ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ವಾರಕ್ಕೊಮ್ಮೆ...
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ತಿಳಿಸುವುದೇನೆಂದರೆ, ಪ್ರತಿ ಏಳು ದಿನಗಳಿಗೊಮ್ಮೆ ಸ್ನಾನ ಮಾಡುವುದು ಪ್ರತಿಯೊಬ್ಬ ಪ್ರೌಢ, ಬುದ್ಧಿಯಿರುವ ಮುಸಲ...
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಐದು ಕಾರ್...
ಇಸ್ಲಾಂ ಧರ್ಮದಲ್ಲಿ ಮತ್ತು ಪ್ರವಾದಿಗಳ ಚರ್ಯೆಯಲ್ಲಿ ಸೇರಿದ ಐದು ಕಾರ್ಯಗಳನ್ನು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ವಿವರಿಸಿದ್ದಾರೆ:
ಮೊದಲನೆಯ...
ಅಲಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ನಾನು ಅತ್ಯಧಿಕ ಮದಿ (ಸ್ಖಲನಪೂರ್ವ ದ್ರವ) ಸ್ರವಿಸುವ ವ್ಯಕ್ತಿಯಾಗಿದ್ದೆ. ಪ್ರವಾದಿಯವರ (ಅವರ ಮೇಲೆ ಅಲ್ಲಾ...
ಅಲಿ ಬಿನ್ ಅಬೂತಾಲಿಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರವರು ಇಲ್ಲಿ ತಿಳಿಸುವುದೇನೆಂದರೆ, ಅವರು ಅತ್ಯಧಿಕ ಮದಿ (ಕಾಮೋದ್ರೇಕವಾಗುವಾಗ ಅಥವಾ ಸ್ಖಲನಕ್ಕೆ ಮೊದಲು ಹೊರಬರುವ ತೆಳುವ...
ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ದೊಡ್ಡ...
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ದೊಡ್ಡ ಅಶುದ್ಧಿಯಿಂದಾಗಿ ಸ್ನಾನ ಮಾಡಲು ಬಯಸಿದರೆ, ಮೊದಲು ಕೈಗಳನ್ನು ತೊಳೆಯುತ್ತಿದ್ದರು ನಂತರ ನಮಾಝಿಗೆ ವುದೂ ಮಾಡುವಂ...
ಅಮ್ಮಾರ್ ಬಿನ್ ಯಾಸಿರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನನ್ನನ್ನು ಒಂ...
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅಮ್ಮಾರ್ ಬಿನ್ ಯಾಸಿರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರನ್ನು ಯಾವುದೋ ಅಗತ್ಯಕ್ಕಾಗಿ ಯಾತ್ರೆ ಕಳುಹಿಸಿದರು....
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ವಾರಕ್ಕೊಮ್ಮೆ ತಲೆ ಮತ್ತು ದೇಹವನ್ನು ತೊಳೆಯುವ ಮೂಲಕ ಸ್ನಾನ ಮಾಡುವುದು ಪ್ರತಿಯೊಬ್ಬ ಮುಸಲ್ಮಾನನ ಕರ್ತವ್ಯವಾಗಿದೆ."
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಐದು ಕಾರ್ಯಗಳು ಫಿತ್ರ (ಸಹಜ ಮನೋಧರ್ಮ) ದ ಭಾಗವಾಗಿವೆ: ಸುನ್ನತಿ ಮಾಡುವುದು, ಗುಹ್ಯಭಾಗದ ರೋಮವನ್ನು ಬೋಳಿಸುವುದು, ಮೀಸೆ ಕಿರಿದಾಗಿಸುವುದು, ಉಗುರುಗಳನ್ನು ಕತ್ತರಿಸುವುದು ಮತ್ತು ಕಂಕುಳದ ರೋಮವನ್ನು ಕೀಳುವುದು."
ಅಲಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ನಾನು ಅತ್ಯಧಿಕ ಮದಿ (ಸ್ಖಲನಪೂರ್ವ ದ್ರವ) ಸ್ರವಿಸುವ ವ್ಯಕ್ತಿಯಾಗಿದ್ದೆ. ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮಗಳಿಗಿರುವ ಸ್ಥಾನಮಾನದಿಂದ ನಾನು ಅವರಲ್ಲಿ ಅದರ ಬಗ್ಗೆ ಕೇಳಲು ಸಂಕೋಚಪಡುತ್ತಿದ್ದೆ. ಆದ್ದರಿಂದ, ನಾನು ಮಿಕ್ದಾದ್ ಬಿನ್ ಅಸ್ವದ್ ರಿಗೆ ಆಜ್ಞಾಪಿಸಿದೆ. ಅವರು (ಅದರ ಬಗ್ಗೆ) ಕೇಳಿದಾಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಉತ್ತರಿಸಿದರು: ಅವರು ತಮ್ಮ ಜನನಾಂಗವನ್ನು ತೊಳೆದು ವುದೂ (ಅಂಗಸ್ನಾನ) ನಿರ್ವಹಿಸಲಿ."
ಬುಖಾರಿಯಲ್ಲಿರುವ ವರದಿಯಲ್ಲಿ ಹೀಗಿದೆ: "ಅವರು ಉತ್ತರಿಸಿದರು: ನೀವು ವುದೂ ನಿರ್ವಹಿಸಿರಿ ಮತ್ತು ನಿಮ್ಮ ಜನನಾಂಗವನ್ನು ತೊಳೆಯಿರಿ."
ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ದೊಡ್ಡ ಅಶುದ್ಧಿಯಿಂದಾಗಿ (ಜನಾಬತ್) ಸ್ನಾನ ಮಾಡುವಾಗ, ಮೊದಲು ಕೈಗಳನ್ನು ತೊಳೆದು, ನಂತರ ನಮಾಝ್‌ಗಾಗಿ ವುದೂ (ಅಂಗಸ್ನಾನ) ಮಾಡುವಂತೆ ವುದೂ ಮಾಡುತ್ತಿದ್ದರು. ನಂತರ ಅವರು ಸ್ನಾನ ಮಾಡುತ್ತಿದ್ದರು. ನಂತರ ಅವರು ನೀರು ಕೂದಲಿನ ಬುಡದಲ್ಲಿರುವ ಚರ್ಮಕ್ಕೆ ತಲುಪಿದೆಯೆಂದು ಖಾತ್ರಿಯಾಗುವ ತನಕ ಕೈಬೆರಳುಗಳನ್ನು ಕೂದಲುಗಳ ಒಳಗೆ ತೂರಿಸಿ ತೊಳೆಯುತ್ತಿದ್ದರು. ನಂತರ ದೇಹದ ಮೇಲೆ ಮೂರು ಬಾರಿ ನೀರು ಸುರಿಯುತ್ತಿದ್ದರು. ನಂತರ ದೇಹದ ಉಳಿದ ಭಾಗಗಳನ್ನು ತೊಳೆಯುತ್ತಿದ್ದರು." ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ಹೇಳುತ್ತಾರೆ: "ನಾನು ಮತ್ತು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಒಬ್ಬರ ನಂತರ ಒಬ್ಬರು ನೀರು ಸೇದುತ್ತಾ ಒಂದೇ ನೀರಿನ ಪಾತ್ರೆಯಿಂದ ಸ್ನಾನ ಮಾಡುತ್ತಿದ್ದೆವು."
ಅಮ್ಮಾರ್ ಬಿನ್ ಯಾಸಿರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನನ್ನನ್ನು ಒಂದು ಕಾರ್ಯಕ್ಕೆ ಕಳುಹಿಸಿದರು. ಆಗ ನನಗೆ ಜನಾಬತ್ (ದೊಡ್ಡ ಅಶುದ್ಧಿ) ಉಂಟಾಯಿತು. ನನಗೆ ನೀರು ಸಿಗಲಿಲ್ಲ. ಆದ್ದರಿಂದ ಪ್ರಾಣಿಯು ಹೊರಳಾಡುವಂತೆ ನಾನು ಮಣ್ಣಿನಲ್ಲಿ ಹೊರಳಾಡಿದೆ. ನಂತರ ನಾನು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು ನಡೆದ ಸಂಗತಿಯನ್ನು ತಿಳಿಸಿದೆ. ಅವರು ಹೇಳಿದರು: "ನೀನು ನಿನ್ನ ಕೈಗಳಿಂದ ಹೀಗೆ ಮಾಡಿದರೆ ನಿನಗೆ ಸಾಕಾಗುತ್ತಿತ್ತು." ನಂತರ ಅವರು ತಮ್ಮ ಕೈಗಳಿಂದ ಒಂದು ಬಾರಿ ನೆಲಕ್ಕೆ ಬಡಿದರು. ನಂತರ ಎಡಗೈಯಿಂದ ಬಲಗೈಯನ್ನು, ಎರಡು ಅಂಗೈಗಳ ಹೊರಭಾಗವನ್ನು ಮತ್ತು ಮುಖವನ್ನು ಸವರಿದರು.
ಮುಗೀರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಮ್ಮೆ ಒಂದು ಯಾತ್ರೆಯಲ್ಲಿ ನಾನು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜೊತೆಯಲ್ಲಿದ್ದೆ. ಆಗ ನಾನು ಅವರ ಪಾದರಕ್ಷೆಗಳನ್ನು ಕಳಚಲು ಮುಂದಾದೆ. ಆಗ ಅವರು ಹೇಳಿದರು: "ಅವುಗಳನ್ನು ಬಿಟ್ಟುಬಿಡಿ. ನಾವು ಅವುಗಳನ್ನು ಶುದ್ಧಿಯಲ್ಲಿದ್ದ ಸ್ಥಿತಿಯಲ್ಲಿ ಧರಿಸಿದ್ದೆ." ನಂತರ ಅವರು ಅವುಗಳ ಮೇಲೆ ಸವರಿದರು.
ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಫಾತಿಮ ಬಿಂತ್ ಅಬೂ ಹುಬೈಶ್ ಪ್ರವಾದಿಯವರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದರು: "ನನಗೆ ನಿರಂತರ ರಕ್ತ ಸ್ರವಿಸುತ್ತದೆ. ಆದ್ದರಿಂದ ನಾನು ಶುದ್ಧಿಯಾಗುವುದೇ ಇಲ್ಲ. ಹಾಗಾಗಿ ನಾನು ನಮಾಝ್ ತೊರೆಯಬೇಕೇ?" ಅವರು ಉತ್ತರಿಸಿದರು: "ಬೇಡ, ಅದು ರಕ್ತನಾಳವಾಗಿದೆ. ಆದರೆ ಸಾಮಾನ್ಯವಾಗಿ ನಿಮಗೆ ಮುಟ್ಟಾಗುವ ಅವಧಿಯಲ್ಲಿ ನಮಾಝ್ ತೊರೆಯಿರಿ, ನಂತರ ಗುಸ್ಲ್ (ಕಡ್ಡಾಯ ಸ್ನಾನ) ನಿರ್ವಹಿಸಿ ನಮಾಝ್ ಮುಂದುವರಿಸಿ."
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮಲ್ಲೊಬ್ಬನಿಗೆ ತನ್ನ ಹೊಟ್ಟೆಯೊಳಗೆ ಏನೋ ಅನುಭವವಾಗಿ, ಅದರಿಂದ ಏನಾದರೂ ಹೊರ ಬಂದಿದೆಯೋ ಇಲ್ಲವೋ ಎಂದು ಸಂಶಯವಾದರೆ, ಸದ್ದು ಕೇಳುವ ತನಕ ಅಥವಾ ವಾಸನೆ ಅನುಭವವಾಗುವ ತನಕ ಅವನು ಮಸೀದಿಯಿಂದ ಹೊರಹೋಗಬಾರದು."
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಾಯಿ ನಿಮ್ಮಲ್ಲೊಬ್ಬರ ಪಾತ್ರೆಯಲ್ಲಿ ಕುಡಿದರೆ, ಅವನು ಅದನ್ನು ಏಳು ಬಾರಿ ತೊಳೆಯಬೇಕಾಗಿದೆ."
ಅಬ್ದುಲ್ಲಾ ಬಿನ್ ಅಮ್ರ್ ಬಿನ್ ಆಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಮುಅಝ್ಝಿನ್ ಅಝಾನ್ ನೀಡುವುದನ್ನು ಕೇಳಿದರೆ, ಅವರು ಹೇಳಿದಂತೆಯೇ ಹೇಳಿರಿ. ನಂತರ ನನ್ನ ಮೇಲೆ ಸಲಾತ್ ಹೇಳಿರಿ. ಏಕೆಂದರೆ ಯಾರು ನನ್ನ ಮೇಲೆ ಒಂದು ಸಲಾತ್ ಹೇಳುತ್ತಾರೋ, ಅಲ್ಲಾಹು ಅವರ ಮೇಲೆ ಹತ್ತು ಸಲಾತ್‌ಗಳನ್ನು ಹೇಳುತ್ತಾನೆ. ನಂತರ ಅಲ್ಲಾಹನಲ್ಲಿ ನನಗಾಗಿ 'ವಸೀಲ'ವನ್ನು ಬೇಡಿರಿ. ಅದು ಸ್ವರ್ಗದಲ್ಲಿರುವ ಒಂದು ಸ್ಥಾನಮಾನವಾಗಿದೆ. ಅದು ಅಲ್ಲಾಹನ ದಾಸರಲ್ಲಿ ಒಬ್ಬರಿಗೆ ಮಾತ್ರ ಸಿಗುತ್ತದೆ. ಅದು ನನಗೆ ಸಿಗಬೇಕೆಂದು ನಾನು ಆಶಿಸುತ್ತೇನೆ. ಯಾರು ನನಗೋಸ್ಕರ 'ವಸೀಲ' ಬೇಡುತ್ತಾರೋ ಅವರಿಗೆ ನನ್ನ ಶಿಫಾರಸ್ಸು ದೊರೆಯುತ್ತದೆ."
ಸಅದ್ ಬಿನ್ ಅಬೂ ವಕ್ಕಾಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಮುಅಝ್ಝಿನ್ (ಅಝಾನ್ ಕರೆ ನೀಡುವವನು) ಕರೆ ನೀಡುವುದನ್ನು ಕೇಳಿದಾಗ, ಯಾರು "ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ, ಅವನು ಏಕೈಕನು ಮತ್ತು ಸಹಭಾಗಿಗಳಿಲ್ಲದವನು, ಮತ್ತು ಮುಹಮ್ಮದ್ ಅವನ ದಾಸರು ಮತ್ತು ಸಂದೇಶವಾಹಕರು ಎಂದು ನಾನು ಸಾಕ್ಷ್ಯ ವಹಿಸುತ್ತೇನೆ, ಪರಿಪಾಲಕನಾಗಿ ಅಲ್ಲಾಹನಲ್ಲಿ, ಸಂದೇಶವಾಹಕರಾಗಿ ಮುಹಮ್ಮದ್‌ರಲ್ಲಿ ಮತ್ತು ಧರ್ಮವಾಗಿ ಇಸ್ಲಾಂನಲ್ಲಿ ನನಗೆ ತೃಪ್ತಿಯಿದೆ ಎಂದು ಹೇಳುತ್ತಾನೋ, ಅವನಿಗೆ ಅವನ ಪಾಪಗಳನ್ನು ಕ್ಷಮಿಸಲಾಗುತ್ತದೆ."