{ನಿಶ್ಚಯವಾಗಿಯೂ ಸಫಾ ಮತ್ತು ಮರ್ವಾ ಅಲ್ಲಾಹನ ಚಿಹ್ನೆಗಳಲ್ಲಿ ಒಳಪಟ್ಟದ್ದಾಗಿವೆ. ಆದ್ದರಿಂದ ಅಲ್ಲಾಹನ ಭವನಕ್ಕೆ ಹಜ್ ಅಥವಾ ಉಮ್ರಾ ಮಾಡುವವರು ಇವುಗಳಿಗೆ ಪ್ರದಕ್ಷಿಣೆ ಮಾಡುವುದರಲ್ಲಿ ಯಾವುದೇ ದೋಷವಿಲ್ಲ.[1] ಸ್ವಯಂಪ್ರೇರಿತವಾಗಿ ಒಳಿತು ಮಾಡುವವರನ್ನು ಅಲ್ಲಾಹು ಮೆಚ್ಚುತ್ತಾನೆ ಮತ್ತು ಅವರ ಬಗ್ಗೆ ಅವನು ಚೆನ್ನಾಗಿ ತಿಳಿದಿದ್ದಾನೆ.} (سورة البقرة
: 158).
۞ إِنَّ ٱلصَّفَا وَٱلۡمَرۡوَةَ مِن شَعَآئِرِ ٱللَّهِۖ فَمَنۡ حَجَّ ٱلۡبَيۡتَ أَوِ ٱعۡتَمَرَ فَلَا جُنَاحَ عَلَيۡهِ أَن يَطَّوَّفَ بِهِمَاۚ وَمَن تَطَوَّعَ خَيۡرٗا فَإِنَّ ٱللَّهَ شَاكِرٌ عَلِيمٌ
{ಅಲ್ಲಾಹನಿಗಾಗಿ ಹಜ್ಜ್ ಮತ್ತು ಉಮ್ರಗಳನ್ನು ಪೂರ್ತಿಗೊಳಿಸಿರಿ. ನಿಮ್ಮನ್ನು (ದಾರಿ ಮಧ್ಯೆ) ತಡೆಯಲಾದರೆ ನಿಮಗೆ ಸುಲಭವಾಗಿರುವ ಒಂದು ಪ್ರಾಣಿಯನ್ನು ಬಲಿ ನೀಡಿರಿ.[1] ಬಲಿಮೃಗವು ಅದರ ಸ್ಥಳವನ್ನು ತಲುಪುವ ತನಕ ಕೇಶಮುಂಡನ ಮಾಡಬೇಡಿ. ನಿಮ್ಮಲ್ಲಿ ಯಾರಾದರೂ ಅನಾರೋಗ್ಯದಲ್ಲಿದ್ದು ಅಥವಾ ತಲೆಯಲ್ಲಿ ಏನಾದರೂ ತೊಂದರೆಯಿದ್ದು, (ಕೇಶ ಮುಂಡನ ಮಾಡಿದ್ದರೆ) ಅದಕ್ಕೆ ಪರಿಹಾರವಾಗಿ ಉಪವಾಸ ಅಥವಾ ದಾನಧರ್ಮ ಅಥವಾ ಬಲಿಕರ್ಮ ನಿರ್ವಹಿಸಲಿ. ಆದರೆ ನೀವು ನಿರ್ಭಯ ಸ್ಥಿತಿಯಲ್ಲಿದ್ದು, ನಿಮ್ಮಲ್ಲಿ ಯಾರಾದರೂ ಉಮ್ರಾ ನಿರ್ವಹಿಸಿ ಹಜ್ಜ್ ತನಕ ವಿಶ್ರಾಂತಿ ಪಡೆದರೆ, ಅವನು ಸುಲಭವಾಗಿರುವ ಒಂದು ಪ್ರಾಣಿಯನ್ನು ಬಲಿ ನೀಡಲಿ. ಯಾರಿಗೆ ಬಲಿಮೃಗ ಸಿಗುವುದಿಲ್ಲವೋ ಅವನು ಹಜ್ಜ್‌ನ ಸಮಯದಲ್ಲಿ ಮೂರು ದಿನ ಮತ್ತು (ಊರಿಗೆ) ಮರಳಿದ ಬಳಿಕ ಏಳು ದಿನ; ಒಟ್ಟು ಹತ್ತು ದಿನ ಉಪವಾಸ ಆಚರಿಸಲಿ. ಈ ನಿಯಮವಿರುವುದು ಮಸ್ಜಿದುಲ್ ಹರಾಮ್‍ನ ನಿವಾಸಿಗಳಲ್ಲದವರಿಗೆ ಮಾತ್ರ. ಅಲ್ಲಾಹನನ್ನು ಭಯಪಡಿರಿ. ತಿಳಿಯಿರಿ! ಅಲ್ಲಾಹು ಅತಿ ಕಠೋರವಾಗಿ ಶಿಕ್ಷಿಸುವವನಾಗಿದ್ದಾನೆ.} (سورة البقرة
: 196).
وَأَتِمُّواْ ٱلۡحَجَّ وَٱلۡعُمۡرَةَ لِلَّهِۚ فَإِنۡ أُحۡصِرۡتُمۡ فَمَا ٱسۡتَيۡسَرَ مِنَ ٱلۡهَدۡيِۖ وَلَا تَحۡلِقُواْ رُءُوسَكُمۡ حَتَّىٰ يَبۡلُغَ ٱلۡهَدۡيُ مَحِلَّهُۥۚ فَمَن كَانَ مِنكُم مَّرِيضًا أَوۡ بِهِۦٓ أَذٗى مِّن رَّأۡسِهِۦ فَفِدۡيَةٞ مِّن صِيَامٍ أَوۡ صَدَقَةٍ أَوۡ نُسُكٖۚ فَإِذَآ أَمِنتُمۡ فَمَن تَمَتَّعَ بِٱلۡعُمۡرَةِ إِلَى ٱلۡحَجِّ فَمَا ٱسۡتَيۡسَرَ مِنَ ٱلۡهَدۡيِۚ فَمَن لَّمۡ يَجِدۡ فَصِيَامُ ثَلَٰثَةِ أَيَّامٖ فِي ٱلۡحَجِّ وَسَبۡعَةٍ إِذَا رَجَعۡتُمۡۗ تِلۡكَ عَشَرَةٞ كَامِلَةٞۗ ذَٰلِكَ لِمَن لَّمۡ يَكُنۡ أَهۡلُهُۥ حَاضِرِي ٱلۡمَسۡجِدِ ٱلۡحَرَامِۚ وَٱتَّقُواْ ٱللَّهَ وَٱعۡلَمُوٓاْ أَنَّ ٱللَّهَ شَدِيدُ ٱلۡعِقَابِ
{ಹಜ್ಜ್ ಪರಿಚಿತ ತಿಂಗಳುಗಳಲ್ಲಾಗಿದೆ.[1] ಆದ್ದರಿಂದ ಯಾರಾದರೂ ಆ ತಿಂಗಳುಗಳಲ್ಲಿ (ಇಹ್ರಾಮ್ ಧರಿಸಿ) ಹಜ್ಜ್ ನಿರ್ವಹಿಸುವುದನ್ನು ಕಡ್ಡಾಯಗೊಳಿಸಿದರೆ, ಅವನು ಹಜ್ಜ್‌ನ ಸಮಯದಲ್ಲಿ ಲೈಂಗಿಕ ಸಂಪರ್ಕ, ದುಷ್ಕರ್ಮ ಮತ್ತು ತರ್ಕ ಮಾಡಬಾರದು. ನೀವು ಏನೇ ಸತ್ಕರ್ಮ ಮಾಡಿದರೂ ಅಲ್ಲಾಹು ಅದನ್ನು ತಿಳಿಯುತ್ತಾನೆ. ನೀವು (ಹಜ್ಜ್ ಯಾತ್ರೆಗಾಗಿ) ಸಿದ್ಧತೆ ಮಾಡಿಕೊಳ್ಳಿರಿ. ನಿಶ್ಚಯವಾಗಿಯೂ ನೀವು ಮಾಡಿಕೊಳ್ಳುವ ಸಿದ್ಧತೆಗಳಲ್ಲಿ ದೇವಭಯವು ಅತಿಶ್ರೇಷ್ಠವಾಗಿದೆ. ಓ ಬುದ್ಧಿವಂತರೇ! ನೀವು ನನ್ನನ್ನು ಭಯಪಡಿರಿ.} (سورة البقرة
: 197).
ٱلۡحَجُّ أَشۡهُرٞ مَّعۡلُومَٰتٞۚ فَمَن فَرَضَ فِيهِنَّ ٱلۡحَجَّ فَلَا رَفَثَ وَلَا فُسُوقَ وَلَا جِدَالَ فِي ٱلۡحَجِّۗ وَمَا تَفۡعَلُواْ مِنۡ خَيۡرٖ يَعۡلَمۡهُ ٱللَّهُۗ وَتَزَوَّدُواْ فَإِنَّ خَيۡرَ ٱلزَّادِ ٱلتَّقۡوَىٰۖ وَٱتَّقُونِ يَٰٓأُوْلِي ٱلۡأَلۡبَٰبِ
{ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಯಾವುದೇ ಔದಾರ್ಯವನ್ನು ಅರಸುವುದರಲ್ಲಿ ನಿಮಗೆ ದೋಷವಿಲ್ಲ. ನೀವು ಅರಫಾತ್‍ನಿಂದ ತೆರಳಿದರೆ ಮಶ್‍ಅರುಲ್ ಹರಾಮ್‍ನ ಬಳಿ ಅಲ್ಲಾಹನನ್ನು ಸ್ಮರಿಸಿರಿ. ಅವನು ನಿಮಗೆ ಸನ್ಮಾರ್ಗ ತೋರಿಸಿದಂತೆಯೇ ನೀವು ಅವನನ್ನು ಸ್ಮರಿಸಿರಿ. ವಾಸ್ತವವಾಗಿ, ಇದಕ್ಕೆ ಮುಂಚೆ ನೀವು ದಾರಿ ತಪ್ಪಿದವರಾಗಿದ್ದಿರಿ.} (سورة البقرة
: 198).
لَيۡسَ عَلَيۡكُمۡ جُنَاحٌ أَن تَبۡتَغُواْ فَضۡلٗا مِّن رَّبِّكُمۡۚ فَإِذَآ أَفَضۡتُم مِّنۡ عَرَفَٰتٖ فَٱذۡكُرُواْ ٱللَّهَ عِندَ ٱلۡمَشۡعَرِ ٱلۡحَرَامِۖ وَٱذۡكُرُوهُ كَمَا هَدَىٰكُمۡ وَإِن كُنتُم مِّن قَبۡلِهِۦ لَمِنَ ٱلضَّآلِّينَ
{ನಂತರ ಜನರು ಎಲ್ಲಿಂದ ಹೊರಡುತ್ತಾರೋ ಅಲ್ಲಿಂದ ನೀವೂ ಹೊರಡಿರಿ. ಅಲ್ಲಾಹನಲ್ಲಿ ಕ್ಷಮೆಯಾಚಿಸಿರಿ. ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ಕರುಣೆ ತೋರುವವನಾಗಿದ್ದಾನೆ.} (سورة البقرة
: 199).
ثُمَّ أَفِيضُواْ مِنۡ حَيۡثُ أَفَاضَ ٱلنَّاسُ وَٱسۡتَغۡفِرُواْ ٱللَّهَۚ إِنَّ ٱللَّهَ غَفُورٞ رَّحِيمٞ
{ನೀವು ಹಜ್ಜ್ ಕರ್ಮಗಳನ್ನು ಪೂರೈಸಿದರೆ, ನಿಮ್ಮ ಪೂರ್ವಜರನ್ನು ಸ್ಮರಿಸುವಂತೆಯೇ ಅಥವಾ ಅದಕ್ಕಿಂತಲೂ ತೀವ್ರವಾಗಿ ಅಲ್ಲಾಹನನ್ನು ಸ್ಮರಿಸಿರಿ. ಜನರಲ್ಲಿ ಕೆಲವರು ಹೇಳುತ್ತಾರೆ: “ಓ ನಮ್ಮ ಪರಿಪಾಲಕನೇ! ನಮಗೆ ಇಹಲೋಕದಲ್ಲಿ ದಯಪಾಲಿಸು.” ಅಂತಹವರಿಗೆ ಪರಲೋಕದಲ್ಲಿ ಯಾವುದೇ ಪಾಲಿಲ್ಲ.} (سورة البقرة
: 200).
فَإِذَا قَضَيۡتُم مَّنَٰسِكَكُمۡ فَٱذۡكُرُواْ ٱللَّهَ كَذِكۡرِكُمۡ ءَابَآءَكُمۡ أَوۡ أَشَدَّ ذِكۡرٗاۗ فَمِنَ ٱلنَّاسِ مَن يَقُولُ رَبَّنَآ ءَاتِنَا فِي ٱلدُّنۡيَا وَمَا لَهُۥ فِي ٱلۡأٓخِرَةِ مِنۡ خَلَٰقٖ
{ಇತರ ಕೆಲವರು ಹೇಳುತ್ತಾರೆ: “ಓ ನಮ್ಮ ಪರಿಪಾಲಕನೇ! ನಮಗೆ ಇಹಲೋಕದಲ್ಲಿ ಒಳಿತನ್ನು ದಯಪಾಲಿಸು ಮತ್ತು ಪರಲೋಕದಲ್ಲೂ ಒಳಿತನ್ನು ದಯಪಾಲಿಸು ಮತ್ತು ನಮ್ಮನ್ನು ನರಕ ಶಿಕ್ಷೆಯಿಂದ ಪಾರು ಮಾಡು.”} (سورة البقرة
: 201).
وَمِنۡهُم مَّن يَقُولُ رَبَّنَآ ءَاتِنَا فِي ٱلدُّنۡيَا حَسَنَةٗ وَفِي ٱلۡأٓخِرَةِ حَسَنَةٗ وَقِنَا عَذَابَ ٱلنَّارِ
{ಅವರಿಗೆ ಅವರು ಮಾಡಿದ ಕರ್ಮಗಳ ಪಾಲಿದೆ. ಅಲ್ಲಾಹು ಶೀಘ್ರವಾಗಿ ವಿಚಾರಣೆ ಮಾಡುವವನಾಗಿದ್ದಾನೆ.} (سورة البقرة
: 202).
أُوْلَٰٓئِكَ لَهُمۡ نَصِيبٞ مِّمَّا كَسَبُواْۚ وَٱللَّهُ سَرِيعُ ٱلۡحِسَابِ
{ಬೆರಳೆಣಿಕೆಯ ಕೆಲವು ದಿನಗಳಲ್ಲಿ[1] ಅಲ್ಲಾಹನನ್ನು ಸ್ಮರಿಸಿರಿ. ಯಾರಾದರೂ ಎರಡೇ ದಿನಗಳಲ್ಲಿ ತರಾತುರಿಯಿಂದ ಹೊರಟರೆ ಅವರಿಗೆ ದೋಷವಿಲ್ಲ.[2] ಯಾರಾದರೂ ವಿಳಂಬ ಮಾಡಿದರೆ ಅವರಿಗೂ ದೋಷವಿಲ್ಲ. ಇದು ದೇವಭಯವುಳ್ಳವರಿಗಾಗಿದೆ. ಅಲ್ಲಾಹನನ್ನು ಭಯಪಡಿರಿ. ತಿಳಿಯಿರಿ! ನಿಮ್ಮೆಲ್ಲರನ್ನೂ ಅವನ ಬಳಿಗೇ ಒಟ್ಟುಗೂಡಿಸಲಾಗುತ್ತದೆ.} (سورة البقرة
: 203).
۞ وَٱذۡكُرُواْ ٱللَّهَ فِيٓ أَيَّامٖ مَّعۡدُودَٰتٖۚ فَمَن تَعَجَّلَ فِي يَوۡمَيۡنِ فَلَآ إِثۡمَ عَلَيۡهِ وَمَن تَأَخَّرَ فَلَآ إِثۡمَ عَلَيۡهِۖ لِمَنِ ٱتَّقَىٰۗ وَٱتَّقُواْ ٱللَّهَ وَٱعۡلَمُوٓاْ أَنَّكُمۡ إِلَيۡهِ تُحۡشَرُونَ
{ನಿಶ್ಚಯವಾಗಿಯೂ ಮಕ್ಕಾದಲ್ಲಿರುವ ಭವನವು ಮನುಷ್ಯರಿಗಾಗಿ ಸ್ಥಾಪಿಸಲಾದ ಮೊಟ್ಟಮೊದಲ ಆರಾಧನಾಲಯವಾಗಿದೆ. ಅದು ಸಮೃದ್ಧವೂ ಸರ್ವಲೋಕದವರಿಗೆ ಮಾರ್ಗದರ್ಶಿಯೂ ಆಗಿದೆ.} (سورة آل عمران
: 96).
إِنَّ أَوَّلَ بَيۡتٖ وُضِعَ لِلنَّاسِ لَلَّذِي بِبَكَّةَ مُبَارَكٗا وَهُدٗى لِّلۡعَٰلَمِينَ
{ಅದರಲ್ಲಿ ಸ್ಪಷ್ಟವಾದ ದೃಷ್ಟಾಂತಗಳಿವೆ. (ಅದರಲ್ಲಿ) ಇಬ್ರಾಹೀಮರು ನಿಂತ ಸ್ಥಳವಿದೆ. ಅದನ್ನು ಪ್ರವೇಶಿಸಿದವನು ನಿರ್ಭಯನಾಗುತ್ತಾನೆ. ಆ ಭವನಕ್ಕೆ ತಲುಪಲು ಸಾಧ್ಯವಿರುವ ಜನರು ಅಲ್ಲಿಗೆ ತೆರಳಿ ಹಜ್ಜ್ ನಿರ್ವಹಿಸುವುದನ್ನು ಅಲ್ಲಾಹು ಕಡ್ಡಾಯಗೊಳಿಸಿದ್ದಾನೆ. ಆದರೆ ಯಾರಾದರೂ ಅದನ್ನು ನಿಷೇಧಿಸಿದರೆ—ನಿಶ್ಚಯವಾಗಿಯೂ ಅಲ್ಲಾಹು ಸರ್ವಲೋಕದವರಿಂದ ಸಂಪೂರ್ಣ ನಿರಪೇಕ್ಷನಾಗಿದ್ದಾನೆ.} (سورة آل عمران
: 97).
فِيهِ ءَايَٰتُۢ بَيِّنَٰتٞ مَّقَامُ إِبۡرَٰهِيمَۖ وَمَن دَخَلَهُۥ كَانَ ءَامِنٗاۗ وَلِلَّهِ عَلَى ٱلنَّاسِ حِجُّ ٱلۡبَيۡتِ مَنِ ٱسۡتَطَاعَ إِلَيۡهِ سَبِيلٗاۚ وَمَن كَفَرَ فَإِنَّ ٱللَّهَ غَنِيٌّ عَنِ ٱلۡعَٰلَمِينَ
{ಓ ಸತ್ಯವಿಶ್ವಾಸಿಗಳೇ! ಕರಾರುಗಳನ್ನು ನೆರವೇರಿಸಿರಿ. ನಿಮಗೆ ಓದಿಕೊಡಲಾಗುವ ಪ್ರಾಣಿಗಳ ಹೊರತಾದ ಮೇಯುವ ಜಾನುವಾರುಗಳನ್ನು ನಿಮಗೆ ಅನುಮತಿಸಲಾಗಿದೆ. ಆದರೆ ನೀವು ಇಹ್ರಾಮ್‍ನಲ್ಲಿರುವಾಗ[1] ಬೇಟೆಯಾಡುವುದಕ್ಕೆ ಅನುಮತಿಯಿಲ್ಲ. ನಿಶ್ಚಯವಾಗಿಯೂ ಅಲ್ಲಾಹು ಅವನು ಬಯಸುವುದನ್ನು ಆದೇಶಿಸುತ್ತಾನೆ.} (سورة المائدة
: 1).
يَٰٓأَيُّهَا ٱلَّذِينَ ءَامَنُوٓاْ أَوۡفُواْ بِٱلۡعُقُودِۚ أُحِلَّتۡ لَكُم بَهِيمَةُ ٱلۡأَنۡعَٰمِ إِلَّا مَا يُتۡلَىٰ عَلَيۡكُمۡ غَيۡرَ مُحِلِّي ٱلصَّيۡدِ وَأَنتُمۡ حُرُمٌۗ إِنَّ ٱللَّهَ يَحۡكُمُ مَا يُرِيدُ