್ಹರಲ್ಲ ಮತ್ತು ನಾನು ಅಲ್ಲಾಹನ ಸಂದೇಶವಾಹಕನಾಗಿದ್ದೇನೆಂದು” ಸಾಕ್ಷಿ ವಹಿಸಲು ಆಹ್ವಾನಿಸಿರಿ. ಅವರು ನಿಮ್ಮ ಮಾತನ್ನು ಅನುಸರಿಸಿದರೆ, ಅಲ್ಲಾಹು ಅವರ ಮೇಲೆ ಹಗಲು ರಾತ್ರಿಯಲ್ಲಿ ಐದು ನಮಾಝ್‌ಗಳನ್ನು ಕಡ್ಡಾಯಗೊಳಿಸಿದ್ದಾನೆಂದು ತಿಳಿಸಿರಿ. ಅವರು ಅದನ್ನೂ ಅನುಸರಿಸಿದರೆ, ಅಲ್ಲಾಹನು ಅವರ ಮೇಲೆ ಝಕಾತನ್ನು ಕಡ್ಡಾಯಗೊಳಿಸಿದ್ದಾನೆಂದು ಹೇಳಿರಿ. ಅದು ಅವರಲ್ಲಿರುವ ಶ್ರೀಮಂತರಿಂದ ತೆಗೆದು ಅವರಲ್ಲಿರುವ ಬಡವರಿಗೆ ನೀಡಲಾಗುತ್ತದೆ. ಅವರು ಅದನ್ನೂ ಅನುಸರಿಸಿದರೆ, ಅವರ ಅತ್ಯುತ್ತಮ ಸಂಪತ್ತಿನ ಬಗ್ಗೆ ಎಚ್ಚರ ವಹಿಸಿರಿ. (ಅದನ್ನು ವಶಪಡಿಸಬೇಡಿ). ಅನ್ಯಾಯಕ್ಕೊಳಗಾದವನ ಪ್ರಾರ್ಥನೆಯನ್ನು ಭಯಪಡಿರಿ. ಏಕೆಂದರೆ ಅದರ ಮತ್ತು ಅಲ್ಲಾಹನ ನಡುವೆ ಯಾವುದೇ ಪರದೆ ಇರುವುದಿಲ್ಲ.”

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: “ಓ ಅಲ್ಲಾಹನ ಸಂದೇಶವಾಹಕರೇ! ಜನರ ಪೈಕಿ ಪುನರುತ್ಥಾನ ದಿನ ತಮ್ಮ ಶಿಫಾರಸ್ಸನ್ನು ಪಡೆಯುವ ಅತ್ಯಂತ ಸೌಭಾಗ್ಯವಂತನು ಯಾರು?” ಎಂದು ಕೇಳಲಾಯಿತು. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಓ ಅಬೂಹುರೈರ! ಹದೀಸಿನ ಬಗ್ಗೆ ತಮಗಿರುವ ಆಸಕ್ತಿಯನ್ನು ಕಂಡು ತಮಗಿಂತ ಮೊದಲು ಯಾರೂ ಈ ಹದೀಸಿನ ಬಗ್ಗೆ ಕೇಳಲಾರರು ಎಂದು ನಾನು ಭಾವಿಸಿದ್ದೆ. ಪುನರುತ್ಥಾನ ದಿನ ಜನರ ಪೈಕಿ ನನ್ನ ಶಿಫಾರಸ್ಸನ್ನು ಪಡೆಯುವ ಅತ್ಯಂತ ಸೌಭಾಗ್ಯವಂತನು ಯಾರೆಂದರೆ, ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯರಿಲ್ಲ ಎಂದು ತನ್ನ ಹೃದಯ ಮತ್ತು ಮನಸ್ಸಿನಿಂದ ನಿಷ್ಕಳಂಕವಾಗಿ ಹೇಳಿದವನು.”

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸತ್ಯವಿಶ್ವಾಸವು (ಈಮಾನ್) ಎಪ್ಪತ್ತಕ್ಕಿಂತಲೂ — ಅಥವಾ ಅರುವತ್ತಕ್ಕಿಂತಲೂ — ಹೆಚ್ಚು ಶಾಖೆಗಳನ್ನು ಹೊಂದಿದೆ. 'ಲಾ ಇಲಾಹ ಇಲ್ಲಲ್ಲಾಹ್' ಎಂಬ ವಚನವು ಅತಿಶ್ರೇಷ್ಠ ಶಾಖೆಯಾಗಿದೆ ಮತ್ತು ರಸ್ತೆಯಿಂದ ಅಡ್ಡಿಗಳನ್ನು ನಿವಾರಿಸುವುದು ಅತ್ಯಂತ ಕೆಳಗಿನ ಶಾಖೆಯಾಗಿದೆ. ಸಂಕೋಚವು ಸತ್ಯವಿಶ್ವಾಸದ ಒಂದು ಶಾಖೆಯಾಗಿದೆ."