ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಮ್ಮೆ ಒಬ್ಬ ಅಂಧ ವ್ಯಕ್ತಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬ...
ಒಮ್ಮೆ ಒಬ್ಬ ಅಂಧ ವ್ಯಕ್ತಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಐದು ವೇಳೆಯ ನಮಾಝ್‌ಗಳಿಗೆ ನನ್ನ ಕೈ ಹ...
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ಅವರು...
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ಪ್ರತಿ ದಿನ-ರಾತ್ರಿ ನಿರ್ವಹಿಸುವ ಐದು ವೇಳೆಯ ನಮಾಝ್‌ಗಳನ್ನು ಮತ್ತು ಅದು ಸಣ್ಣ ಪಾಪಗಳನ್ನು ಮತ್ತು ದೋಷಗಳನ್ನು...
ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ನಾನು ಪ್ರವಾದಿ(ಸ) ರೊಂದಿಗೆ ಕೇಳಿದೆ: “ಅಲ್ಲಾಹು ಅತ್ಯಂತ ಇಷ್ಟಪಡುವ ಕರ್ಮ ಯಾವುದು?...
ಪ್ರವಾದಿಯವರೊಡನೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) “ಅಲ್ಲಾಹು ಅತ್ಯಂತ ಇಷ್ಟಪಡುವ ಕರ್ಮ ಯಾವುದು?” ಎಂದು ಕೇಳಲಾಯಿತು. ಆಗ ಅವರು ಉತ್ತರಿಸಿದರು: "ಅಲ್ಲಾಹು ನಿಗದಿಗೊಳಿ...
ಉಸ್ಮಾನ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕ...
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ವಿವರಿಸುವುದೇನೆಂದರೆ, ಒಬ್ಬ ಮುಸಲ್ಮಾನನು ಕಡ್ಡಾಯ ನಮಾಝ್‌ನ ಸಮಯವಾದಾಗ, ಅತ್ಯುತ್ತಮ ರೂಪದಲ್ಲಿ ಪೂರ್ಣವಾಗಿ ವು...
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುತ್ತಿದ್ದರು: “ಐದು ವೇಳೆಯ ನಮಾಝ...
ಹಗಲು-ರಾತ್ರಿಯಲ್ಲಿ ಕಡ್ಡಾಯವಾಗಿರುವ ಐದು ವೇಳೆಯ ನಮಾಝ್‌ಗಳು, ಪ್ರತಿ ಶುಕ್ರವಾರ ನಿರ್ವಹಿಸುವ ಜುಮುಅ ನಮಾಝ್, ಪ್ರತಿ ವರ್ಷ ರಮದಾನ್ ತಿಂಗಳಲ್ಲಿ ಆಚರಿಸುವ ಉಪವಾಸಗಳು, ಅವುಗಳ ನಡುವೆ ಸ...

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಮ್ಮೆ ಒಬ್ಬ ಅಂಧ ವ್ಯಕ್ತಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ನನಗೆ ಮಸೀದಿಗೆ ಬರಲು ದಾರಿ ತೋರಿಸುವವರು ಯಾರೂ ಇಲ್ಲ." ನಂತರ ಮನೆಯಲ್ಲೇ ನಮಾಝ್ ನಿರ್ವಹಿಸಲು ರಿಯಾಯಿತಿ ನೀಡಬೇಕೆಂದು ಅವರು ಪ್ರವಾದಿಯವರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ವಿನಂತಿಸಿದರು. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅವರಿಗೆ ರಿಯಾಯಿತಿ ನೀಡಿದರು. ಆ ವ್ಯಕ್ತಿ ಹೊರಡುವಾಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅವರನ್ನು ಕರೆದು ಕೇಳಿದರು: "ತಮಗೆ ನಮಾಝ್‌ಗೆ ಕರೆಯುವ ಅಝಾನ್ ಕೇಳುತ್ತದೆಯೇ?" ಆ ವ್ಯಕ್ತಿ ಹೌದು ಎಂದಾಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಹಾಗಾದರೆ ನೀವು ಅದಕ್ಕೆ ಉತ್ತರ ನೀಡಬೇಕು."

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ಅವರು ಕೇಳಿದ್ದರು: "ನೀವು ಆಲೋಚಿಸಿ ನೋಡಿದ್ದೀರಾ! ನಿಮ್ಮಲ್ಲೊಬ್ಬನ ಮನೆಯ ಬಾಗಿಲಿನ ಬಳಿ ಒಂದು ನದಿ ಹರಿಯುತ್ತಿದ್ದು, ಅವನು ಅದರಲ್ಲಿ ಪ್ರತಿ ದಿನ ಐದು ಬಾರಿ ಸ್ನಾನ ಮಾಡುತ್ತಿದ್ದರೆ, ಅವನಲ್ಲಿ ಏನಾದರೂ ಕೊಳೆ ಉಳಿಯಬಹುದೇ?" ಅವರು ಉತ್ತರಿಸಿದರು: "ಅವನ ದೇಹದಲ್ಲಿ ಯಾವುದೇ ಕೊಳೆ ಉಳಿಯಲಾರದು." ಅವರು (ಪ್ರವಾದಿ) ಹೇಳಿದರು: "ಅದು ಐದು ವೇಳೆಯ ನಮಾಝಿನ ಉದಾಹರಣೆಯಾಗಿದೆ. ಅದರ ಮೂಲಕ ಅಲ್ಲಾಹು ಪಾಪಗಳನ್ನು ಅಳಿಸುತ್ತಾನೆ."

ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ನಾನು ಪ್ರವಾದಿ(ಸ) ರೊಂದಿಗೆ ಕೇಳಿದೆ: “ಅಲ್ಲಾಹು ಅತ್ಯಂತ ಇಷ್ಟಪಡುವ ಕರ್ಮ ಯಾವುದು?” ಅವರು ಉತ್ತರಿಸಿದರು: “ನಮಾಝನ್ನು ಅದರ ಸಮಯದಲ್ಲಿ ನಿರ್ವಹಿಸುವುದು.” ನಾನು ಕೇಳಿದೆ: “ನಂತರ ಯಾವುದು?” ಅವರು ಉತ್ತರಿಸಿದರು: “ನಂತರ ಮಾತಾಪಿತರಿಗೆ ಒಳಿತು ಮಾಡುವುದು.” ನಾನು ಕೇಳಿದೆ: “ನಂತರ ಯಾವುದು?” ಅವರು ಉತ್ತರಿಸಿದರು: “ಅಲ್ಲಾಹನ ಮಾರ್ಗದಲ್ಲಿ ಜಿಹಾದ್ ಮಾಡುವುದು.” ಇಬ್ನ್ ಮಸ್‌ಊದ್ ಹೇಳುತ್ತಾರೆ: "ಇವೆಲ್ಲವೂ ಅವರು ತಿಳಿಸಿದ್ದಾಗಿದೆ. ಒಂದು ವೇಳೆ ನಾನು ಇನ್ನೂ ಕೇಳುತ್ತಾ ಹೋದರೆ ಅವರು ಇನ್ನೂ ಉತ್ತರಿಸುತ್ತಿದ್ದರು."

ಉಸ್ಮಾನ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಒಬ್ಬ ಮುಸಲ್ಮಾನನು ಕಡ್ಡಾಯ ನಮಾಝ್‌ನ ಸಮಯವಾದಾಗ ಸರಿಯಾಗಿ ವುದೂ ನಿರ್ವಹಿಸಿ, ಪೂರ್ಣ ಭಕ್ತಿಯಿಂದ ಮತ್ತು ರುಕೂ (ಬಾಗುವುದು) ಅನ್ನು ಸರಿಯಾಗಿ ಪೂರ್ಣಗೊಳಿಸುತ್ತಾ ನಮಾಝ್ ನಿರ್ವಹಿಸಿದರೆ, ಅದು ಅವನ ಗತ ಪಾಪಗಳಿಗೆ ಪ್ರಾಯಶ್ಚಿತ್ತವಾಗುತ್ತದೆ—ಅವು ಮಹಾಪಾಪಗಳಲ್ಲದಿದ್ದರೆ. ಇದು ಎಲ್ಲಾ ಕಾಲಕ್ಕೂ ಅನ್ವಯಿಸುತ್ತದೆ.";

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುತ್ತಿದ್ದರು: “ಐದು ವೇಳೆಯ ನಮಾಝ್‌ಗಳು, ಒಂದು ಜುಮುಅದಿಂದ ಇನ್ನೊಂದು ಜುಮುಅ, ಒಂದು ರಮದಾನ್‌ನಿಂದ ಇನ್ನೊಂದು ರಮದಾನ್, ಅವುಗಳ ನಡುವಿನ ಪಾಪಗಳಿಗೆ ಪರಿಹಾರವಾಗಿದೆ; ಮಹಾಪಾಪಗಳಿಂದ ದೂರವಿದ್ದರೆ.”

ಅಮ್ರ್ ಬಿನ್ ಶುಐಬ್ ರಿಂದ, ಅವರು ಅವರ ತಂದೆಯಿಂದ, ಅವರು ಅವರ ತಾತನಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಮಕ್ಕಳಿಗೆ ಏಳು ವರ್ಷ ಪ್ರಾಯವಾದಾಗ ನಮಾಝ್ ನಿರ್ವಹಿಸಲು ಆದೇಶಿಸಿರಿ, ಹತ್ತು ವರ್ಷ ಪ್ರಾಯವಾದಾಗ ಅದಕ್ಕಾಗಿ ಹೊಡೆಯಿರಿ ಮತ್ತು ಮಲಗುವ ಸ್ಥಳದಲ್ಲಿ ಅವರನ್ನು ಬೇರ್ಪಡಿಸಿರಿ."

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಅಲ್ಲಾಹು ಹೇಳುತ್ತಾನೆ: ನಾನು ನಮಾಝನ್ನು ನನ್ನ ಮತ್ತು ನನ್ನ ದಾಸನ ನಡುವೆ ಎರಡು ಭಾಗಗಳಾಗಿ ವಿಭಜಿಸಿದ್ದೇನೆ. ನನ್ನ ದಾಸನಿಗೆ ಅವನು ಬೇಡುವುದೆಲ್ಲವೂ ಇದೆ. ಅವನು ‘ಅಲ್‍ಹಮ್ದುಲಿಲ್ಲಾಹಿ ರಬ್ಬಿಲ್ ಆಲಮೀನ್’ ಎಂದು ಹೇಳುವಾಗ ಅಲ್ಲಾಹು, 'ನನ್ನ ದಾಸ ನನ್ನನ್ನು ಸ್ತುತಿಸಿದ್ದಾನೆ' ಎಂದು ಹೇಳುತ್ತಾನೆ. ಅವನು ‘ಅರ್‍ರಹ್ಮಾನಿರ್‍ರಹೀಮ್’ ಎಂದು ಹೇಳುವಾಗ ಅಲ್ಲಾಹು, 'ನನ್ನ ದಾಸ ನನ್ನನ್ನು ಪ್ರಶಂಸಿಸಿದ್ದಾನೆ' ಎಂದು ಹೇಳುತ್ತಾನೆ. ಅವನು ‘ಮಾಲಿಕಿ ಯೌಮಿದ್ದೀನ್’ ಎಂದು ಹೇಳುವಾಗ ಅಲ್ಲಾಹು, 'ನನ್ನ ದಾಸ ನನ್ನನ್ನು ಮಹತ್ವಪಡಿಸಿದ್ದಾನೆ' ಎಂದು ಹೇಳುತ್ತಾನೆ. ಇನ್ನೊಂದು ಬಾರಿ ಅವನು ಹೇಳುತ್ತಾನೆ: 'ನನ್ನ ದಾಸ (ಅವನ ಎಲ್ಲ ವಿಷಯಗಳನ್ನು) ನನಗೆ ಅರ್ಪಿಸಿದ್ದಾನೆ.' ಅವನು ‘ಇಯ್ಯಾಕ ನಅ್‌ಬುದು ವಇಯ್ಯಾಕ ನಸ್ತಾಈನ್’ ಎಂದು ಹೇಳುವಾಗ ಅಲ್ಲಾಹು, 'ಇದು ನನ್ನ ಮತ್ತು ನನ್ನ ದಾಸನ ನಡುವೆಯಿರುವ ವಿಷಯ. ನನ್ನ ದಾಸನಿಗೆ ಅವನು ಬೇಡುವುದೆಲ್ಲವೂ ಇದೆ' ಎಂದು ಹೇಳುತ್ತಾನೆ. ಅವನು ‘ಇಹ್ದಿನ ಸ್ಸಿರಾತಲ್ ಮುಸ್ತಕೀಂ, ಸಿರಾತಲ್ಲದೀನ ಅನ್‍ಅಮ್ತ ಅಲೈಹಿಂ ಗೈರಿಲ್ ಮಗ್‍ದೂಬಿ ಅಲೈಹಿಂ ವಲದ್ದಾಲ್ಲೀನ್’ ಎಂದು ಹೇಳುವಾಗ ಅಲ್ಲಾಹು, 'ಇದು ನನ್ನ ದಾಸನಿಗೆ. ನನ್ನ ದಾಸನಿಗೆ ಅವನು ಬೇಡುವುದೆಲ್ಲವೂ ಇದೆ' ಎಂದು ಹೇಳುತ್ತಾನೆ."

ಬುರೈದ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಮಾಝ್ ನಮ್ಮ ಮತ್ತು ಅವರ (ಸತ್ಯನಿಷೇಧಿಗಳ) ನಡುವಿನ ಒಪ್ಪಂದವಾಗಿದೆ. ಯಾರು ಅದನ್ನು ತೊರೆಯುತ್ತಾರೋ ಅವರು ಸತ್ಯನಿಷೇಧಿಗಳಾದರು."

ಜಾಬಿರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಒಬ್ಬ ವ್ಯಕ್ತಿ ಮತ್ತು ಶಿರ್ಕ್ (ದೇವಸಹಭಾಗಿತ್ವ) ಹಾಗೂ ಕುಫ್ರ್ (ಸತ್ಯನಿಷೇಧ) ನ ನಡುವಿನ ಅಂತರವು ನಮಾಝನ್ನು ತೊರೆಯುವುದಾಗಿದೆ."

ಸಾಲಿಮ್ ಬಿನ್ ಅಬುಲ್-ಜಅದ್ ರಿಂದ ವರದಿ. ಅವರು ಹೇಳಿದರು: ಒಬ್ಬ ವ್ಯಕ್ತಿ ಹೇಳಿದರು: "ನಾನು ನಮಾಝ್ ನಿರ್ವಹಿಸಿ ನಿರಾಳನಾಗುತ್ತಿದ್ದರೆ ಎಷ್ಟು ಚೆನ್ನಾಗಿತ್ತು!" ಆಗ ಜನರು ಅವನನ್ನು ತರಾಟೆಗೆ ಎತ್ತಿಕೊಂಡರೆಂದು ತೋರುತ್ತದೆ. ಆಗ ಆ ವ್ಯಕ್ತಿ ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಓ ಬಿಲಾಲ್! ನಮಾಝ್‌ಗಾಗಿ ಇಕಾಮತ್ ನೀಡು ಮತ್ತು ಅದರ ಮೂಲಕ ನಮ್ಮನ್ನು ನಿರಾಳಗೊಳಿಸು."

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಾಝಿಗಾಗಿ ತಕ್ಬೀರ್ ಹೇಳಿದರೆ, ಕುರ್‌ಆನ್ ಪಠಿಸುವುದಕ್ಕೆ ಮೊದಲು ಸ್ವಲ್ಪ ಹೊತ್ತು ಮೌನವಾಗಿರುತ್ತಿದ್ದರು. ನಾನು ಹೇಳಿದೆ: "ಓ ಅಲ್ಲಾಹನ ಸಂದೇಶವಾಹಕರೇ! ನನ್ನ ತಂದೆ-ತಾಯಿಗಳನ್ನು ನಿಮಗೆ ಅರ್ಪಿಸುತ್ತಿದ್ದೇನೆ. ತಕ್ಬೀರ್ ಮತ್ತು ಕುರ್‌ಆನ್ ಪಠಣದ ನಡುವೆ ನೀವು ಮೌನವಾಗಿರುತ್ತೀರಿ. ಆಗ ನೀವು ಏನು ಪಠಿಸುತ್ತೀರಿ? ಅವರು ಉತ್ತರಿಸಿದರು: "ನಾನು ಹೀಗೆ ಹೇಳುತ್ತೇನೆ: ಓ ಅಲ್ಲಾಹ್! ಪೂರ್ವ ಮತ್ತು ಪಶ್ಚಿಮಗಳ ನಡುವೆ ಅಂತರವಿಟ್ಟಂತೆ ನನ್ನ ಮತ್ತು ನನ್ನ ಪಾಪಗಳ ನಡುವೆ ಅಂತರವಿಡು. ಓ ಅಲ್ಲಾಹ್! ಬಿಳಿಬಟ್ಟೆಯನ್ನು ಕೊಳೆಯಿಂದ ಶುಚಿಗೊಳಿಸುವಂತೆ ನನ್ನ ಪಾಪಗಳಿಂದ ನನ್ನನ್ನು ಶುಚಿಗೊಳಿಸು. ಓ ಅಲ್ಲಾಹ್! ಮಂಜು, ನೀರು ಮತ್ತು ಹಿಮದ ಮೂಲಕ ನನ್ನ ಪಾಪಗಳಿಂದ ನನ್ನನ್ನು ತೊಳೆದುಬಿಡು."

ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಾಝನ್ನು ಪ್ರಾರಂಭಿಸುವಾಗ ತಮ್ಮ ಎರಡು ಕೈಗಳನ್ನು ಹೆಗಲಿಗೆ ಸಮಾನಾಂತರವಾಗಿ ಎತ್ತುತ್ತಿದ್ದರು. ಅದೇ ರೀತಿ, ರುಕೂ ಮಾಡುವಾಗಲೂ, ರುಕೂವಿನಿಂದ ತಲೆ ಎತ್ತುವಾಗಲೂ ಕೈಗಳನ್ನು ಎತ್ತುತ್ತಿದ್ದರು ಮತ್ತು "ಸಮಿಅಲ್ಲಾಹು ಲಿಮನ್ ಹಮಿದ, ರಬ್ಬನಾ ವಲಕಲ್ ಹಮ್ದ್" ಎಂದು ಹೇಳುತ್ತಿದ್ದರು. ಆದರೆ ಸುಜೂದ್‌ನಲ್ಲಿ ಅವರು ಹೀಗೆ ಮಾಡುತ್ತಿರಲಿಲ್ಲ.