ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ದಿನಕ್ಕೆ ನೂರು ಬಾರಿ ‘ಸ...
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿ ಇರಲಿ) ಇಲ್ಲಿ ತಿಳಿಸುವುದೇನೆಂದರೆ, ಯಾರು ದಿನಕ್ಕೆ ನೂರು ಬಾರಿ ‘ಸುಬ್‌ಹಾನಲ್ಲಾಹಿ ವಬಿಹಮ್ದಿಹೀ’ ಎಂದು ಹೇಳುತ್ತಾರೋ, ಅವರ ಪ...
ಅಬೂ ಮಾಲಿಕ್ ಅಶ್‌ಅರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಶು...
ಇಲ್ಲಿ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಿಳಿಸುವುದೇನೆಂದರೆ: ವುದೂ (ಅಂಗಸ್ನಾನ) ಮತ್ತು ಸ್ನಾನದಿಂದ ಬಾಹ್ಯ ಶುದ್ಧೀಕರಣ ಉಂಟಾಗುತ್ತದೆ. ಇದು ನಮಾಝ್ ಸಿ...
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸುಬ್‌ಹಾನಲ್ಲ...
ಈ ಮಹಾನ್ ವಚನಗಳ ಮೂಲಕ ಅಲ್ಲಾಹನನ್ನು ಸ್ಮರಿಸುವುದು ಇಹಲೋಕ ಮತ್ತು ಅದರಲ್ಲಿರುವ ಎಲ್ಲಾ ವಸ್ತುಗಳಿಗಿಂತಲೂ ಶ್ರೇಷ್ಠವಾಗಿದೆಯೆಂದು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂ...
ಜಾಬಿರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇ...
ಲಾಇಲಾಹ ಇಲ್ಲಲ್ಲಾಹ್ ಅತಿಶ್ರೇಷ್ಠ ಸ್ಮರಣೆ (ದಿಕ್ರ್) ಮತ್ತು ಅಲ್-ಹಮ್ದುಲಿಲ್ಲಾಹ್ ಅತಿಶ್ರೇಷ್ಠ ಪ್ರಾರ್ಥನೆ ಎಂದು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿ ಇರಲಿ) ತಿ...
ಖೌಲ ಬಿಂತ್ ಹಕೀಂ ಸುಲಮಿಯ್ಯ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇ...
ಒಬ್ಬ ವ್ಯಕ್ತಿ ತನ್ನ ಯಾತ್ರೆಯಲ್ಲಿ, ಅಥವಾ ಪ್ರವಾಸದಲ್ಲಿ, ಅಥವಾ ಇತರ ಯಾವುದೇ ಸಂದರ್ಭದಲ್ಲಿ ಒಂದು ಸ್ಥಳದಲ್ಲಿ ಇಳಿದು, ಆ ಸ್ಥಳದಲ್ಲಿ ಅವನು ಭಯಪಡುವ ಯಾವುದನ್ನಾದರೂ ದೂರವಿಡಲು ಬಯಸುವ...

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ದಿನಕ್ಕೆ ನೂರು ಬಾರಿ ‘ಸುಬ್‌ಹಾನಲ್ಲಾಹಿ ವಬಿಹಮ್ದಿಹೀ’ ಎಂದು ಹೇಳುತ್ತಾರೋ, ಅವರ ಪಾಪಗಳು ಸಮುದ್ರದ ನೊರೆಯಷ್ಟೇ ಇದ್ದರೂ ಸಹ ಅಳಿಸಿಹೋಗುತ್ತವೆ."

ಅಬೂ ಮಾಲಿಕ್ ಅಶ್‌ಅರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಶುದ್ಧೀಕರಣವು ಸತ್ಯವಿಶ್ವಾಸದ ಅರ್ಧ ಭಾಗವಾಗಿದೆ. ‘ಅಲ್-ಹಮ್ದುಲಿಲ್ಲಾಹ್’ ಎಂಬ ವಚನವು ತಕ್ಕಡಿಯನ್ನು ತುಂಬುತ್ತದೆ. ‘ಸುಬ್‌ಹಾನಲ್ಲಾಹ್ ವಲ್-ಹಮ್ದುಲಿಲ್ಲಾಹ್’ ಎಂಬ ವಚನಗಳು ತಕ್ಕಡಿಯನ್ನು ತುಂಬುತ್ತವೆ, ಅಥವಾ ಭೂಮ್ಯಾಕಾಶಗಳ ನಡುವಿನ ಭಾಗವನ್ನು ತುಂಬುತ್ತವೆ. ನಮಾಝ್ ಬೆಳಕಾಗಿದೆ, ದಾನವು ಪುರಾವೆಯಾಗಿದೆ, ತಾಳ್ಮೆಯು ಪ್ರಕಾಶವಾಗಿದೆ, ಮತ್ತು ಕುರ್‌ಆನ್ ನಿನ್ನ ಪರವಾಗಿ ಅಥವಾ ನಿನಗೆ ವಿರುದ್ಧವಾಗಿರುವ ಪುರಾವೆಯಾಗಿದೆ. ಪ್ರತಿಯೊಬ್ಬ ವ್ಯಕ್ತಿಯೂ ಬೆಳಗಾಗುತ್ತಲೇ ತನ್ನ ಆತ್ಮವನ್ನು ಮಾರಾಟ ಮಾಡುತ್ತಾನೆ. ನಂತರ ಅವನು ಅದನ್ನು ಸ್ವತಂತ್ರಗೊಳಿಸುತ್ತಾನೆ ಅಥವಾ ನಾಶಗೊಳಿಸುತ್ತಾನೆ."

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸುಬ್‌ಹಾನಲ್ಲಾಹಿ, ವಲ್‌ಹಂದುಲಿಲ್ಲಾಹಿ, ವಲಾಇಲಾಹ ಇಲ್ಲಲ್ಲಾಹು ವಲ್ಲಾಹು ಅಕ್ಬರ್ ಎಂದು ಹೇಳುವುದು ಸೂರ್ಯ ಬೆಳಗಿದ ಎಲ್ಲ ವಸ್ತುಗಳಿಗಿಂತಲೂ ನನಗೆ ಹೆಚ್ಚು ಇಷ್ಟವಾಗಿದೆ."

ಜಾಬಿರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: “ಲಾಇಲಾಹ ಇಲ್ಲಲ್ಲಾಹ್ (ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾಗಿ ಅನ್ಯರಿಲ್ಲ) ಅತಿಶ್ರೇಷ್ಠ ಸ್ಮರಣೆಯಾಗಿದೆ ಮತ್ತು ಅಲ್-ಹಮ್ದುಲಿಲ್ಲಾಹ್ (ಅಲ್ಲಾಹನಿಗೆ ಸರ್ವಸ್ತುತಿ) ಅತಿಶ್ರೇಷ್ಠ ಪ್ರಾರ್ಥನೆಯಾಗಿದೆ.”

ಖೌಲ ಬಿಂತ್ ಹಕೀಂ ಸುಲಮಿಯ್ಯ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಯಾರು ಒಂದು ಸ್ಥಳದಲ್ಲಿ ಇಳಿದು, 'ಅಊದು ಬಿಕಲಿಮಾತಿಲ್ಲಾಹಿ ತ್ತಾಮ್ಮಾತಿ ಮಿನ್ ಶರ್‍ರಿ ಮಾ ಖಲಕ್' (ಅರ್ಥ: ಅಲ್ಲಾಹನ ಪರಿಪೂರ್ಣ ವಚನಗಳೊಂದಿಗೆ ಅವನು ಸೃಷ್ಟಿಸಿದ ಎಲ್ಲಾ ಕೆಡುಕುಗಳಿಂದ ನಾನು ರಕ್ಷೆ ಬೇಡುತ್ತೇನೆ) ಎಂದು ಹೇಳುತ್ತಾನೋ ಅವನು ಆ ಸ್ಥಳದಿಂದ ತೆರಳುವ ತನಕ ಅವನಿಗೆ ಯಾವುದೇ ವಸ್ತು ತೊಂದರೆ ಕೊಡುವುದಿಲ್ಲ."

ಅಬೂ ಹುಮೈದ್ ಅಥವಾ ಅಬೂ ಉಸೈದ್ ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮಲ್ಲೊಬ್ಬರು ಮಸೀದಿಯನ್ನು ಪ್ರವೇಶಿಸುವಾಗ, 'ಅಲ್ಲಾಹುಮ್ಮಫ್ತಹ್ ಲೀ ಅಬ್ವಾಬ ರಹ್ಮತಿಕ್' (ಓ ಅಲ್ಲಾಹ್! ನಿನ್ನ ದಯೆಯ ಬಾಗಿಲುಗಳನ್ನು ನನಗೆ ತೆರೆದುಕೊಡು) ಎಂದು ಹೇಳಬೇಕು ಮತ್ತು ಹೊರಬರುವಾಗ, 'ಅಲ್ಲಾಹುಮ್ಮ ಇನ್ನೀ ಅಸ್‌ಅಲುಕ ಮಿನ್ ಫದ್ಲಿಕ್' (ಓ ಅಲ್ಲಾಹ್! ನಿನ್ನ ಔದಾರ್ಯದಿಂದ ನಾನು ನಿನ್ನಲ್ಲಿ ಬೇಡುತ್ತೇನೆ) ಎಂದು ಹೇಳಬೇಕು."

ಜಾಬಿರ್ ಬಿನ್ ಅಬ್ದುಲ್ಲಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ಅವರು ಕೇಳಿದ್ದಾರೆ: "ಒಬ್ಬ ವ್ಯಕ್ತಿ ಮನೆಯನ್ನು ಪ್ರವೇಶಿಸುವಾಗ ಮತ್ತು ಆಹಾರ ಸೇವಿಸುವಾಗ ಅಲ್ಲಾಹನನ್ನು ಸ್ಮರಿಸಿದರೆ, ಶೈತಾನನು ಹೇಳುತ್ತಾನೆ: ನಿಮಗೆ ಇಲ್ಲಿ ರಾತ್ರಿವಾಸವಿಲ್ಲ ಮತ್ತು ರಾತ್ರಿಭೋಜನವಿಲ್ಲ. ಆದರೆ ಅವನು ಮನೆಯನ್ನು ಪ್ರವೇಶಿಸುವಾಗ ಅಲ್ಲಾಹನನ್ನು ಸ್ಮರಿಸದಿದ್ದರೆ, ಶೈತಾನನು ಹೇಳುತ್ತಾನೆ: ನೀವು ರಾತ್ರಿವಾಸವನ್ನು ಪಡೆದಿದ್ದೀರಿ. ಅವನು ಆಹಾರ ಸೇವಿಸುವಾಗ ಅಲ್ಲಾಹನನ್ನು ಸ್ಮರಿಸದಿದ್ದರೆ ಶೈತಾನನು ಹೇಳುತ್ತಾನೆ: ನೀವು ರಾತ್ರಿವಾಸವನ್ನು ಮತ್ತು ರಾತ್ರಿಭೋಜನವನ್ನು ಪಡೆದಿದ್ದೀರಿ."