ತಮೀಮ್ ಅದ್ದಾರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಧರ್ಮವು ಹಿತಚಿಂತನೆಯಾಗಿದೆ." ನಾವು...
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ತಿಳಿಸುವುದೇನೆಂದರೆ, ಧರ್ಮವು ನಿಷ್ಕಳಂಕ ಮತ್ತು ಪ್ರಾಮಾಣಿಕತೆಯೆಂಬ ಹಿತಚಿಂತನೆಯ ಮೇಲೆ ನಿಂತಿದ್ದು, ಅದನ್ನು ಅ...
ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಒಮ್ಮೆ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಈ ವಚನವನ್ನು ಪಠಿಸಿದರು...
ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಈ ವಚನವನ್ನು ಪಠಿಸಿದರು: "ತಮಗೆ ಗ್ರಂಥವನ್ನು ಅವತೀರ್ಣಗೊಳಿಸಿದ್ದು ಅವನೇ. ಅದರಲ್ಲಿ ಸ್ಪಷ್ಟ ವಚನಗಳಿವೆ. ಅವ...
ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನ...
ಪ್ರತಿಯೊಬ್ಬರೂ ಅವರವರ ಸಾಮರ್ಥ್ಯಕ್ಕೆ ಅನುಗುಣವಾಗಿ ಕೆಡುಕುಗಳನ್ನು ಬದಲಾಯಿಸಬೇಕೆಂದು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿ ಇರಲಿ) ಇಲ್ಲಿ ಅಜ್ಞಾಪಿಸುತ್ತಿದ್ದಾರೆ....
ನುಅಮಾನ್ ಬಿನ್ ಬಶೀರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅಲ್ಲಾಹನ ಹದ್ದುಗಳನ್ನು...
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ಅಲ್ಲಾಹನ ಹದ್ದುಗಳನ್ನು ಪಾಲಿಸುವವರು, ಅಲ್ಲಾಹನ ಆಜ್ಞೆಗಳಲ್ಲಿ ನೇರವಾಗಿ ನಿಲ್ಲುವವರು ಮತ್ತು ಒಳಿತನ್ನು ಆದೇಶಿ...
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸನ್ಮಾರ್ಗಕ್ಕೆ ಕರೆಯುವವನು ಅವ...
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ವಿವರಿಸುವುದೇನೆಂದರೆ, ಯಾರಾದರೂ ಮಾತು ಅಥವಾ ಕ್ರಿಯೆಯ ಮೂಲಕ, ಸತ್ಯ ಮತ್ತು ಒಳಿತಿನ ಮಾರ್ಗದ ಕಡೆಗೆ ಜನರಿಗೆ ಮಾ...

ತಮೀಮ್ ಅದ್ದಾರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಧರ್ಮವು ಹಿತಚಿಂತನೆಯಾಗಿದೆ." ನಾವು ಕೇಳಿದೆವು: "ಯಾರ ಹಿತಚಿಂತನೆ?" ಅವರು ಉತ್ತರಿಸಿದರು: "ಅಲ್ಲಾಹನ, ಅವನ ಗ್ರಂಥದ, ಅವನ ಸಂದೇಶವಾಹಕರ, ಮುಸ್ಲಿಂ ಆಡಳಿತಗಾರರ ಮತ್ತು ಮುಸ್ಲಿಂ ಜನಸಾಮಾನ್ಯರ ಹಿತಚಿಂತನೆ."

ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಒಮ್ಮೆ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಈ ವಚನವನ್ನು ಪಠಿಸಿದರು: "ತಮಗೆ ಗ್ರಂಥವನ್ನು ಅವತೀರ್ಣಗೊಳಿಸಿದ್ದು ಅವನೇ. ಅದರಲ್ಲಿ ಸ್ಪಷ್ಟ ವಚನಗಳಿವೆ. ಅವು ಗ್ರಂಥದ ಮೂಲಗಳಾಗಿವೆ. (ಅದರಲ್ಲಿ) ಹೋಲಿಕೆಯಿರುವ ಕೆಲವು ವಚನಗಳೂ ಇವೆ. ಹೃದಯದಲ್ಲಿ ವಕ್ರತೆಯಿರುವವರು, ಗೊಂದಲವನ್ನು ಸೃಷ್ಟಿಸಲು ಮತ್ತು ತಪ್ಪಾಗಿ ವ್ಯಾಖ್ಯಾನಿಸಲು ಹೋಲಿಕೆಯಿರುವ ವಚನಗಳ ಹಿಂದೆ ಹೋಗುತ್ತಾರೆ. ಆದರೆ, ಅಲ್ಲಾಹನ ಹೊರತು ಯಾರೂ ಅದರ ವ್ಯಾಖ್ಯಾನವನ್ನು ತಿಳಿದಿಲ್ಲ. ಜ್ಞಾನದಲ್ಲಿ ಸದೃಢರಾಗಿರುವವರು ಹೇಳುತ್ತಾರೆ: ನಾವು ಅದರಲ್ಲಿ ವಿಶ್ವಾಸವಿಟ್ಟಿದ್ದೇವೆ. ಎಲ್ಲವೂ ನಮ್ಮ ಪರಿಪಾಲಕನ ಕಡೆಯಿಂದಾಗಿದೆ. ಬುದ್ಧಿವಂತರ ಹೊರತು ಇನ್ನಾರೂ ಉಪದೇಶವನ್ನು ಸ್ವೀಕರಿಸುವುದಿಲ್ಲ." [ಆಲು ಇಮ್ರಾನ್:7] ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಹೋಲಿಕೆಯಿರುವ ವಚನಗಳ ಹಿಂದೆ ಹೋಗುವವರನ್ನು ಕಂಡರೆ, ಅವರೇ ಅಲ್ಲಾಹು (ಈ ವಚನದಲ್ಲಿ) ಹೇಳಿದ ಜನರು (ಎಂದು ತಿಳಿಯಿರಿ); ಮತ್ತು ಅವರ ಬಗ್ಗೆ ಎಚ್ಚರವಾಗಿರಿ."

ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ನಿಮ್ಮಲ್ಲಿ ಯಾರಾದರೂ ಒಂದು ಕೆಡುಕನ್ನು ಕಂಡರೆ ಅದನ್ನು ತನ್ನ ಕೈಯಿಂದ ಬದಲಾಯಿಸಲಿ. ಅದು ಸಾಧ್ಯವಾಗದಿದ್ದರೆ ನಾಲಿಗೆಯಿಂದ. ಅದು ಕೂಡ ಸಾಧ್ಯವಾಗದಿದ್ದರೆ ಹೃದಯದಿಂದ. ಅದು ಅತಿ ದುರ್ಬಲ ವಿಶ್ವಾಸವಾಗಿದೆ."

ನುಅಮಾನ್ ಬಿನ್ ಬಶೀರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅಲ್ಲಾಹನ ಹದ್ದುಗಳನ್ನು ಪಾಲಿಸುವವರ ಮತ್ತು ಅವುಗಳನ್ನು ಉಲ್ಲಂಘಿಸುವವರ ಉದಾಹರಣೆಯು ಚೀಟಿ ಹಾಕಿ ಹಡಗಿನಲ್ಲಿ ಪ್ರಯಾಣಿಸಿದ ಕೆಲವು ಜನರಂತೆ. ಅವರಲ್ಲಿ ಕೆಲವರು ಹಡಗಿನ ಮೇಲ್ಭಾಗದಲ್ಲಿ ಮತ್ತು ಕೆಲವರು ಕೆಳಭಾಗದಲ್ಲಿ ಆಸನವನ್ನು ಪಡೆದರು. ಕೆಳಭಾಗದಲ್ಲಿರುವವರಿಗೆ ನೀರಿನ ಅಗತ್ಯ ಬಂದರೆ ಅವರು ಮೇಲ್ಭಾಗಕ್ಕೆ ಬರುತ್ತಿದ್ದರು. ಆದ್ದರಿಂದ ಅವರು ಹೇಳಿದರು: ನಮ್ಮ ಈ ಭಾಗದಲ್ಲಿ ನಾವು ಒಂದು ತೂತು ಕೊರೆದರೆ ನಮಗೆ ಮೇಲ್ಭಾಗದಲ್ಲಿರುವವರಿಗೆ ತೊಂದರೆ ಕೊಡಬೇಕಾಗಿ ಬರುವುದಿಲ್ಲ. ಅವರು (ಮೇಲ್ಭಾಗದಲ್ಲಿರುವವರು) ಇವರ ಉದ್ದೇಶದಂತೆ ನಡೆಯಲು ಇವರನ್ನು ಹಾಗೆಯೇ ಬಿಟ್ಟುಬಿಟ್ಟರೆ ಎಲ್ಲರೂ ನಾಶವಾಗುತ್ತಾರೆ. ಅವರು ಇವರ ಕೈ ಹಿಡಿದು (ತಡೆದರೆ) ಅವರೂ ಉಳಿಯುತ್ತಾರೆ ಮತ್ತು ಇತರರೂ ಉಳಿಯುತ್ತಾರೆ."

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸನ್ಮಾರ್ಗಕ್ಕೆ ಕರೆಯುವವನು ಅವನನ್ನು ಅನುಸರಿಸಿದವನ ಪ್ರತಿಫಲಕ್ಕೆ ಸಮಾನವಾದ ಪ್ರತಿಫಲವನ್ನು ಪಡೆಯುತ್ತಾನೆ. ಅದು ಅವರ ಪ್ರತಿಫಲಗಳಲ್ಲಿ ಏನನ್ನೂ ಕಡಿಮೆಗೊಳಿಸುವುದಿಲ್ಲ. ದುರ್ಮಾರ್ಗಕ್ಕೆ ಕರೆಯುವವನು ಅವನನ್ನು ಅನುಸರಿಸಿದವನ ಪಾಪಕ್ಕೆ ಸಮಾನವಾದ ಪಾಪವನ್ನು ಪಡೆಯುತ್ತಾನೆ. ಅದು ಅವರ ಪಾಪಗಳಲ್ಲಿ ಏನನ್ನೂ ಕಡಿಮೆ ಮಾಡುವುದಿಲ್ಲ."

ಅಬೂ ಮಸ್‌ಊದ್ ಅನ್ಸಾರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಬ್ಬ ವ್ಯಕ್ತಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು ಹೇಳಿದರು: "ನನ್ನ ಒಂಟೆ ಸುಸ್ತಾಗಿಬಿಟ್ಟಿದೆ. ಆದ್ದರಿಂದ ನನಗೆ ಸವಾರಿ ಮಾಡುವ ಒಂದು ಒಂಟೆಯನ್ನು ಕೊಡಿ." ಅವರು ಹೇಳಿದರು: "ನನ್ನ ಬಳಿ ಒಂಟೆಯಿಲ್ಲ." ಆಗ ಆ ವ್ಯಕ್ತಿ ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಅವನಿಗೆ ಒಂಟೆ ಕೊಡುವ ವ್ಯಕ್ತಿಯನ್ನು ನಾನು ತೋರಿಸುತ್ತೇನೆ." ಆಗ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಒಳಿತನ್ನು ತೋರಿಸಿಕೊಡುತ್ತಾರೋ ಅವನಿಗೆ ಆ ಒಳಿತು ಮಾಡಿದ ವ್ಯಕ್ತಿಗೆ ದೊರಕುವಷ್ಟೇ ಪ್ರತಿಫಲ ದೊರಕುತ್ತದೆ."

ಸಹ್ಲ್ ಬಿನ್ ಸಅದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಾಳೆ ನಾನು ಈ ಪತಾಕೆಯನ್ನು ಒಬ್ಬ ವ್ಯಕ್ತಿಗೆ ಕೊಡುವೆನು. ಅವನ ಕೈಯಿಂದ ಅಲ್ಲಾಹು ವಿಜಯವನ್ನು ದಯಪಾಲಿಸುವನು. ಅವನು ಅಲ್ಲಾಹು ಮತ್ತು ಅವನ ಸಂದೇಶವಾಹಕರನ್ನು ಪ್ರೀತಿಸುತ್ತಾನೆ ಮತ್ತು ಅಲ್ಲಾಹು ಮತ್ತು ಅವನ ಸಂದೇಶವಾಹಕರು ಅವನನ್ನು ಪ್ರೀತಿಸುತ್ತಾರೆ." ಪತಾಕೆ ಯಾರ ಕೈಗೆ ಕೊಡಲಾಗಬಹುದು ಎಂದು ಮಾತನಾಡುತ್ತಾ ಜನರು ಆ ರಾತ್ರಿಯನ್ನು ಕಳೆದರು. ಬೆಳಗಾದಾಗ, ಜನರೆಲ್ಲರೂ ಅದನ್ನು ತಮ್ಮ ಕೈಗೆ ಕೊಡಲಾಗಬಹುದೆಂಬ ನಿರೀಕ್ಷೆಯಿಂದ ಬೆಳಗ್ಗೆಯೇ ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ತೆರಳಿದರು. ಅವರು (ಪ್ರವಾದಿ) ಕೇಳಿದರು: "ಅಲೀ ಬಿನ್ ಅಬೂ ತಾಲಿಬ್ ಎಲ್ಲಿ?" ಅವರು ಉತ್ತರಿಸಿದರು: "ಓ ಅಲ್ಲಾಹನ ಸಂದೇಶವಾಹಕರೇ! ಅವರು ಕಣ್ಣ ನೋವಿನಿಂದ ಬಳಲುತ್ತಿದ್ದಾರೆ." ಅವರು ಹೇಳಿದರು: "ಅವನ ಬಳಿಗೆ ಜನರನ್ನು ಕಳುಹಿಸಿ." ಅವರು ಬಂದಾಗ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅವರ ಎರಡು ಕಣ್ಣುಗಳಿಗೆ ಉಗಿದು ಪ್ರಾರ್ಥಿಸಿದರು. ಆಗ ಅವರ ಕಣ್ಣಿನಲ್ಲಿ ಯಾವುದೇ ನೋವಿರಲಿಲ್ಲವೋ ಎಂಬಂತೆ ಅದು ಗುಣವಾಯಿತು. ಅವರು ಪತಾಕೆಯನ್ನು ಅವರಿಗೆ ಕೊಟ್ಟರು. ಅಲಿ ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಅವರು ನಮ್ಮಂತೆ ಆಗುವ ತನಕ ನಾನು ಅವರೊಂದಿಗೆ ಯುದ್ಧ ಮಾಡಬೇಕೇ?" ಅವರು ಉತ್ತರಿಸಿದರು: "ಅವರ ಅಂಗಳವನ್ನು ತಲುಪುವ ತನಕ ಸಾವಧಾನದಿಂದ ಮುಂದುವರಿಯಿರಿ. ನಂತರ ಅವರನ್ನು ಇಸ್ಲಾಂ ಧರ್ಮಕ್ಕೆ ಕರೆಯಿರಿ. ಅಲ್ಲಾಹನ ಹಕ್ಕಿಗೆ ಸಂಬಂಧಿಸಿದಂತೆ ಅವರಿಗೆ ಏನು ಕಡ್ಡಾಯವಾಗಿದೆಯೆಂಬುದನ್ನು ತಿಳಿಸಿಕೊಡಿ.ಏಕೆಂದರೆ, ಅಲ್ಲಾಹನಾಣೆ! ಅಲ್ಲಾಹು ನಿನ್ನ ಮೂಲಕ ಒಬ್ಬ ವ್ಯಕ್ತಿಗೆ ಸನ್ಮಾರ್ಗವನ್ನು ಕರುಣಿಸುವುದು ನಿನಗೆ ಕೆಂಪು ಒಂಟೆಗಳಿರುವುದಕ್ಕಿಂತಲೂ ಶ್ರೇಷ್ಠವಾಗಿದೆ."

ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಒಂದು ಜನಸಮೂಹವನ್ನು ಅನುಕರಿಸುತ್ತಾರೋ ಅವರು ಅವರಲ್ಲಿ ಸೇರುತ್ತಾರೆ."

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಮನುಷ್ಯನು ಅವನ ಆಪ್ತ ಸ್ನೇಹಿತನ ಧರ್ಮದಲ್ಲಿರುತ್ತಾನೆ. ಆದ್ದರಿಂದ ನಿಮ್ಮಲ್ಲೊಬ್ಬನು ತಾನು ಯಾರೊಡನೆ ಸ್ನೇಹ ಬೆಳೆಸುತ್ತಿದ್ದೇನೆಂದು ನೋಡಿಕೊಳ್ಳಲಿ."

ತಮೀಮುದ್ದಾರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ನಿಶ್ಚಯವಾಗಿಯೂ ರಾತ್ರಿ ಮತ್ತು ಹಗಲು ತಲುಪುವ ಎಲ್ಲಾ ಸ್ಥಳಗಳಿಗೂ ಈ ವಿಷಯವು ತಲುಪಲಿದೆ. ಅಲ್ಲಾಹು ಪಟ್ಟಣದಲ್ಲಿ ಅಥವಾ ಮರುಭೂಮಿಯಲ್ಲಿರುವ ಯಾವುದೇ ಮನೆಗೂ ಈ ಧರ್ಮವು ಪ್ರವೇಶವಾಗುವಂತೆ ಮಾಡದೆ ಬಿಡಲಾರ. ಅದು ಗೌರವಾನ್ವಿತರಿಗೆ ಗೌರವವನ್ನು ಅಥವಾ ಅವಮಾನಿತರಿಗೆ ಅವಮಾನವನ್ನು ತರಲಿದೆ. ಅದು ಅಲ್ಲಾಹು ಇಸ್ಲಾಂ ಧರ್ಮದ ಮೂಲಕ ನೀಡುವ ಗೌರವ ಮತ್ತು ಸತ್ಯನಿಷೇಧದ ಮೂಲಕ ನೀಡುವ ಅವಮಾನವಾಗಿದೆ." ತಮೀಮುದ್ದಾರಿ ಹೇಳುತ್ತಿದ್ದರು: ನಾನು ಅದನ್ನು ನನ್ನ ಕುಟುಂಬದವರಲ್ಲೇ ಗುರುತಿಸಿದ್ದೇನೆ. ಅವರಲ್ಲಿ ಇಸ್ಲಾಂ ಸ್ವೀಕರಿಸಿದವರೆಲ್ಲರಿಗೂ ಒಳಿತು, ಘನತೆ ಮತ್ತು ಗೌರವಗಳು ಉಂಟಾಗಿವೆ. ಅವರಲ್ಲಿ ಸತ್ಯನಿಷೇಧಿಗಳಾದ ಎಲ್ಲರಿಗೂ ಅವಮಾನ, ತಿರಸ್ಕಾರ ಮತ್ತು ತೆರಿಗೆ ಉಂಟಾಗಿವೆ.

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಮುಹಮ್ಮದರ ಆತ್ಮ ಯಾರ ಕೈಯಲ್ಲಿದೆಯೋ ಅವನ ಮೇಲಾಣೆ! ಈ ಸಮುದಾಯದಲ್ಲಿ ಸೇರಿದ ಯಹೂದಿಗಳು, ಕ್ರೈಸ್ತರು ಅಥವಾ ಇತರ ಯಾರೇ ಆಗಲಿ, ನನ್ನ ಬಗ್ಗೆ ಕೇಳಿಯೂ, ನನ್ನನ್ನು ಯಾವ ಸಂದೇಶದೊಂದಿಗೆ ಕಳುಹಿಸಲಾಗಿದೆಯೋ ಅದರಲ್ಲಿ ವಿಶ್ವಾಸವಿಡದೆ ಸಾವನ್ನಪ್ಪಿದರೆ, ಅವರು ನರಕವಾಸಿಗಳಲ್ಲಿ ಸೇರುವುದು ಖಚಿತ."

ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಅಕಬದಂದು (ದುಲ್-ಹಿಜ್ಜ ಹತ್ತನೇ ದಿನ) ಬೆಳಿಗ್ಗೆ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅವರ ಒಂಟೆಯ ಮೇಲಿದ್ದುಕೊಂಡೇ ಹೇಳಿದರು: "ನನಗೆ ಕೆಲವು ಸಣ್ಣ ಕಲ್ಲುಗಳನ್ನು ಹೆಕ್ಕಿಕೊಡಿ." ನಾನು ಅವರಿಗೆ ಕೆಲವು ಸಣ್ಣ ಕಲ್ಲುಗಳನ್ನು ಹೆಕ್ಕಿದೆ. ಅವು ಸಣ್ಣ ಗಾತ್ರದ ಕಲ್ಲುಗಳಾಗಿದ್ದವು. ಅವರು ಅದನ್ನು ಅಂಗೈಯಲ್ಲಿ ಅಲುಗಾಡಿಸುತ್ತಾ ಹೇಳಿದರು: "ಇದರಂತಿರುವುದನ್ನು ಎಸೆಯಿರಿ." ನಂತರ ಹೇಳಿದರು: "ಓ ಜನರೇ! ಧರ್ಮದಲ್ಲಿ ಮಿತಿಮೀರುವುದರ ಬಗ್ಗೆ ಹುಷಾರಾಗಿರಿ! ಏಕೆಂದರೆ ನಿಮಗಿಂತ ಮೊದಲಿನವರನ್ನು ನಾಶ ಮಾಡಿದ್ದು ಧರ್ಮದಲ್ಲಿರುವ ಅತಿರೇಕವಾಗಿದೆ."