ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಜನರು ಅತಿಹೆಚ್ಚಾಗಿ ಸ್ವರ್ಗವನ್ನು ಪ್ರವೇಶಿಸಲು ಕಾರಣವಾಗುವ ವಿಷಯದ ಬಗ್ಗೆ ಕೇಳಲಾದಾಗ, ಪ್ರವಾದಿಯವರ...
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ವಿವರಿಸುವುದೇನೆಂದರೆ, ಜನರು ಅತಿಹೆಚ್ಚಾಗಿ ಸ್ವರ್ಗಕ್ಕೆ ಹೋಗಲು ಎರಡು ಕಾರಣಗಳಿವೆ. ಅವು: ಅಲ್ಲಾಹನ ಭಯ ಮತ್...
ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜನರಲ್ಲೇ ಅತ್ಯು...
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜನರಲ್ಲೇ ಅತ್ಯಂತ ಪರಿಪೂರ್ಣವಾದ ನಡವಳಿಕೆಯನ್ನು ಹೊಂದಿದ್ದರು. ಉತ್ತಮ ರೀತಿಯಲ್ಲಿ ಮಾತನಾಡುವುದು, ಜನರಿಗೆ ಒಳಿತು ಮಾಡ...
ಸಅದ್ ಬಿನ್ ಹಿಶಾಮ್ ಬಿನ್ ಆಮಿರ್ – ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರವರ ಬಳಿಗೆ ಹೋದಾಗ ಹೇಳಿದರು: "ಓ ಸತ್ಯವಿಶ್ವಾಸಿಗಳ ತಾಯಿಯವರೇ! ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ...
ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಡವಳಿಕೆಯ ಬಗ್ಗೆ ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರೊಡನೆ ಕೇಳಲಾದಾಗ ಅವರು ಒಂದು...
ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪಾದರಕ್ಷೆ ಧರಿಸ...
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಗೌರವಾರ್ಹವಾದ ಯಾವುದೇ ಕೆಲಸವನ್ನು ಮಾಡುವಾಗ ತಮ್ಮ ಬಲಭಾಗದಿಂದ ಪ್ರಾರಂಭಿಸುವುದನ್ನು ಮತ್ತು ಬಲಭಾಗಕ್ಕೆ ಪ್ರಾಶಸ್ತ್ಯ...
ಶದ್ದಾದ್ ಬಿನ್ ಔಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳುತ್ತಾರೆ: ಅಲ್ಲಾಹನ ಸಂದೇಶವಾಹಕರಿಂದ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಾನು ಎರಡು...
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ತಿಳಿಸುವುದೇನೆಂದರೆ, ಸರ್ವಶಕ್ತನಾದ ಅಲ್ಲಾಹು ಪ್ರತಿಯೊಂದು ವಿಷಯದಲ್ಲೂ ಉತ್ತಮವಾಗಿ ವರ್ತಿಸುವುದನ್ನು ನಮ್ಮ ಮೇ...

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಜನರು ಅತಿಹೆಚ್ಚಾಗಿ ಸ್ವರ್ಗವನ್ನು ಪ್ರವೇಶಿಸಲು ಕಾರಣವಾಗುವ ವಿಷಯದ ಬಗ್ಗೆ ಕೇಳಲಾದಾಗ, ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಉತ್ತರಿಸಿದರು: "ಅಲ್ಲಾಹನ ಭಯ ಮತ್ತು ಉತ್ತಮ ನಡವಳಿಕೆ." ಜನರು ಅತಿಹೆಚ್ಚಾಗಿ ನರಕವನ್ನು ಪ್ರವೇಶಿಸಲು ಕಾರಣವಾಗುವ ವಿಷಯದ ಬಗ್ಗೆ ಕೇಳಲಾದಾಗ, ಅವರು ಹೀಗೆ ಉತ್ತರಿಸಿದರು: "ಬಾಯಿ ಮತ್ತು ಗುಹ್ಯಾಂಗ."

ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜನರಲ್ಲೇ ಅತ್ಯುತ್ತಮ ನಡವಳಿಕೆಯನ್ನು ಹೊಂದಿದವರಾಗಿದ್ದರು."

ಸಅದ್ ಬಿನ್ ಹಿಶಾಮ್ ಬಿನ್ ಆಮಿರ್ – ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರವರ ಬಳಿಗೆ ಹೋದಾಗ ಹೇಳಿದರು: "ಓ ಸತ್ಯವಿಶ್ವಾಸಿಗಳ ತಾಯಿಯವರೇ! ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಡವಳಿಕೆಯ ಬಗ್ಗೆ ನನಗೆ ತಿಳಿಸಿಕೊಡಿ." ಅವರು ಕೇಳಿದರು: "ನೀವು ಪವಿತ್ರ ಕುರ್‌ಆನ್ ಪಠಿಸುವುದಿಲ್ಲವೇ?" ನಾನು ಹೇಳಿದೆ: "ಪಠಿಸುತ್ತೇನೆ." ಅವರು ಹೇಳಿದರು: "ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಡವಳಿಕೆ ಪವಿತ್ರ ಕುರ್‌ಆನ್ ಆಗಿದೆ."

ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪಾದರಕ್ಷೆ ಧರಿಸುವಾಗ, ತಲೆ ಬಾಚುವಾಗ, ಶುದ್ಧೀಕರಿಸುವಾಗ, ಮತ್ತು ತಮ್ಮ ಎಲ್ಲಾ ಕೆಲಸ-ಕಾರ್ಯಗಳಲ್ಲೂ ಬಲಭಾಗದಿಂದ ಪ್ರಾರಂಭಿಸಲು ಇಷ್ಟಪಡುತ್ತಿದ್ದರು."

ಶದ್ದಾದ್ ಬಿನ್ ಔಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳುತ್ತಾರೆ: ಅಲ್ಲಾಹನ ಸಂದೇಶವಾಹಕರಿಂದ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಾನು ಎರಡು ವಿಷಯಗಳನ್ನು ಕಲಿತಿದ್ದೇನೆ: "ನಿಶ್ಚಯವಾಗಿಯೂ ಅಲ್ಲಾಹು ಪ್ರತಿಯೊಂದು ವಿಷಯದಲ್ಲೂ ಉತ್ತಮವಾಗಿ ವರ್ತಿಸುವುದನ್ನು ಕಡ್ಡಾಯಗೊಳಿಸಿದ್ದಾನೆ. ಆದ್ದರಿಂದ ನೀವು (ಪ್ರತೀಕಾರಕ್ಕಾಗಿ) ಕೊಲ್ಲುವಾಗ ಉತ್ತಮ ರೀತಿಯಲ್ಲಿ ಕೊಲ್ಲಿರಿ. ನೀವು (ಪ್ರಾಣಿಗಳನ್ನು ಮಾಂಸಕ್ಕಾಗಿ) ಕೊಯ್ಯುವಾಗ ಉತ್ತಮ ರೀತಿಯಲ್ಲಿ ಕೊಯ್ಯಿರಿ. ನಿಮ್ಮಲ್ಲೊಬ್ಬನು ಕೊಯ್ಯುವಾಗ ಚೂರಿಯನ್ನು ಹರಿತಗೊಳಿಸಲಿ ಮತ್ತು ಪ್ರಾಣಿಗೆ ನಿರಾಳತೆಯನ್ನು ನೀಡಲಿ."

ಅಬ್ದುಲ್ಲಾ ಬಿನ್ ಅಮ್ರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನ್ಯಾಯಯುತವಾಗಿ ವರ್ತಿಸುವವರು ಅಲ್ಲಾಹನ ಬಳಿ ಪ್ರಕಾಶದ ಪೀಠಗಳ ಮೇಲಿರುತ್ತಾರೆ. ಅವರು ಪರಮ ದಯಾಮಯನ ಬಲಭಾಗದಲ್ಲಿರುತ್ತಾರೆ. ಅಲ್ಲಾಹನ ಎರಡು ಕೈಗಳೂ ಬಲಗೈಗಳಾಗಿವೆ. ಅವರು ಯಾರೆಂದರೆ, ತಮ್ಮ ತೀರ್ಪಿನಲ್ಲಿ, ತಮ್ಮ ಜನರ ವಿಷಯದಲ್ಲಿ ಮತ್ತು ತಮ್ಮ ಅಧೀನದಲ್ಲಿರುವವರ ವಿಷಯದಲ್ಲಿ ನ್ಯಾಯಯುತವಾಗಿ ವರ್ತಿಸುವವರು."

ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "(ವಿನಾಕಾರಣ) ತೊಂದರೆ ಕೊಡಬಾರದು ಮತ್ತು (ಪ್ರತೀಕಾರ ರೂಪದಲ್ಲೂ) ತೊಂದರೆ ಕೊಡಬಾರದು. ಯಾರು ತೊಂದರೆ ಕೊಡುತ್ತಾನೋ ಅವನಿಗೆ ಅಲ್ಲಾಹು ತೊಂದರೆ ಕೊಡುತ್ತಾನೆ. ಯಾರು ಕಷ್ಟಗೊಳಿಸುತ್ತಾನೋ ಅವನಿಗೆ ಅಲ್ಲಾಹು ಕಷ್ಟಗೊಳಿಸುತ್ತಾನೆ."

ಅಬೂ ಮೂಸಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಒಳ್ಳೆಯ ಒಡನಾಡಿ ಮತ್ತು ಕೆಟ್ಟ ಒಡನಾಡಿಯ ಉದಾಹರಣೆಯು ಕಸ್ತೂರಿ ಮಾರುವವನ ಮತ್ತು ತಿದಿ ಊದುವವನಂತೆ. ಕಸ್ತೂರಿ ಮಾರುವವನು ನಿನಗೆ ಸ್ವಲ್ಪ ಕಸ್ತೂರಿಯನ್ನು ಕೊಡಬಹುದು. ಅಥವಾ ನೀನು ಅವನಿಂದ ಅದನ್ನು ಖರೀದಿಸಬಹುದು. ಅಥವಾ ನಿನಗೆ ಅವನಿಂದ ಉತ್ತಮ ಸುವಾಸನೆಯನ್ನು ಅನುಭವಿಸಬಹುದು. ಆದರೆ ತಿದಿ ಊದುವವನು ನಿನ್ನ ಬಟ್ಟೆಯನ್ನು ಸುಟ್ಟು ಹಾಕಬಹುದು. ಅಥವಾ ನಿನಗೆ ಅವನಿಂದ ಕೆಟ್ಟ ವಾಸನೆಯನ್ನು ಅನುಭವಿಸಬೇಕಾಗಬಹುದು."

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಒಬ್ಬ ವ್ಯಕ್ತಿ ಪ್ರವಾದಿಯವರೊಡನೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನನಗೆ ಹಿತವಚನ ನೀಡಿರಿ." ಅವರು ಹೇಳಿದರು: "ಕೋಪಗೊಳ್ಳಬೇಡಿ." ಆ ವ್ಯಕ್ತಿ ಹಲವು ಬಾರಿ ಅದೇ ಪ್ರಶ್ನೆ ಕೇಳಿದಾಗಲೂ ಪ್ರವಾದಿಯವರು ಹೇಳಿದರು: "ಕೋಪಗೊಳ್ಳಬೇಡಿ."

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಕುಸ್ತಿಯಲ್ಲಿ ಗೆಲ್ಲುವವನು ಬಲಶಾಲಿಯಲ್ಲ. ಕೋಪ ಬರುವಾಗ ಮನಸ್ಸನ್ನು ನಿಗ್ರಹಿಸುವವನೇ (ನಿಜವಾದ) ಬಲಶಾಲಿ.”

ಅಬ್ದುಲ್ಲಾ ಬಿನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಒಬ್ಬ ವ್ಯಕ್ತಿ ತನ್ನ ಸಹೋದರನಿಗೆ ಸಂಕೋಚ ಪಡಬಾರದೆಂದು ಬುದ್ಧಿ ಹೇಳುವುದನ್ನು ಕೇಳಿದಾಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸಂಕೋಚವು ಸತ್ಯವಿಶ್ವಾಸದ ಒಂದು ಭಾಗವಾಗಿದೆ."

ಮಿಕ್‌ದಾಮ್ ಬಿನ್ ಮಅದೀಕರಿಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಒಬ್ಬ ವ್ಯಕ್ತಿ ತನ್ನ ಸಹೋದರನನ್ನು ಪ್ರೀತಿಸಿದರೆ, ತಾನು ಅವನನ್ನು ಪ್ರೀತಿಸುತ್ತೇನೆಂದು ಅವನಿಗೆ ತಿಳಿಸಬೇಕು.”