ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಆಹಾರ...
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿ ಇರಲಿ) ಇಲ್ಲಿ ತಿಳಿಸುವುದೇನೆಂದರೆ, ದಾಸನು ಅಲ್ಲಾಹನ ಅನುಗ್ರಹಗಳಿಗೆ ಕೃತಜ್ಞತೆ ಸಲ್ಲಿಸಲು ಅಲ್ಲಾಹನನ್ನು ಸ್ತುತಿಸುವುದು ಅಲ್...
ಸಲಮ ಬಿನ್ ಅಕ್ವಅ್‌ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. "ಒಮ್ಮೆ ಒಬ್ಬ ವ್ಯಕ್ತಿ ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿ ಎಡಗೈಯ...
ಒಮ್ಮೆ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಒಬ್ಬ ವ್ಯಕ್ತಿ ತನ್ನ ಎಡಗೈಯಿಂದ ಆಹಾರ ಸೇವಿಸುವುದನ್ನು ಕಂಡರು. ಅವರು ಅವನಿಗೆ ಬಲಗೈಯಿಂದ ಆಹಾರ ಸೇವಿಸುವಂತೆ ಆ...
ಸಹಲ್ ಬಿನ್ ಮುಆದ್ ಬಿನ್ ಅನಸ್ ತಮ್ಮ ತಂದೆಯಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಆಹಾರ ಸೇವಿಸಿದ ನ...
ಆಹಾರ ಸೇವಿಸಿದವನು ಅಲ್ಲಾಹನನ್ನು ಸ್ತುತಿಸಬೇಕೆಂದು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ಒತ್ತಾಯಿಸುತ್ತಿದ್ದಾರೆ. ಏಕೆಂದರೆ,ಅಲ್ಲಾಹನ ಮೂಲಕ ಮತ್ತು...
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸೀನುವಾಗ ತಮ್ಮ ಕೈಯನ್ನು—...
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸೀನುವಾಗ: ಮೊದಲನೆಯದಾಗಿ, ಅವರು ತಮ್ಮ ಬಾಯಿಯಿಂದ ಅಥವಾ ಮೂಗಿನಿಂದ ಏನಾದರೂ ಹೊರಬಂದು ತಮ್ಮ ಬಳಿಯಿರುವವರಿಗೆ ತೊಂದರ...
ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿ...
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ತಿಳಿಸುವುದೇನೆಂದರೆ: ಧಾರ್ಮಿಕ ವಿಷಯಗಳಲ್ಲಿ ಅಲ್ಲಾಹು ನೀಡಿದ ರಿಯಾಯಿತಿಗಳನ್ನು, ಅಂದರೆ ನಿಯಮಗಳಲ್ಲಿ ಮತ್ತು ಆ...

ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಆಹಾರವನ್ನು ಸೇವಿಸಿ ಅದಕ್ಕಾಗಿ ಅಲ್ಲಾಹನಿಗೆ ಕೃತಜ್ಞತೆ ಸಲ್ಲಿಸುವ ಮತ್ತು ಪಾನೀಯವನ್ನು ಸೇವಿಸಿ ಅದಕ್ಕಾಗಿ ಅಲ್ಲಾಹನಿಗೆ ಕೃತಜ್ಞತೆ ಸಲ್ಲಿಸುವ ದಾಸನನ್ನು ಅಲ್ಲಾಹು ಪ್ರೀತಿಸುತ್ತಾನೆ."

ಸಲಮ ಬಿನ್ ಅಕ್ವಅ್‌ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. "ಒಮ್ಮೆ ಒಬ್ಬ ವ್ಯಕ್ತಿ ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿ ಎಡಗೈಯಿಂದ ಆಹಾರ ಸೇವಿಸಿದನು. ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಬಲಗೈಯಿಂದ ಸೇವಿಸಿರಿ." ಆ ವ್ಯಕ್ತಿ ಉತ್ತರಿಸಿದನು: "ನನಗೆ ಅದು ಸಾಧ್ಯವಿಲ್ಲ." ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮಗೆ ಅದು ಸಾಧ್ಯವಾಗದಿರಲಿ." ಅಹಂಕಾರದ ಹೊರತು ಬೇರೇನೂ ಅವನನ್ನು ಬಲಗೈಯಿಂದ ಸೇವಿಸದಂತೆ ತಡೆದಿರಲಿಲ್ಲ. ನಂತರ ಅವನಿಗೆ ಅದನ್ನು ಬಾಯಿಗೆ ಎತ್ತಲು ಆಗಲೇ ಇಲ್ಲ."

ಸಹಲ್ ಬಿನ್ ಮುಆದ್ ಬಿನ್ ಅನಸ್ ತಮ್ಮ ತಂದೆಯಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಆಹಾರ ಸೇವಿಸಿದ ನಂತರ, “ಅಲ್-ಹಮ್ದುಲಿಲ್ಲಾಹಿಲ್ಲದೀ ಅತ್‌ಅಮನೀ ಹಾದಾ ವರಝಕನೀಹಿ ಮಿನ್ ಗೈರಿ ಹೌಲಿನ್ ಮಿನ್ನೀ ವಲಾ ಕುವ್ವ.” (ಸ್ವಶಕ್ತಿಯಾಗಲಿ, ಸ್ವಸಾಮರ್ಥ್ಯವಾಗಲಿ ಇಲ್ಲದ ನನಗೆ ಈ ಆಹಾರವನ್ನು ಉಣಿಸಿದ ಮತ್ತು ಇದನ್ನು ನನಗೆ ಒದಗಿಸಿದ ಅಲ್ಲಾಹನಿಗೆ ಸರ್ವಸ್ತುತಿ) ಎಂದು ಹೇಳುತ್ತಾನೋ, ಅವನ ಗತ ಪಾಪಗಳನ್ನು ಕ್ಷಮಿಸಲಾಗುವುದು."

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸೀನುವಾಗ ತಮ್ಮ ಕೈಯನ್ನು—ಅಥವಾ ಬಟ್ಟೆಯನ್ನು—ಮುಖದ ಮೇಲಿಡುತ್ತಿದ್ದರು ಮತ್ತು ಶಬ್ದವನ್ನು ಕಡಿಮೆ ಮಾಡುತ್ತಿದ್ದರು—ಅಥವಾ ತಗ್ಗಿಸುತ್ತಿದ್ದರು.

ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಶ್ಚಯವಾಗಿಯೂ ತಾನು ಕಡ್ಡಾಯಗೊಳಿಸಿದ ಕಾರ್ಯಗಳನ್ನು (ದಾಸರು) ನಿರ್ವಹಿಸುವುದನ್ನು ಅಲ್ಲಾಹು ಇಷ್ಟಪಡುವಂತೆಯೇ ತಾನು ರಿಯಾಯಿತಿ ನೀಡಿದ ಕಾರ್ಯಗಳನ್ನು (ದಾಸರು) ಸ್ವೀಕರಿಸುವುದನ್ನು ಅವನು ಇಷ್ಟಪಡುತ್ತಾನೆ."

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅಲ್ಲಾಹು ಯಾರಿಗಾದರೂ ಒಳಿತನ್ನು ಬಯಸಿದರೆ, ಅವನಿಗೆ ಕಷ್ಟಗಳು ಬಾಧಿಸುವಂತೆ ಮಾಡುತ್ತಾನೆ."

ಅಬೂ ಸಈದ್ ಖುದ್ರಿ ಮತ್ತು ಅಬೂ ಹುರೈರ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಒಬ್ಬ ಮುಸಲ್ಮಾನನಿಗೆ ಆಯಾಸ, ಅನಾರೋಗ್ಯ, ಆತಂಕ, ದುಃಖ, ಹಾನಿ, ಸಂಕಟ ಮುಂತಾದ ಯಾವುದೇ ಸಂಭವಿಸಿದರೂ, ಎಲ್ಲಿಯವರೆಗೆಂದರೆ ಒಂದು ಸಣ್ಣ ಮುಳ್ಳು ಚುಚ್ಚಿದರೂ ಸಹ, ಅದಕ್ಕೆ ಪರಿಹಾರವಾಗಿ ಅಲ್ಲಾಹು ಅವನ ಕೆಲವು ಪಾಪಗಳನ್ನು ಅಳಿಸದೆ ಇರುವುದಿಲ್ಲ.”

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸತ್ಯವಿಶ್ವಾಸಿಗಳು ಮತ್ತು ಸತ್ಯವಿಶ್ವಾಸಿನಿಗಳು, ಅವರು ಅಲ್ಲಾಹನನ್ನು ಭೇಟಿಯಾಗುವವರೆಗೂ ಸ್ವತಃ ಅವರಲ್ಲಿ, ಅವರ ಮಕ್ಕಳಲ್ಲಿ ಮತ್ತು ಅವರ ಸಂಪತ್ತಿನಲ್ಲಿ ಪರೀಕ್ಷೆಗಳು ಸಂಭವಿಸುತ್ತಲೇ ಇರುತ್ತವೆ; ಎಲ್ಲಿಯವರೆಗೆಂದರೆ, ಅವರು ಸಂಪೂರ್ಣ ಪಾಪರಹಿತರಾಗುವ ತನಕ."

ಸುಹೈಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸತ್ಯವಿಶ್ವಾಸಿಯ ವಿಷಯವು ಅತ್ಯಂತ ವಿಸ್ಮಯಕಾರಿಯಾಗಿದೆ! ಅವನ ಎಲ್ಲಾ ವಿಷಯಗಳೂ ಅವನಿಗೆ ಒಳಿತಾಗಿವೆ. ಇದು ಒಬ್ಬ ಸತ್ಯವಿಶ್ವಾಸಿಗಲ್ಲದೆ ಇನ್ನಾರಿಗೂ ಇಲ್ಲ. ಅವನಿಗೇನಾದರೂ ಒಳ್ಳೆಯದು ಸಂಭವಿಸಿದರೆ ಅವನು ಕೃತಜ್ಞನಾಗುತ್ತಾನೆ, ಅದು ಅವನಿಗೆ ಒಳಿತಾಗಿದೆ. ಇನ್ನು ಅವನಿಗೇನಾದರೂ ತೊಂದರೆ ಬಾಧಿಸಿದರೆ ಅವನು ತಾಳ್ಮೆ ತೋರುತ್ತಾನೆ. ಅದು ಕೂಡ ಅವನಿಗೆ ಒಳಿತಾಗಿದೆ."

ಅಬೂ ಮೂಸಾ ಅಶ್‌ಅರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಒಬ್ಬ ದಾಸ ಅನಾರೋಗ್ಯ ಪೀಡಿತನಾದರೆ ಅಥವಾ ಪ್ರಯಾಣದಲ್ಲಿದ್ದರೆ, ಅವನು ನಿವಾಸಿಯಾಗಿದ್ದಾಗ ಮತ್ತು ಆರೋಗ್ಯವಂತನಾಗಿದ್ದಾಗ ಏನೆಲ್ಲಾ ಕರ್ಮಗಳನ್ನು ಮಾಡುತ್ತಿದ್ದನೋ ಅವೆಲ್ಲವನ್ನೂ ಅವನ ಹೆಸರಿಗೆ ದಾಖಲಿಸಲಾಗುತ್ತದೆ.”

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅಂಧಕಾರ ತುಂಬಿದ ರಾತ್ರಿಗಳ ತುಂಡುಗಳಂತಿರುವ ಪರೀಕ್ಷೆಗಳು ಬರುವುದಕ್ಕೆ ಮೊದಲು ಸತ್ಕರ್ಮಗಳನ್ನು ಮಾಡಲು ಧಾವಿಸಿರಿ. ಆಗ ಬೆಳಗ್ಗೆ ಸತ್ಯವಿಶ್ವಾಸಿಯಾಗಿದ್ದ ವ್ಯಕ್ತಿ ಸಂಜೆಯಾದಾಗ ಸತ್ಯನಿಷೇಧಿಯಾಗುವನು ಅಥವಾ ಸಂಜೆ ಸತ್ಯವಿಶ್ವಾಸಿಯಾಗಿದ್ದ ವ್ಯಕ್ತಿ ಬೆಳಗಾದಾಗ ಸತ್ಯನಿಷೇಧಿಯಾಗುವನು. ಭೌತಿಕ ಲಾಭಕ್ಕಾಗಿ ಅವನು ತನ್ನ ಧರ್ಮವನ್ನು ಮಾರಾಟ ಮಾಡುವನು."

ಮುಆವಿಯ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಅಲ್ಲಾಹು ಯಾರಿಗೆ ಒಳಿತನ್ನು ಬಯಸುತ್ತಾನೋ ಅವನಿಗೆ ಧಾರ್ಮಿಕ ವಿಷಯಗಳಲ್ಲಿ ಪಾಂಡಿತ್ಯವನ್ನು ನೀಡುತ್ತಾನೆ. ನಾನು ಕೇವಲ ಹಂಚುವವನು ಮಾತ್ರ. ಕೊಡುವವನು ಅಲ್ಲಾಹು. ಈ ಸಮುದಾಯವು ಅಲ್ಲಾಹನ ನಿಯಮಗಳನ್ನು ಅನುಸರಿಸುತ್ತಲೇ ಇರುವುದು, ಅವರನ್ನು ವಿರೋಧಿಸುವವರು ಅವರಿಗೆ ಯಾವುದೇ ತೊಂದರೆ ಮಾಡಲಾರರು, ಅಲ್ಲಾಹನ ಆಜ್ಞೆ ಜಾರಿಗೆ ಬರುವ ತನಕ."