ಸೌಬಾನ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಾಝ್ ಮುಗಿಸಿದರೆ ಮೂರು ಬಾರ...
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಾಝ್ ಮುಗಿಸಿದರೆ ಮೂರು ಬಾರಿ ಅಸ್ತಗ್ಫಿರುಲ್ಲಾಹ್ (ನಾನು ಅಲ್ಲಾಹನಲ್ಲಿ ಕ್ಷಮೆಯಾಚಿಸುತ್ತೇನೆ) ಎಂದು ಹೇಳುತ್ತಿದ್ದರ...
ಅಬೂ ಝುಬೈರ್ ರಿಂದ ವರದಿ. ಅವರು ಹೇಳಿದರು: ಇಬ್ನ್ ಝುಬೈರ್ ಪ್ರತಿಯೊಂದು ನಮಾಝ್‌ನಲ್ಲೂ ಸಲಾಂ ಹೇಳಿದ ನಂತರ ಇದನ್ನು ಪಠಿಸುತ್ತಿದ್ದರು: "ಲಾ ಇಲಾಹ ಇಲ್ಲಲ್ಲಾಹು ವಹ್ದಹೂ ಲಾ ಶರೀಕ ಲಹೂ,...
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎಲ್ಲಾ ಕಡ್ಡಾಯ ನಮಾಝ್‌ಗಳ ನಂತರ ಈ ಮಹಾ ದಿಕ್ರ್‌ಗಳ ಮೂಲಕ ತಹ್ಲೀಲ್ (ಲಾಇಲಾಹ ಇಲ್ಲಲ್ಲಾಹ್) ಪಠಿಸುತ್ತಿದ್ದರು. ಇವುಗಳ...
ಮುಗೀರ ಬಿನ್ ಶುಅಬರ ಬರಹಗಾರರಾದ ವರ್‍ರಾದ್‌ರಿಂದ ವರದಿ. ಅವರು ಹೇಳುತ್ತಾರೆ: ಒಮ್ಮೆ ಮುಗೀರ ಬಿನ್ ಶುಅಬ ನನ್ನೊಂದಿಗೆ ಮುಆವಿಯಾರಿಗೆ ಹೀಗೆ ಪತ್ರ ಬರೆಯಲು ಹೇಳಿದರು: ಪ್ರವಾದಿಯವರು (ಅವ...
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎಲ್ಲಾ ಕಡ್ಡಾಯ ನಮಾಝ್‌ಗಳ ನಂತರ, “ಲಾ ಇಲಾಹ ಇಲ್ಲಲ್ಲಾಹು ವಹ್ದಹೂ ಲಾ ಶರೀಕ ಲಹೂ, ಲಹುಲ್ ಮುಲ್ಕು ವಲಹುಲ್ ಹಮ್ದು, ವಹ...
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಎಲ್ಲಾ ನಮಾಝ್‌ಗಳ ನಂತರ...
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ವಿವರಿಸುವುದೇನೆಂದರೆ, ಯಾರು ಕಡ್ಡಾಯ ನಮಾಝ್‌ಗಳ ನಂತರ ಹೀಗೆ ಹೇಳುತ್ತಾರೋ:
ಮೂವತ್ತಮೂರು ಬಾರಿ "ಸುಬ್‌ಹಾನಲ...
ಅಬೂ ಉಮಾಮ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಎಲ್ಲಾ ಕ...
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿ ಇರಲಿ) ಇಲ್ಲಿ ತಿಳಿಸುವುದೇನೆಂದರೆ, ಯಾರು ಎಲ್ಲಾ ಕಡ್ಡಾಯ ನಮಾಝ್‌ಗಳನ್ನು ನಿರ್ವಹಿಸಿದ ಬಳಿಕ ಆಯತುಲ್-ಕುರ್ಸಿ ಪಠಿಸುತ್ತಾರೋ...
ಸೌಬಾನ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಾಝ್ ಮುಗಿಸಿದರೆ ಮೂರು ಬಾರಿ ಇಸ್ತಿಗ್ಫಾರ್ (ಕ್ಷಮೆಯಾಚನೆ) ಮಾಡುತ್ತಿದ್ದರು. ನಂತರ ಹೀಗೆ ಹೇಳುತ್ತಿದ್ದರು: "ಅಲ್ಲಾಹುಮ್ಮ ಅನ್ತ ಸ್ಸಲಾಂ, ವಮಿನ್ಕ ಸ್ಸಲಾಂ, ತಬಾರಕ್ತ ದಲ್ ಜಲಾಲಿ ವಲ್ ಇಕ್ರಾಮ್" (ಓ ಅಲ್ಲಾಹ್! ನೀನು ಅಸ್ಸಲಾಂ (ಶಾಂತಿ) ಮತ್ತು ನಿನ್ನಿಂದಲೇ ಶಾಂತಿ. ಓ ಮಹಿಮೆ ಪ್ರತಿಷ್ಠೆಗಳನ್ನು ಹೊಂದಿರುವವನೇ! ನೀನು ಅನುಗ್ರಹಪೂರ್ಣನಾಗಿರುವೆ.” (ವರದಿಗಾರರಲ್ಲಿ ಒಬ್ಬರಾದ) ವಲೀದ್ ಹೇಳುತ್ತಾರೆ: ನಾನು ಔಝಾಈರೊಡನೆ ಕೇಳಿದೆ: "ನಾನು ಕ್ಷಮೆಯಾಚನೆ ಮಾಡುವುದು ಹೇಗೆ?" ಅವರು ಉತ್ತರಿಸಿದರು: "ಅಸ್ತಗ್ಫಿರುಲ್ಲಾಹ್, ಅಸ್ತಗ್ಫಿರುಲ್ಲಾಹ್ ಎಂದು ಹೇಳುವುದು."
ಅಬೂ ಝುಬೈರ್ ರಿಂದ ವರದಿ. ಅವರು ಹೇಳಿದರು: ಇಬ್ನ್ ಝುಬೈರ್ ಪ್ರತಿಯೊಂದು ನಮಾಝ್‌ನಲ್ಲೂ ಸಲಾಂ ಹೇಳಿದ ನಂತರ ಇದನ್ನು ಪಠಿಸುತ್ತಿದ್ದರು: "ಲಾ ಇಲಾಹ ಇಲ್ಲಲ್ಲಾಹು ವಹ್ದಹೂ ಲಾ ಶರೀಕ ಲಹೂ, ಲಹುಲ್ ಮುಲ್ಕು ವಲಹುಲ್ ಹಮ್ದು ವಹುವ ಅಲಾ ಕುಲ್ಲಿ ಶೈಇನ್ ಕದೀರ್. ಲಾ ಹೌಲ ವಲಾ ಕುವ್ವತ ಇಲ್ಲಾ ಬಿಲ್ಲಾಹ್. ಲಾ ಇಲಾಹ ಇಲ್ಲಲ್ಲಾಹು, ವಲಾ ನಅ್‌ಬುದು ಇಲ್ಲಾ ಇಯ್ಯಾಹು, ಲಹು ನ್ನಿಅ್‌ಮತು ವಲಹುಲ್ ಫದ್ಲು, ವಲಹು ಸ್ಸನಾಉಲ್ ಹಸನು, ಲಾ ಇಲಾಹ ಇಲ್ಲಲ್ಲಾಹು ಮುಖ್ಲಿಸೀನ ಲಹು ದ್ದೀನ ವಲವ್ ಕರಿಹಲ್ ಕಾಫಿರೂನ್." (ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ, ಅವನು ಏಕೈಕನು ಮತ್ತು ಸಹಭಾಗಿಗಳಿಲ್ಲದವನು, ಆಧಿಪತ್ಯವು ಅವನದ್ದು ಮತ್ತು ಸ್ತುತಿಯು ಅವನಿಗೆ, ಅವನು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ. ಅಲ್ಲಾಹನ ಹೊರತು ಶಕ್ತಿಯಾಗಲಿ ಸಾಮರ್ಥ್ಯವಾಗಲಿ ಇಲ್ಲ. ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ, ನಾವು ಅವನನ್ನಲ್ಲದೆ ಇನ್ನಾರನ್ನೂ ಆರಾಧಿಸುವುದಿಲ್ಲ. ಅನುಗ್ರಹವು ಅವನದ್ದು, ಔದಾರ್ಯವು ಅವನದ್ದು ಮತ್ತು ಉತ್ತಮವಾದ ಪ್ರಶಂಸೆಯು ಅವನಿಗೆ. ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ, ಸತ್ಯನಿಷೇಧಿಗಳು ಅಸಹ್ಯಪಟ್ಟರೂ ಸಹ ನಾವು ಧರ್ಮವನ್ನು ಅವನಿಗೆ ನಿಷ್ಕಳಂಕಗೊಳಿಸುತ್ತೇವೆ). ನಂತರ ಅವರು ಹೇಳಿದರು: "ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎಲ್ಲಾ ನಮಾಝ್‌ಗಳ ನಂತರ ಇವುಗಳ ಮೂಲಕ ತಹ್ಲೀಲ್ (ಲಾಇಲಾಹ ಇಲ್ಲಲ್ಲಾಹ್) ಪಠಿಸುತ್ತಿದ್ದರು."
ಮುಗೀರ ಬಿನ್ ಶುಅಬರ ಬರಹಗಾರರಾದ ವರ್‍ರಾದ್‌ರಿಂದ ವರದಿ. ಅವರು ಹೇಳುತ್ತಾರೆ: ಒಮ್ಮೆ ಮುಗೀರ ಬಿನ್ ಶುಅಬ ನನ್ನೊಂದಿಗೆ ಮುಆವಿಯಾರಿಗೆ ಹೀಗೆ ಪತ್ರ ಬರೆಯಲು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎಲ್ಲಾ ಕಡ್ಡಾಯ ನಮಾಝ್‌ಗಳ ನಂತರ ಹೀಗೆ ಹೇಳುತ್ತಿದ್ದರು: “ಲಾ ಇಲಾಹ ಇಲ್ಲಲ್ಲಾಹು ವಹ್ದಹೂ ಲಾ ಶರೀಕ ಲಹೂ, ಲಹುಲ್ ಮುಲ್ಕು ವಲಹುಲ್ ಹಮ್ದು, ವಹುವ ಅಲಾ ಕುಲ್ಲಿ ಶೈಇನ್ ಕದೀರ್. ಅಲ್ಲಾಹುಮ್ಮ ಲಾ ಮಾನಿಅ ಲಿಮಾ ಅಅ್‌ತಯ್ತ ವಲಾ ಮುಅ್‌ತಿಯ ಲಿಮಾ ಮನಅ್‌ತ, ವಲಾ ಯನ್‌ಫಉ ದಲ್-ಜದ್ದಿ ಮಿನ್ಕಲ್ ಜದ್ದ್."
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಎಲ್ಲಾ ನಮಾಝ್‌ಗಳ ನಂತರ ಮೂವತ್ತಮೂರು ಬಾರಿ ಸುಬ್‌ಹಾನಲ್ಲಾಹ್, ಮೂವತ್ತಮೂರು ಬಾರಿ ಅಲ್-ಹಮ್ದುಲಿಲ್ಲಾಹ್ ಮತ್ತು ಮೂವತ್ತಮೂರು ಬಾರಿ ಅಲ್ಲಾಹು ಅಕ್ಬರ್ ಹೇಳುತ್ತಾರೋ—ಇವು ಒಟ್ಟು ತೊಂಬತ್ತೊಂಬತ್ತು— ಮತ್ತು ನೂರನ್ನು ಪೂರ್ತಿ ಮಾಡಲು, ಲಾ ಇಲಾಹ ಇಲ್ಲಲ್ಲಾಹು ವಹ್ದಹೂ ಲಾ ಶರೀಕ ಲಹೂ, ಲಹುಲ್ ಮುಲ್ಕು ವಲಹುಲ್ ಹಮ್ದು, ವಹುವ ಅಲಾ ಕುಲ್ಲಿ ಶೈಇನ್ ಕದೀರ್ ಎಂದು ಪಠಿಸುತ್ತಾರೋ, ಅವರ ಪಾಪಗಳೆಲ್ಲವನ್ನೂ ಕ್ಷಮಿಸಲಾಗುವುದು. ಅವು ಸಮುದ್ರದ ನೊರೆಗಳಷ್ಟಿದ್ದರೂ ಸಹ."
ಅಬೂ ಉಮಾಮ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಎಲ್ಲಾ ಕಡ್ಡಾಯ ನಮಾಝ್‌ಗಳ ನಂತರ ಆಯತುಲ್-ಕುರ್ಸಿ ಪಠಿಸುತ್ತಾರೋ, ಅವರನ್ನು ಸಾವಿನ ಹೊರತು ಬೇರೇನೂ ಸ್ವರ್ಗ ಪ್ರವೇಶಿಸದಂತೆ ತಡೆಯುವುದಿಲ್ಲ."
ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. "ನಾನು ಪ್ರವಾದಿಯವರಿಂದ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹತ್ತು ರಕಅತ್‌ಗಳನ್ನು ಜ್ಞಾಪಕದಲ್ಲಿಟ್ಟಿದ್ದೇನೆ: ಝುಹರ್ ನಮಾಝಿಗೆ ಮೊದಲು ಎರಡು ರಕಅತ್‌ಗಳು ಮತ್ತು ಅದರ ನಂತರ ಎರಡು ರಕಅತ್‌ಗಳು, ಮಗ್ರಿಬ್ ನಂತರ ಮನೆಯಲ್ಲಿ ಎರಡು ರಕಅತ್‌ಗಳು, ಇಶಾ ನಂತರ ಮನೆಯಲ್ಲಿ ಎರಡು ರಕಅತ್‌ಗಳು, ಫಜ್ರ್ ನಮಾಝಿಗೆ ಮೊದಲು ಎರಡು ರಕಅತ್‌ಗಳು. (ಇವು ಮಾತ್ರವಲ್ಲದೆ) ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಯಾರೂ ಹೋಗದಂತಹ ಒಂದು ಸಮಯವಿದೆ. (ಪ್ರವಾದಿ ಪತ್ನಿ) ಹಫ್ಸ ನನಗೆ ತಿಳಿಸಿದರು: ಮುಅಝ್ಝಿನ್ ಅಝಾನ್ ನೀಡಿ ಪ್ರಭಾತವು ಉದಯವಾದಾಗ ಪ್ರವಾದಿಯವರು ಎರಡು ರಕಅತ್ ನಮಾಝ್ ಮಾಡುತ್ತಿದ್ದರು." ಇನ್ನೊಂದು ವರದಿಯಲ್ಲಿ: "ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜುಮಾ ನಮಾಝಿನ ಬಳಿಕ ಎರಡು ರಕಅತ್ ನಮಾಝ್ ನಿರ್ವಹಿಸುತ್ತಿದ್ದರು."
ಅಬೂ ಕತಾದ ಅಸ್ಸಲಮಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮಲ್ಲೊಬ್ಬರು ಮಸೀದಿಯೊಳಗೆ ಪ್ರವೇಶ ಮಾಡಿದರೆ ಕುಳಿತುಕೊಳ್ಳುವುದಕ್ಕೆ ಮೊದಲು ಎರಡು ರಕಅತ್ ನಮಾಝ್ ನಿರ್ವಹಿಸಲಿ."
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಶುಕ್ರವಾರ ಇಮಾಮರು ಪ್ರವಚನ ನಿರ್ವಹಿಸುತ್ತಿರುವಾಗ, ನೀನು ನಿನ್ನ ಬಳಿಯಿರುವವನಿಗೆ "ಮೌನವಾಗಿರು" ಎಂದು ಹೇಳಿದರೆ ನೀನು ಅನಗತ್ಯವಾದುದನ್ನು ಮಾಡಿದೆ."
ಇಮ್ರಾನ್ ಬಿನ್ ಹುಸೈನ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು:ನನಗೆ ಮೂಲವ್ಯಾಧಿ ಇತ್ತು ಆದ್ದರಿಂದ ನಾನು ನಮಾಝ್ ನಿರ್ವಹಿಸುವ ಬಗ್ಗೆ ಪ್ರವಾದಿಯವರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದಾಗ, ಅವರು ಹೇಳಿದರು: "ನಿಂತು ನಮಾಝ್ ನಿರ್ವಹಿಸಿ, ಅದು ಸಾಧ್ಯವಾಗದಿದ್ದರೆ ಕುಳಿತು ನಿರ್ವಹಿಸಿ, ಅದು ಕೂಡ ಸಾಧ್ಯವಾಗದಿದ್ದರೆ ಮಲಗಿ ನಿರ್ವಹಿಸಿ."
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನನ್ನ ಈ ಮಸೀದಿಯಲ್ಲಿ ನಿರ್ವಹಿಸುವ ಒಂದು ನಮಾಝ್ ಇತರ ಮಸೀದಿಗಳಲ್ಲಿ ನಿರ್ವಹಿಸುವ ಸಾವಿರ ನಮಾಝ್‌ಗಳಿಗಿಂತಲೂ ಶ್ರೇಷ್ಠವಾಗಿದೆ. ಮಸ್ಜಿದುಲ್ ಹರಾಂ ಹೊರತುಪಡಿಸಿ."
ಮಹ್ಮೂದ್ ಬಿನ್ ಲಬೀದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: "ಉಸ್ಮಾನ್ ಬಿನ್ ಅಫ್ಫಾನ್ ಮಸೀದಿಯನ್ನು ಪುನರ್ ನಿರ್ಮಿಸಲು ಬಯಸಿದರು. ಆದರೆ ಜನರಿಗೆ ಅದು ಇಷ್ಟವಿರಲಿಲ್ಲ. ಮಸೀದಿ ಹೇಗಿತ್ತೋ ಹಾಗೆಯೇ ಇರುವುದು ಅವರಿಗೆ ಇಷ್ಟವಾಗಿತ್ತು. ಆಗ ಉಸ್ಮಾನ್ ಹೇಳಿದರು: "ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಯಾರು ಅಲ್ಲಾಹನಿಗೋಸ್ಕರ ಒಂದು ಮಸೀದಿಯನ್ನು ನಿರ್ಮಿಸುತ್ತಾರೋ ಅವರಿಗೆ ಅಲ್ಲಾಹು ಸ್ವರ್ಗದಲ್ಲಿ ಅದಕ್ಕೆ ಸಮಾನವಾದುದನ್ನು ನಿರ್ಮಿಸುತ್ತಾನೆ."
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ದಾನ ಮಾಡಿದ ಕಾರಣ ಯಾವುದೇ ಆಸ್ತಿ ಕಡಿಮೆಯಾಗಿಲ್ಲ. (ಇತರರನ್ನು) ಮನ್ನಿಸುವ ಗುಣವಿರುವ ದಾಸನಿಗೆ ಅಲ್ಲಾಹು ಗೌರವವನ್ನಲ್ಲದೆ ಬೇರೇನನ್ನೂ ಹೆಚ್ಚಿಸಿಲ್ಲ. ಯಾರು ಅಲ್ಲಾಹನಿಗಾಗಿ ವಿನಯ ತೋರುತ್ತಾನೋ ಅವನನ್ನು ಅಲ್ಲಾಹು ಉನ್ನತಿಗೇರಿಸದೇ ಇರಲಾರ.”