ಉಬಾದ ಬಿನ್ ಸಾಮಿತ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಗ್ರಂಥದ ಆರಂಭವನ್ನು (...
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ವಿವರಿಸುವುದೇನೆಂದರೆ, ಸೂರ ಫಾತಿಹ ಪಠಿಸದಿದ್ದರೆ ನಮಾಝ್ ಸಿಂಧುವಾಗುವುದಿಲ್ಲ. ಅದು ನಮಾಝ್‌ನ ಪ್ರತಿಯೊಂದು ಘಟಕ...
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಕಡ್ಡಾಯ ಮತ್ತು ಐಚ್ಛಿಕವಾದ ಎಲ್ಲಾ ನಮಾಝ್‌ಗಳಲ್ಲೂ ತಕ್ಬೀರ್ ಹೇಳುತ್ತಿದ್ದರು. ರಮದಾನ್ ತಿಂಗಳಲ್ಲೂ ಇತರ ತಿಂಗಳ...
ಅಬೂ ಹುರೈರ (ಅವರ ಬಗ್ಗೆ ಅಲ್ಲಾಹು ಸಂಪ್ರೀತನಾಗಲಿ) ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಾಝಿನ ಒಂದು ಭಾಗವನ್ನು ವರದಿ ಮಾಡುತ್ತಿದ್ದಾರೆ. ಅವರು ತಿಳಿಸಿದಂ...
ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನನಗೆ ಏಳು ಎಲುಬುಗಳ ಮೇಲೆ ಸಾ...
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ವಿವರಿಸುವುದೇನೆಂದರೆ, ನಮಾಝ್ ಮಾಡುವಾಗ ದೇಹದ ಏಳು ಅಂಗಗಳ ಮೇಲೆ ಸಾಷ್ಟಾಂಗ ಮಾಡಲು ಅಲ್ಲಾಹು ಅವರಿಗೆ ಆಜ್ಞಾಪಿಸ...
ಅಬೂ ಉಮಾಮ ರಿಂದ ವರದಿ. ಅವರು ಹೇಳಿದರು: ಅಮ್ರ್ ಬಿನ್ ಅಬಸ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ನನಗೆ ತಿಳಿಸಿದರು. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ)...
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ವಿವರಿಸುವುದೇನೆಂದರೆ, ಸರ್ವಶಕ್ತನಾದ ಪರಿಪಾಲಕನು (ಅಲ್ಲಾಹು) ದಾಸನಿಗೆ ಅತ್ಯಂತ ಹತ್ತಿರವಾಗುವುದು ರಾತ್ರಿಯ ಕೊ...
ಜರೀರ್ ಬಿನ್ ಅಬ್ದುಲ್ಲಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಮ್ಮೆ ನಾವು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಯಲ್ಲಿ...
ಒಮ್ಮೆ ಹುಣ್ಣಿಮೆಯ ರಾತ್ರಿಯಲ್ಲಿ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಮ್ಮ ಸಹಚರರೊಂದಿಗೆ ಕುಳಿತಿದ್ದಾಗ ಹೀಗೆ ಹೇಳಿದರು: ನಿಶ್ಚಯವಾಗಿಯೂ ಸತ್ಯವಿಶ್ವಾಸಿಗ...

ಉಬಾದ ಬಿನ್ ಸಾಮಿತ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಗ್ರಂಥದ ಆರಂಭವನ್ನು (ಸೂರ ಫಾತಿಹ) ಪಠಿಸದವನಿಗೆ ನಮಾಝ್ ಇಲ್ಲ."

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಕಡ್ಡಾಯ ಮತ್ತು ಐಚ್ಛಿಕವಾದ ಎಲ್ಲಾ ನಮಾಝ್‌ಗಳಲ್ಲೂ ತಕ್ಬೀರ್ ಹೇಳುತ್ತಿದ್ದರು. ರಮದಾನ್ ತಿಂಗಳಲ್ಲೂ ಇತರ ತಿಂಗಳಲ್ಲೂ ಕೂಡ. ಅವರು ನಮಾಝ್‌ಗಾಗಿ ನಿಲ್ಲುವಾಗ ತಕ್ಬೀರ್ ಹೇಳುತ್ತಿದ್ದರು. ನಂತರ ರುಕೂ ಮಾಡುವಾಗ ತಕ್ಬೀರ್ ಹೇಳುತ್ತಿದ್ದರು. ನಂತರ, "ಸಮಿಅಲ್ಲಾಹು ಲಿಮನ್ ಹಮಿದ" ಎಂದು ಹೇಳುತ್ತಿದ್ದರು. ನಂತರ ಸುಜೂದ್ ಮಾಡುವುದಕ್ಕೆ ಮೊದಲು "ರಬ್ಬನಾ ವಲಕಲ್ ಹಮ್ದ್" ಎಂದು ಹೇಳುತ್ತಿದ್ದರು. ನಂತರ ಸುಜೂದ್ ಮಾಡುವಾಗ "ಅಲ್ಲಾಹು ಅಕ್ಬರ್" ಎಂದು ಹೇಳುತ್ತಿದ್ದರು. ನಂತರ ಸುಜೂದ್‌ನಿಂದ ತಲೆಯೆತ್ತುವಾಗ ತಕ್ಬೀರ್ ಹೇಳುತ್ತಿದ್ದರು. ನಂತರ ಪುನಃ ಸುಜೂದ್ ಮಾಡುವಾಗ ತಕ್ಬೀರ್ ಹೇಳುತ್ತಿದ್ದರು. ನಂತರ ಸುಜೂದ್‌ನಿಂದ ತಲೆಯೆತ್ತುವಾಗ ತಕ್ಬೀರ್ ಹೇಳುತ್ತಿದ್ದರು. ನಂತರ ಎರಡನೇ ರಕಅತ್‌ಗಾಗಿ ಏಳುವಾಗ ತಕ್ಬೀರ್ ಹೇಳುತ್ತಿದ್ದರು. ಅವರು ನಮಾಝ್ ಮುಗಿಯುವ ತನಕ ಎಲ್ಲಾ ರಕಅತ್‌ಗಳಲ್ಲೂ ಹೀಗೆಯೇ ಮಾಡುತ್ತಿದ್ದರು. ನಮಾಝ್ ಮುಗಿಸಿದ ನಂತರ ಅವರು ಹೇಳುತ್ತಿದ್ದರು: "ನನ್ನ ಆತ್ಮ ಯಾರ ಕೈಯಲ್ಲಿದೆಯೋ ಅವನ ಮೇಲಾಣೆ! ನಾನು ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಾಝನ್ನು ಅವರು ನಿರ್ವಹಿಸಿದಂತೆಯೇ ನಿರ್ವಹಿಸಿ ತೋರಿಸುತ್ತಿದ್ದೇನೆ. ಅವರು ಇಹಲೋಕಕ್ಕೆ ವಿದಾಯ ಹೇಳುವ ತನಕ ಅವರ ನಮಾಝ್ ಹೀಗೆಯೇ ಇತ್ತು."

ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನನಗೆ ಏಳು ಎಲುಬುಗಳ ಮೇಲೆ ಸಾಷ್ಟಾಂಗ ಮಾಡಲು ಆಜ್ಞಾಪಿಸಲಾಗಿದೆ. ಅವು: ಹಣೆ"—ಇದನ್ನು ಹೇಳುವಾಗ ಅವರು ತಮ್ಮ ಕೈಯಿಂದ ಮೂಗಿನ ಕಡೆಗೆ ತೋರಿಸಿದರು—"ಕೈಗಳು, ಮೊಣಕಾಲುಗಳು ಮತ್ತು ಪಾದಗಳ ತುದಿಗಳು. ಮತ್ತು ಬಟ್ಟೆ ಹಾಗೂ ಕೂದಲನ್ನು ಮಡಚಬಾರದೆಂದು ಕೂಡ ಆಜ್ಞಾಪಿಸಲಾಗಿದೆ."

ಅಬೂ ಉಮಾಮ ರಿಂದ ವರದಿ. ಅವರು ಹೇಳಿದರು: ಅಮ್ರ್ ಬಿನ್ ಅಬಸ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ನನಗೆ ತಿಳಿಸಿದರು. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ಅವರು ಕೇಳಿದ್ದರು: "ಅಲ್ಲಾಹು ದಾಸನಿಗೆ ಅತಿನಿಕಟನಾಗುವುದು ರಾತ್ರಿಯ ಕೊನೆಯ ಮೂರನೇ ಭಾಗದಲ್ಲಿ. ಆದ್ದರಿಂದ ಆ ಸಮಯದಲ್ಲಿ ಅಲ್ಲಾಹನನ್ನು ಸ್ಮರಿಸುವವರಲ್ಲಿ ಸೇರಲು ನಿನಗೆ ಸಾಧ್ಯವಾಗುವುದಾದರೆ ಸೇರಿಕೋ."

ಜರೀರ್ ಬಿನ್ ಅಬ್ದುಲ್ಲಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಮ್ಮೆ ನಾವು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಯಲ್ಲಿದ್ದೆವು. ಆಗ ಅವರು ರಾತ್ರಿಯಲ್ಲಿ ಚಂದ್ರನ ಕಡೆಗೆ—ಅಂದರೆ ಪೂರ್ಣಚಂದ್ರನ ಕಡೆಗೆ—ನೋಡಿ ಹೇಳಿದರು: "ನೀವು ಈ ಚಂದ್ರನನ್ನು ನೋಡುವಂತೆ ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ನೋಡುವಿರಿ. ಅವನನ್ನು ನೋಡುವುದರಲ್ಲಿ ನಿಮಗೆ ಯಾವುದೇ ತೊಂದರೆಯಿರುವುದಿಲ್ಲ. ಆದ್ದರಿಂದ ಸೂರ್ಯೋದಯಕ್ಕೆ ಮೊದಲಿನ ಮತ್ತು ಸೂರ್ಯಾಸ್ತಕ್ಕೆ ಮೊದಲಿನ ನಮಾಝ್‌ಗಳನ್ನು ಕಳಕೊಳ್ಳದಿರಲು ನಿಮಗೆ ಸಾಧ್ಯವಾಗುವುದಾದರೆ ಹಾಗೆ ಮಾಡಿರಿ." ನಂತರ ಅವರು ಪಠಿಸಿದರು: "ಮತ್ತು ಸೂರ್ಯೋದಯಕ್ಕೆ ಮೊದಲು ಹಾಗೂ ಸೂರ್ಯಾಸ್ತಕ್ಕೆ ಮೊದಲು ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಸ್ತುತಿಸುತ್ತಾ ಅವನ ಪರಿಶುದ್ಧತೆಯನ್ನು ಕೊಂಡಾಡಿರಿ."

ಅಬೂ ಮೂಸಾ ಅಶ್‌ಅರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಎರಡು ಬರದ್ (ತಂಪು) ನಮಾಝ್‌ಗಳನ್ನು ನಿರ್ವಹಿಸುತ್ತಾರೋ ಅವರು ಸ್ವರ್ಗವನ್ನು ಪ್ರವೇಶಿಸುತ್ತಾರೆ."

ಜುಂದುಬ್ ಬಿನ್ ಅಬ್ದುಲ್ಲಾ ಕಸ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಫಜ್ರ್ ನಮಾಝ್ ಮಾಡುವವನು ಅಲ್ಲಾಹನ ರಕ್ಷಣೆಯಲ್ಲಿದ್ದಾನೆ. ಆದ್ದರಿಂದ, ತನ್ನ ರಕ್ಷಣೆಯನ್ನು ಮುರಿದದ್ದಕ್ಕಾಗಿ ಅಲ್ಲಾಹು ನಿಮ್ಮನ್ನು ಪ್ರಶ್ನಿಸುವಂತೆ ಮಾಡಬೇಡಿ. ಏಕೆಂದರೆ, ತನ್ನ ರಕ್ಷಣೆಯನ್ನು ಮುರಿದದ್ದಕ್ಕಾಗಿ ಅಲ್ಲಾಹು ಯಾರನ್ನಾದರೂ ಪ್ರಶ್ನೆ ಮಾಡಿದರೆ ಅವನನ್ನು ಹಿಡಿದು ತಲೆಕೆಳಗಾಗಿ ನರಕಕ್ಕೆ ಎಸೆಯುತ್ತಾನೆ."

ಬುರೈದ ಬಿನ್ ಹಸೀಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: "ಅಸರ್ ನಮಾಜನ್ನು ಬೇಗನೆ ನಿರ್ವಹಿಸಿರಿ. ಏಕೆಂದರೆ ಪ್ರವಾದಿಯವರು ಹೇಳಿದರು: "ಯಾರು ಅಸರ್ ನಮಾಝನ್ನು ತೊರೆಯುತ್ತಾರೋ ಅವರ ಕರ್ಮಗಳು ನಿಷ್ಪಲವಾಗುತ್ತವೆ."

ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರಾದರೂ ನಮಾಝನ್ನು ಮರೆತುಬಿಟ್ಟರೆ ನೆನಪಾದಾಗ ಅದನ್ನು ನಿರ್ವಹಿಸಲಿ. ಇದಲ್ಲದೆ ಅದಕ್ಕೆ ಬೇರೆ ಪ್ರಾಯಶ್ಚಿತ್ತವಿಲ್ಲ. "ನನ್ನ ನೆನಪಿಗಾಗಿ ನಮಾಝ್ ನಿರ್ವಹಿಸಿರಿ." [ತ್ವಾಹಾ 14]"

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಇಶಾ ನಮಾಝ್ ಮತ್ತು ಫಜ್ರ್ ನಮಾಝ್ ಕಪಟವಿಶ್ವಾಸಿಗಳಿಗೆ ಅತ್ಯಂತ ಭಾರವಾದ ನಮಾಝ್‌ಗಳಾಗಿವೆ. ಆ ಎರಡು ನಮಾಝ್‌ಗಳಲ್ಲಿರುವ (ಪ್ರತಿಫಲವನ್ನು) ಅವರು ತಿಳಿದಿದ್ದರೆ, ಅವರು ಅದಕ್ಕಾಗಿ ಅಂಬೆಗಾಲಿಟ್ಟುಕೊಂಡಾದರೂ ಬರುತ್ತಿದ್ದರು. ಜನರಿಗೆ ನಮಾಝ್ ನಿರ್ವಹಿಸಲು ಆಜ್ಞಾಪಿಸಿ, ನಂತರ ಒಬ್ಬರನ್ನು ಅವರಿಗೆ ಇಮಾಂ ಆಗಿ ನೇಮಿಸಿ, ನಂತರ ಸೌದೆಗಳ ಕಟ್ಟುಗಳೊಂದಿಗೆ ಕೆಲವು ಜನರನ್ನು ಕರೆದುಕೊಂಡು ಹೋಗಿ, ನಮಾಝ್‌ಗೆ ಬರದವರ ಮನೆಗಳನ್ನು ಸುಟ್ಟುಬಿಡಲು ನಾನು ಯೋಚಿಸಿದ್ದೆ."

ಇಬ್ನ್ ಅಬೂ ಔಫಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ರುಕೂನಿಂದ ಬೆನ್ನನ್ನು ಎತ್ತುವಾಗ, ಹೀಗೆ ಹೇಳುತ್ತಿದ್ದರು: "ಸಮಿಅಲ್ಲಾಹು ಲಿಮನ್ ಹಮಿದ, ಅಲ್ಲಾಹುಮ್ಮ ರಬ್ಬನಾ ಲಕಲ್ ಹಮ್ದ್, ಮಿಲ್‌ಅ ಸ್ಸಮಾವಾತಿ ವಮಿಲ್‌ಅಲ್ ಅರ್ದಿ, ವಮಿಲ್‌ಅ ಮಾ ಶಿಅ್‌ತ ಮಿನ್ ಶೈಇನ್ ಬಅ್‌ದ್."

ಹುದೈಫ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎರಡು ಸುಜೂದ್‌ಗಳ ಮಧ್ಯೆ "ರಬ್ಬಿಗ್ಫಿರ್ ಲೀ, ರಬ್ಬಿಗ್ಫಿರ್ ಲೀ" (ಓ ನನ್ನ ಪರಿಪಾಲಕನೇ! ನನ್ನನ್ನು ಕ್ಷಮಿಸು, ಓ ನನ್ನ ಪರಿಪಾಲಕನೇ! ನನ್ನನ್ನು ಕ್ಷಮಿಸು) ಎಂದು ಹೇಳುತ್ತಿದ್ದರು.