ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ನಾನು ಪ್ರವಾದಿಯವರೊಡನೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದೆ:...
ಪ್ರವಾದಿಯವರೊಡನೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅತಿದೊಡ್ಡ ಪಾಪದ ಬಗ್ಗೆ ಕೇಳಲಾದಾಗ ಅವರು ಹೇಳಿದರು: ಅತಿದೊಡ್ಡ ಪಾಪವೆಂದರೆ ಶಿರ್ಕ್. ಅಂದರೆ ಅಲ್ಲಾಹನ ದೈವಿಕತೆ, ಪ...
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಸರ್ವಶಕ್ತನಾದ...
ಈ ಹದೀಸಿನಲ್ಲಿ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಿಳಿಸುವುದೇನೆಂದರೆ, ಸರ್ವಶಕ್ತನಾದ ಅಲ್ಲಾಹು ಸಹಭಾಗಿಗಳ ಅಗತ್ಯದಿಂದ ಸಂಪೂರ್ಣ ಮುಕ್ತನಾಗಿದ್ದಾನೆ. ಅಂ...
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನನ್ನ ಸಮುದಾಯದಲ್ಲಿರುವ ಎಲ್ಲರ...
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ತಿಳಿಸುವುದೇನೆಂದರೆ, ಅವರ ಸಮುದಾಯಕ್ಕೆ ಸೇರಿದ ಎಲ್ಲರೂ ಸ್ವರ್ಗಕ್ಕೆ ಹೋಗುತ್ತಾರೆ; ನಿರಾಕರಿಸಿದವರ ಹೊರತು!...
ಉಮರ್ ಬಿನ್ ಖತ್ತಾಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು...
ತನ್ನನ್ನು ಪ್ರಶಂಸಿಸುವಾಗ ಮಿತಿಮೀರುವುದು ಮತ್ತು ಧರ್ಮವು ವಿಧಿಸಿದ ಎಲ್ಲೆಯನ್ನು ಮೀರುವುದು, ಅಲ್ಲಾಹನಿಗೆ ಮಾತ್ರ ಸೀಮಿತವಾಗಿರುವ ಗುಣಲಕ್ಷಣಗಳನ್ನು ಅಥವಾ ಅವನು ಮಾತ್ರ ಮಾಡುವ ಕ್ರಿಯೆ...
ಅನಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮ ತಂದೆ-ತಾಯಿ, ಮಕ್ಕಳು...
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ತಿಳಿಸುವುದೇನೆಂದರೆ, ಎಲ್ಲಿಯ ತನಕ ಒಬ್ಬ ಮುಸಲ್ಮಾನನು ತನ್ನ ತಾಯಿ, ತಂದೆ, ಮಗ, ಮಗಳು ಮತ್ತು ಇತರೆಲ್ಲ ಜನರಲ್ಲ...

ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ನಾನು ಪ್ರವಾದಿಯವರೊಡನೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದೆ: "ಅಲ್ಲಾಹನ ದೃಷ್ಟಿಯಲ್ಲಿ ಅತಿದೊಡ್ಡ ಪಾಪ ಯಾವುದು?" ಅವರು ಉತ್ತರಿಸಿದರು: "ಅಲ್ಲಾಹು ನಿನ್ನನ್ನು ಸೃಷ್ಟಿಸಿದವನಾಗಿದ್ದೂ ಸಹ ನೀನು ಅವನೊಂದಿಗೆ ಇತರರನ್ನು ಸರಿಸಾಟಿಯಾಗಿ ಮಾಡುವುದು." ನಾನು ಹೇಳಿದೆ: "ಅದು ನಿಜಕ್ಕೂ ಗಂಭೀರ ಪಾಪವಾಗಿದೆ." ನಾನು ಕೇಳಿದೆ: " ನಂತರ ಯಾವುದು?" ಅವರು ಉತ್ತರಿಸಿದರು: "ನಿನ್ನ ಜೊತೆಗೆ ಆಹಾರ ಸೇವಿಸುವನು ಎಂಬ ಭಯದಿಂದ ನೀನು ನಿನ್ನ ಮಗುವನ್ನು ಹತ್ಯೆ ಮಾಡುವುದು." ನಾನು ಕೇಳಿದೆ: "ನಂತರ ಯಾವುದು?" ಅವರು ಉತ್ತರಿಸಿದರು: "ನಿನ್ನ ನೆರೆಮನೆಯವನ ಹೆಂಡತಿಯೊಂದಿಗೆ ವ್ಯಭಿಚಾರ ಮಾಡುವುದು."

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಸರ್ವಶಕ್ತನಾದ ಅಲ್ಲಾಹು ಹೇಳುತ್ತಾನೆ: ನಾನು ಸಹಭಾಗಿಗಳ ಅಗತ್ಯದಿಂದ ಸಂಪೂರ್ಣ ಮುಕ್ತನಾಗಿರುವವನು. ಯಾರು ಒಂದು ಕರ್ಮವನ್ನು ಮಾಡಿ ಅದರಲ್ಲಿ ನನ್ನೊಂದಿಗೆ ಇತರರನ್ನು ಸಹಭಾಗಿಯಾಗಿ ಮಾಡುತ್ತಾನೋ, ನಾನು ಅವನನ್ನು ಮತ್ತು ಅವನ ಸಹಭಾಗಿತ್ವವನ್ನು ತೊರೆದು ಬಿಡುವೆನು”.

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನನ್ನ ಸಮುದಾಯದಲ್ಲಿರುವ ಎಲ್ಲರೂ ಸ್ವರ್ಗಕ್ಕೆ ಹೋಗುತ್ತಾರೆ; ನಿರಾಕರಿಸಿದವನ ಹೊರತು." ಅನುಯಾಯಿಗಳು ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! (ಸ್ವರ್ಗಕ್ಕೆ ಹೋಗಲು) ನಿರಾಕರಿಸುವವನು ಯಾರು?" ಅವರು ಉತ್ತರಿಸಿದರು: "ಯಾರು ನನ್ನ ಆಜ್ಞೆಗಳನ್ನು ಪಾಲಿಸುತ್ತಾನೋ ಅವನು ಸ್ವರ್ಗಕ್ಕೆ ಹೋಗುತ್ತಾನೆ; ಮತ್ತು ಯಾರು ನನ್ನ ಆಜ್ಞೆಗಳನ್ನು ಪಾಲಿಸುವುದಿಲ್ಲವೋ ಅವನು (ಸ್ವರ್ಗಕ್ಕೆ ಹೋಗಲು) ನಿರಾಕರಿಸಿದನು."

ಉಮರ್ ಬಿನ್ ಖತ್ತಾಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: “ಕ್ರೈಸ್ತರು ಮರ್ಯಮರ ಮಗನನ್ನು ಮಿತಿಮೀರಿ ಪ್ರಶಂಸಿಸಿದಂತೆ ನೀವು ನನ್ನನ್ನು ಮಿತಿಮೀರಿ ಪ್ರಶಂಸಿಸಬೇಡಿ. ಏಕೆಂದರೆ ನಾನು ಅಲ್ಲಾಹನ ಒಬ್ಬ ದಾಸ ಮಾತ್ರ. ಆದ್ದರಿಂದ ನೀವು ಅಲ್ಲಾಹನ ದಾಸ ಮತ್ತು ಸಂದೇಶವಾಹಕ ಎಂದು ಹೇಳಿರಿ.”

ಅನಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮ ತಂದೆ-ತಾಯಿ, ಮಕ್ಕಳು ಮತ್ತು ಇತರೆಲ್ಲಾ ಜನರಿಗಿಂತ ನಾನು ನಿಮಗೆ ಹೆಚ್ಚು ಪ್ರೀತಿಯುಳ್ಳವನಾಗುವ ತನಕ ನಿಮ್ಮಲ್ಲಿ ಯಾರೂ ಸಂಪೂರ್ಣ ಸತ್ಯವಿಶ್ವಾಸಿಯಾಗುವುದಿಲ್ಲ."

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಾನು ನಿಮ್ಮನ್ನು ಬಿಟ್ಟಂತೆಯೇ ನೀವು ನನ್ನನ್ನು ಬಿಡಿ. ನಿಮಗಿಂತ ಮೊದಲಿನವರು ನಾಶವಾಗಿದ್ದು ಅವರು ತಮ್ಮ ಪ್ರವಾದಿಗಳೊಂದಿಗೆ ಪ್ರಶ್ನೆ ಕೇಳಿ ನಂತರ ಅದಕ್ಕೆ ವಿರುದ್ಧವಾಗಿ ಸಾಗಿದ ಕಾರಣದಿಂದಾಗಿದೆ. ಆದ್ದರಿಂದ, ನಾನು ನಿಮಗೆ ಒಂದು ವಿಷಯವನ್ನು ನಿಷೇಧಿಸಿದರೆ ಅದರಿಂದ ದೂರವಿರಿ. ನಾನು ನಿಮಗೆ ಏನಾದರೂ ಆಜ್ಞಾಪಿಸಿದರೆ, ನಿಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಅದನ್ನು ನಿರ್ವಹಿಸಿರಿ."

ಅಬ್ದುಲ್ಲಾ ಬಿನ್ ಅಮ್ರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ನನ್ನಿಂದ ಒಂದೇ ಒಂದು ವಚನವನ್ನಾದರೂ ತಲುಪಿಸಿ. ಬನೂ ಇಸ್ರಾಯೀಲರಿಂದ ಉಲ್ಲೇಖಿಸಿ, ಅದರಲ್ಲಿ ಯಾವುದೇ ತೊಂದರೆಯಿಲ್ಲ. ಆದರೆ, ಯಾರು ನನ್ನ ಬಗ್ಗೆ ಉದ್ದೇಶಪೂರ್ವಕವಾಗಿ ಸುಳ್ಳು ಹೇಳುತ್ತಾನೋ ಅವನು ನರಕದಲ್ಲಿ ತನ್ನ ಆಸನವನ್ನು ಸಿದ್ಧಪಡಿಸಿಕೊಳ್ಳಲಿ.”

ಮಿಕ್ದಾಮ್ ಬಿನ್ ಮಅದೀ ಕರಿಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಎಚ್ಚರಾ! ಒರಗು ಕುರ್ಚಿಯಲ್ಲಿ ಕುಳಿತಿರುವ ಒಬ್ಬ ವ್ಯಕ್ತಿಗೆ ನಾನು ಹೇಳಿದ ಒಂದು ಹದೀಸ್ ತಲುಪುತ್ತದೆ. ಆಗ ಅವನು ಹೇಳುತ್ತಾನೆ: ನಮ್ಮ ಬಳಿ ಅಲ್ಲಾಹನ ಗ್ರಂಥವಿದೆ. ಅದರಲ್ಲಿ ಏನು ಅನುಮತಿಸಲಾಗಿದೆಯೆಂದು ನಾವು ಕಾಣುತ್ತೇವೆಯೋ ಅದನ್ನು ನಾವು ಧರ್ಮಸಮ್ಮತವೆಂದು ಪರಿಗಣಿಸುತ್ತೇವೆ., ಅದರಲ್ಲಿ ಏನು ನಿಷೇಧಿಸಲಾಗಿದೆಯೆಂದು ನಾವು ಕಾಣುತ್ತೇವೆಯೋ, ಅದನ್ನು ನಾವು ಧರ್ಮನಿಷಿದ್ಧವೆಂದು ಪರಿಗಣಿಸುತ್ತೇವೆ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಿಷೇಧಿಸಿದ್ದೆಲ್ಲವೂ ಅಲ್ಲಾಹು ನಿಷೇಧಿಸಿದಂತೆಯೇ ಆಗಿದೆ."

ಆಯಿಶ ಮತ್ತು ಅಬ್ದುಲ್ಲಾ ಬಿನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರಿಬ್ಬರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮರಣಶಯ್ಯೆಯಲ್ಲಿದ್ದಾಗ, ಅವರು ತಮ್ಮ ಮುಖವನ್ನು ಬಟ್ಟೆಯಿಂದ ಮುಚ್ಚತೊಡಗಿದರು. ಅವರಿಗೆ ಅದರಿಂದ ಸಂಕಟವಾಗುವಾಗ ಅದನ್ನು ಮುಖದಿಂದ ತೆಗೆಯುತ್ತಾ ಹೇಳುತ್ತಿದ್ದರು: "ಯಹೂದಿಗಳು ಮತ್ತು ಕ್ರೈಸ್ತರ ಮೇಲೆ ಅಲ್ಲಾಹನ ಶಾಪವಿರಲಿ. ಏಕೆಂದರೆ, ಅವರು ತಮ್ಮ ಪ್ರವಾದಿಗಳ ಸಮಾಧಿಗಳನ್ನು ಆರಾಧನಾ ಸ್ಥಳಗಳನ್ನಾಗಿ ಮಾಡಿಕೊಂಡರು." ಅವರು ಮಾಡಿದ ಕಾರ್ಯದ ಬಗ್ಗೆ ಪ್ರವಾದಿಯವರು ಎಚ್ಚರಿಸುತ್ತಿದ್ದರು.

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಓ ಅಲ್ಲಾಹ್, ನನ್ನ ಸಮಾಧಿಯನ್ನು ವಿಗ್ರಹವನ್ನಾಗಿ ಮಾಡಬೇಡ. ತಮ್ಮ ಪ್ರವಾದಿಗಳ ಸಮಾಧಿಗಳನ್ನು ಆರಾಧನಾಲಯಗಳನ್ನಾಗಿ ಮಾಡಿಕೊಂಡ ಜನರನ್ನು ಅಲ್ಲಾಹು ಶಪಿಸಿದ್ದಾನೆ."

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ನಿಮ್ಮ ಮನೆಗಳನ್ನು ಸಮಾಧಿಗಳನ್ನಾಗಿ ಮಾಡಬೇಡಿ; ನನ್ನ ಸಮಾಧಿಯನ್ನು ಉತ್ಸವ ಸ್ಥಳವಾಗಿ ಮಾಡಬೇಡಿ; ನನ್ನ ಮೇಲೆ ಸ್ವಲಾತ್ ಹೇಳಿರಿ, ನೀವು ಎಲ್ಲಿದ್ದರೂ ನಿಶ್ಚಯವಾಗಿಯೂ ನಿಮ್ಮ ಸ್ವಲಾತ್ ನನ್ನನ್ನು ತಲುಪುತ್ತದೆ.”

ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಒಮ್ಮೆ ಉಮ್ಮು ಸಲಮ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ಅಬಿಸೀನಿಯಾದಲ್ಲಿ ನೋಡಿದ ಮಾರಿಯ ಎಂಬ ಹೆಸರಿನ ಇಗರ್ಜಿಯ ಬಗ್ಗೆ ಮತ್ತು ಅದರಲ್ಲಿ ಅವರು ನೋಡಿದ ಚಿತ್ರಗಳ ಬಗ್ಗೆ ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಗಮನ ಸೆಳೆದಾಗ, ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅವರು ಎಂತಹ ಜನರೆಂದರೆ, ಅವರಲ್ಲಿ ಒಬ್ಬ ನೀತಿವಂತ ದಾಸ ಅಥವಾ ಒಬ್ಬ ನೀತಿವಂತ ವ್ಯಕ್ತಿ ಮರಣಹೊಂದಿದರೆ, ಅವರು ಅವನ ಸಮಾಧಿಯ ಮೇಲೆ ಆರಾಧನಾಲಯವನ್ನು ನಿರ್ಮಿಸುತ್ತಿದ್ದರು ಮತ್ತು ಅದರಲ್ಲಿ ಆ ಚಿತ್ರಗಳನ್ನು ರಚಿಸುತ್ತಿದ್ದರು. ಅವರು ಅಲ್ಲಾಹನ ದೃಷ್ಟಿಯಲ್ಲಿ ಸೃಷ್ಟಿಗಳಲ್ಲೇ ಅತ್ಯಂತ ನಿಕೃಷ್ಟರು."