{ಓ ಸತ್ಯವಿಶ್ವಾಸಿಗಳೇ! ಅಲ್ಲಾಹನ ಲಾಂಛನಗಳಿಗೆ ಅಗೌರವ ತೋರಬೇಡಿ. ಪವಿತ್ರ ತಿಂಗಳಿಗೆ, ಬಲಿಮೃಗಗಳಿಗೆ, (ಅವುಗಳ ಕೊರಳಲ್ಲಿರುವ) ಪದಕಗಳಿಗೆ, ಮತ್ತು ತಮ್ಮ ಪರಿಪಾಲಕನ (ಅಲ್ಲಾಹನ) ಔದಾರ್ಯ ಹಾಗೂ ಸಂಪ್ರೀತಿಯನ್ನು ಹುಡುಕುತ್ತಾ ಪವಿತ್ರ ಭವನಕ್ಕೆ ತೀರ್ಥಯಾತ್ರೆ ಮಾಡುವವರಿಗೆ (ಅಗೌರವ ತೋರಬೇಡಿ). ನೀವು ಇಹ್ರಾಮ್‍ನಿಂದ ಮುಕ್ತರಾದರೆ ಬೇಟೆಯಾಡಿರಿ. ಮಸ್ಜಿದುಲ್ ಹರಾಮ್‍ನಿಂದ ನಿಮ್ಮನ್ನು ತಡೆದರು ಎಂಬ ಕಾರಣದಿಂದ ಕೆಲವು ಜನರೊಡನೆ ನಿಮಗಿರುವ ದ್ವೇಷವು ಅತಿರೇಕವೆಸಗುವಂತೆ ನಿಮ್ಮನ್ನು ಪ್ರೇರೇಪಿಸದಿರಲಿ. ಒಳಿತು ಮತ್ತು ದೇವಭಯದಲ್ಲಿ ಪರಸ್ಪರ ಸಹಕರಿಸಿರಿ. ಪಾಪ ಮತ್ತು ಅತಿರೇಕದಲ್ಲಿ ಪರಸ್ಪರ ಸಹಕರಿಸಬೇಡಿ. ಅಲ್ಲಾಹನನ್ನು ಭಯಪಡಿರಿ. ನಿಶ್ಚಯವಾಗಿಯೂ ಅಲ್ಲಾಹು ಕಠೋರವಾಗಿ ಶಿಕ್ಷಿಸುವವನಾಗಿದ್ದಾನೆ.} (سورة المائدة
: 2).
يَٰٓأَيُّهَا ٱلَّذِينَ ءَامَنُواْ لَا تُحِلُّواْ شَعَٰٓئِرَ ٱللَّهِ وَلَا ٱلشَّهۡرَ ٱلۡحَرَامَ وَلَا ٱلۡهَدۡيَ وَلَا ٱلۡقَلَٰٓئِدَ وَلَآ ءَآمِّينَ ٱلۡبَيۡتَ ٱلۡحَرَامَ يَبۡتَغُونَ فَضۡلٗا مِّن رَّبِّهِمۡ وَرِضۡوَٰنٗاۚ وَإِذَا حَلَلۡتُمۡ فَٱصۡطَادُواْۚ وَلَا يَجۡرِمَنَّكُمۡ شَنَـَٔانُ قَوۡمٍ أَن صَدُّوكُمۡ عَنِ ٱلۡمَسۡجِدِ ٱلۡحَرَامِ أَن تَعۡتَدُواْۘ وَتَعَاوَنُواْ عَلَى ٱلۡبِرِّ وَٱلتَّقۡوَىٰۖ وَلَا تَعَاوَنُواْ عَلَى ٱلۡإِثۡمِ وَٱلۡعُدۡوَٰنِۚ وَٱتَّقُواْ ٱللَّهَۖ إِنَّ ٱللَّهَ شَدِيدُ ٱلۡعِقَابِ
{ಓ ಸತ್ಯವಿಶ್ವಾಸಿಗಳೇ! ಅದೃಶ್ಯ ಸ್ಥಿತಿಯಲ್ಲಿ ಅಲ್ಲಾಹನನ್ನು ಭಯಪಡುವವರು ಯಾರೆಂದು ತಿಳಿಯಲು, ನಿಮ್ಮ ಕೈಗಳು ಮತ್ತು ಈಟಿಗಳು ತಲುಪುವ ರೀತಿಯಲ್ಲಿರುವ ಬೇಟೆ ಪ್ರಾಣಿಯ ಮೂಲಕ ಅಲ್ಲಾಹು ನಿಮ್ಮನ್ನು ಖಂಡಿತ ಪರೀಕ್ಷಿಸುವನು. ಅದರ ಬಳಿಕವೂ ಯಾರಾದರೂ ಅತಿರೇಕವೆಸಗಿದರೆ ಅವನಿಗೆ ಯಾತನಾಮಯ ಶಿಕ್ಷೆಯಿದೆ.} (سورة المائدة
: 94).
يَٰٓأَيُّهَا ٱلَّذِينَ ءَامَنُواْ لَيَبۡلُوَنَّكُمُ ٱللَّهُ بِشَيۡءٖ مِّنَ ٱلصَّيۡدِ تَنَالُهُۥٓ أَيۡدِيكُمۡ وَرِمَاحُكُمۡ لِيَعۡلَمَ ٱللَّهُ مَن يَخَافُهُۥ بِٱلۡغَيۡبِۚ فَمَنِ ٱعۡتَدَىٰ بَعۡدَ ذَٰلِكَ فَلَهُۥ عَذَابٌ أَلِيمٞ
{ಓ ಸತ್ಯವಿಶ್ವಾಸಿಗಳೇ! ನೀವು ಇಹ್ರಾಮ್‍ನಲ್ಲಿರುವಾಗ ಬೇಟೆಯಾಡಿ ಪ್ರಾಣಿಯನ್ನು ಕೊಲ್ಲಬೇಡಿ. ನಿಮ್ಮಲ್ಲಿ ಯಾರಾದರೂ ಉದ್ದೇಶಪೂರ್ವಕ ಬೇಟೆಯಾಡಿ ಪ್ರಾಣಿಯನ್ನು ಕೊಂದರೆ, ಅದಕ್ಕಿರುವ ಪರಿಹಾರವು ಅವನು ಕೊಂದ ಮೃಗವನ್ನು ಹೋಲುತ್ತದೆಯೆಂದು ಇಬ್ಬರು ನ್ಯಾಯಸಮ್ಮತ ಜನರು ತೀರ್ಪು ನೀಡುವ ಪ್ರಾಣಿಯನ್ನು ಕಅಬಾಲಯಕ್ಕೆ ಹರಕೆಯ ರೂಪದಲ್ಲಿ ತಲುಪುವ ಬಲಿಮೃಗವಾಗಿ ನೀಡುವುದು; ಅಥವಾ ಅದಕ್ಕೆ ಪರಿಹಾರವಾಗಿ ಬಡವರಿಗೆ ಅನ್ನದಾನ ಮಾಡುವುದು; ಅಥವಾ ಅದಕ್ಕೆ ಸಮಾನವಾಗುವಷ್ಟು ಸಂಖ್ಯೆಯ ಉಪವಾಸ ಆಚರಿಸುವುದು.[1] ಅದು ಅವನು ಮಾಡಿದ ಕರ್ಮದ ಫಲವನ್ನು ಅವನು ಅನುಭವಿಸಲಿಕ್ಕಾಗಿ. ಈ ಹಿಂದೆ ಸಂಭವಿಸಿದ ತಪ್ಪುಗಳನ್ನು ಅಲ್ಲಾಹು ಕ್ಷಮಿಸಿದ್ದಾನೆ. ಆದರೆ ಯಾರಾದರೂ ಅದನ್ನು ಪುನರಾವರ್ತಿಸಿದರೆ, ಅಲ್ಲಾಹು ಅವನಿಂದ ಪ್ರತೀಕಾರವನ್ನು ಪಡೆಯುವನು. ಅಲ್ಲಾಹು ಪ್ರಬಲನು ಮತ್ತು ಪ್ರತೀಕಾರ ಪಡೆಯುವವನಾಗಿದ್ದಾನೆ.} (سورة المائدة
: 95).
يَٰٓأَيُّهَا ٱلَّذِينَ ءَامَنُواْ لَا تَقۡتُلُواْ ٱلصَّيۡدَ وَأَنتُمۡ حُرُمٞۚ وَمَن قَتَلَهُۥ مِنكُم مُّتَعَمِّدٗا فَجَزَآءٞ مِّثۡلُ مَا قَتَلَ مِنَ ٱلنَّعَمِ يَحۡكُمُ بِهِۦ ذَوَا عَدۡلٖ مِّنكُمۡ هَدۡيَۢا بَٰلِغَ ٱلۡكَعۡبَةِ أَوۡ كَفَّٰرَةٞ طَعَامُ مَسَٰكِينَ أَوۡ عَدۡلُ ذَٰلِكَ صِيَامٗا لِّيَذُوقَ وَبَالَ أَمۡرِهِۦۗ عَفَا ٱللَّهُ عَمَّا سَلَفَۚ وَمَنۡ عَادَ فَيَنتَقِمُ ٱللَّهُ مِنۡهُۚ وَٱللَّهُ عَزِيزٞ ذُو ٱنتِقَامٍ
{ನಿಮಗೆ ಸಮುದ್ರ ಬೇಟೆ ಮತ್ತು ಅದರ ಆಹಾರವು ಧರ್ಮಸಮ್ಮತವಾಗಿದೆ. ಇದು ನಿಮಗೆ ಮತ್ತು ಪ್ರಯಾಣಿಕರಿಗೆ ಒಂದು ಅನುಕೂಲವಾಗಿರುವುದಕ್ಕಾಗಿ. ನೀವು ಇಹ್ರಾಮ್‍ನಲ್ಲಿರುವ ತನಕ ನಿಮಗೆ ನೆಲದಲ್ಲಿ ಬೇಟೆಯಾಡುವುದನ್ನು ನಿಷೇಧಿಸಲಾಗಿದೆ. ಯಾರ ಬಳಿಗೆ ನಿಮ್ಮನ್ನು ಒಟ್ಟುಗೂಡಿಸಲಾಗುತ್ತದೋ ಆ ಅಲ್ಲಾಹನನ್ನು ಭಯಪಡಿರಿ.} (سورة المائدة
: 96).
أُحِلَّ لَكُمۡ صَيۡدُ ٱلۡبَحۡرِ وَطَعَامُهُۥ مَتَٰعٗا لَّكُمۡ وَلِلسَّيَّارَةِۖ وَحُرِّمَ عَلَيۡكُمۡ صَيۡدُ ٱلۡبَرِّ مَا دُمۡتُمۡ حُرُمٗاۗ وَٱتَّقُواْ ٱللَّهَ ٱلَّذِيٓ إِلَيۡهِ تُحۡشَرُونَ
{ಪವಿತ್ರ ಭವನವಾದ ಕಅಬಾಲಯವನ್ನು ಮತ್ತು ಯುದ್ಧ ನಿಷೇಧಿತ ತಿಂಗಳನ್ನು ಅಲ್ಲಾಹು ಜನರ ಅಸ್ತಿತ್ವಕ್ಕೆ ಆಧಾರವಾಗಿ ಮಾಡಿದ್ದಾನೆ. (ಅದೇ ರೀತಿ) ಬಲಿಮೃಗವನ್ನು ಮತ್ತು (ಅವುಗಳ) ಕೊರಳಪಟ್ಟಿಗಳನ್ನು ಸಹ. ಇದೇಕೆಂದರೆ, ನಿಶ್ಚಯವಾಗಿಯೂ ಭೂಮ್ಯಾಕಾಶಗಳಲ್ಲಿರುವುದೆಲ್ಲವನ್ನೂ ಅಲ್ಲಾಹು ತಿಳಿದಿದ್ದಾನೆ ಮತ್ತು ನಿಶ್ಚಯವಾಗಿಯೂ ಅಲ್ಲಾಹನಿಗೆ ಎಲ್ಲಾ ವಿಷಯಗಳ ಬಗ್ಗೆ ಸಂಪೂರ್ಣ ಜ್ಞಾನವಿದೆಯೆಂದು ನೀವು ತಿಳಿಯುವುದಕ್ಕಾಗಿದೆ.} (سورة المائدة
: 97).
۞ جَعَلَ ٱللَّهُ ٱلۡكَعۡبَةَ ٱلۡبَيۡتَ ٱلۡحَرَامَ قِيَٰمٗا لِّلنَّاسِ وَٱلشَّهۡرَ ٱلۡحَرَامَ وَٱلۡهَدۡيَ وَٱلۡقَلَٰٓئِدَۚ ذَٰلِكَ لِتَعۡلَمُوٓاْ أَنَّ ٱللَّهَ يَعۡلَمُ مَا فِي ٱلسَّمَٰوَٰتِ وَمَا فِي ٱلۡأَرۡضِ وَأَنَّ ٱللَّهَ بِكُلِّ شَيۡءٍ عَلِيمٌ
{ಹಜ್ಜ್ ಯಾತ್ರಿಗಳಿಗೆ ಪಾನೀಯ ಸರಬರಾಜು ಮಾಡುವುದನ್ನು ಮತ್ತು ಪವಿತ್ರ ಮಸೀದಿಯ ನಿರ್ವಹಣೆ ಮಾಡುವುದನ್ನು ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿಡುವುದಕ್ಕೆ ಹಾಗೂ ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡುವುದಕ್ಕೆ ಸಮಾನವೆಂದು ಪರಿಗಣಿಸುತ್ತೀರಾ? ಅಲ್ಲಾಹನ ದೃಷ್ಟಿಯಲ್ಲಿ ಅವು ಸಮಾನವಲ್ಲ. ಅಕ್ರಮವೆಸಗುವ ಜನರಿಗೆ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ.} (سورة التوبة
: 19).
۞ أَجَعَلۡتُمۡ سِقَايَةَ ٱلۡحَآجِّ وَعِمَارَةَ ٱلۡمَسۡجِدِ ٱلۡحَرَامِ كَمَنۡ ءَامَنَ بِٱللَّهِ وَٱلۡيَوۡمِ ٱلۡأٓخِرِ وَجَٰهَدَ فِي سَبِيلِ ٱللَّهِۚ لَا يَسۡتَوُۥنَ عِندَ ٱللَّهِۗ وَٱللَّهُ لَا يَهۡدِي ٱلۡقَوۡمَ ٱلظَّٰلِمِينَ
{ಜನರಿಗೆ ಹಜ್ಜ್ ನಿರ್ವಹಿಸಲು ಕರೆ ನೀಡಿರಿ. ಜನರು ತಮ್ಮ ಬಳಿಗೆ ಕಾಲ್ನಡಿಗೆಯಲ್ಲಿ ಮತ್ತು ಸಣಕಲು ಒಂಟೆಗಳ ಮೇಲೇರಿ ಬರುವರು. ಅವರು ವಿದೂರವಾದ ಎಲ್ಲಾ ಸ್ಥಳಗಳಿಂದಲೂ ಬರುವರು.} (سورة الحج
: 27).
وَأَذِّن فِي ٱلنَّاسِ بِٱلۡحَجِّ يَأۡتُوكَ رِجَالٗا وَعَلَىٰ كُلِّ ضَامِرٖ يَأۡتِينَ مِن كُلِّ فَجٍّ عَمِيقٖ
{ಅವರಿಗೆ ಪ್ರಯೋಜನವಾಗುವುದನ್ನು ಪಡೆಯಲು ಮತ್ತು ನಿಶ್ಚಿತ ದಿನಗಳಲ್ಲಿ ಅಲ್ಲಾಹನ ಹೆಸರನ್ನು ಉಚ್ಚರಿಸಿ ಅವನು ಒದಗಿಸಿದ ಜಾನುವಾರುಗಳನ್ನು ಬಲಿ ನೀಡಲು. ಅದರ ಮಾಂಸವನ್ನು ನೀವು ತಿನ್ನಿರಿ ಮತ್ತು ಹಸಿದ ಬಡವರಿಗೂ ತಿನ್ನಲು ನೀಡಿರಿ.} (سورة الحج
: 28).
لِّيَشۡهَدُواْ مَنَٰفِعَ لَهُمۡ وَيَذۡكُرُواْ ٱسۡمَ ٱللَّهِ فِيٓ أَيَّامٖ مَّعۡلُومَٰتٍ عَلَىٰ مَا رَزَقَهُم مِّنۢ بَهِيمَةِ ٱلۡأَنۡعَٰمِۖ فَكُلُواْ مِنۡهَا وَأَطۡعِمُواْ ٱلۡبَآئِسَ ٱلۡفَقِيرَ
{ನಂತರ ಅವರು ತಮ್ಮ ಕೊಳೆಯನ್ನು ನಿವಾರಿಸಲಿ,[1] ತಮ್ಮ ಹರಕೆಗಳನ್ನು ಸಂದಾಯ ಮಾಡಲಿ ಮತ್ತು ಆ ಪ್ರಾಚೀನ ಭವನಕ್ಕೆ ಪ್ರದಕ್ಷಿಣೆ ಮಾಡಲಿ.”} (سورة الحج
: 29).
ثُمَّ لۡيَقۡضُواْ تَفَثَهُمۡ وَلۡيُوفُواْ نُذُورَهُمۡ وَلۡيَطَّوَّفُواْ بِٱلۡبَيۡتِ ٱلۡعَتِيقِ
{ನಿಮಗೆ ಅವುಗಳಲ್ಲಿ (ಬಲಿಮೃಗಗಳಲ್ಲಿ) ಒಂದು ನಿಶ್ಚಿತ ಅವಧಿಯ ತನಕ ಪ್ರಯೋಜನಗಳಿವೆ. ನಂತರ ಅವುಗಳನ್ನು ಬಲಿ ನೀಡಬೇಕಾದ ಸ್ಥಳವು ಆ ಪ್ರಾಚೀನ ಭವನವಾಗಿದೆ.} (سورة الحج
: 33).
لَكُمۡ فِيهَا مَنَٰفِعُ إِلَىٰٓ أَجَلٖ مُّسَمّٗى ثُمَّ مَحِلُّهَآ إِلَى ٱلۡبَيۡتِ ٱلۡعَتِيقِ
{ನಾವು ಬಲಿ ಒಂಟೆಗಳನ್ನು ನಿಮಗೋಸ್ಕರ ಅಲ್ಲಾಹನ ಲಾಂಛನಗಳಲ್ಲಿ ಸೇರಿಸಿದ್ದೇವೆ. ನಿಮಗೆ ಅದರಲ್ಲಿ ಒಳಿತಿದೆ. ಆದ್ದರಿಂದ, ಅವುಗಳನ್ನು ಸಾಲಾಗಿ ನಿಲ್ಲಿಸಿ ಅವುಗಳ ಮೇಲೆ ಅಲ್ಲಾಹನ ಹೆಸರನ್ನು ಉಚ್ಛರಿಸಿರಿ. ನಂತರ ಅವು ತಮ್ಮ ಪಾರ್ಶ್ವಗಳ ಮೇಲೆ ಬಿದ್ದರೆ, ನೀವೂ ತಿನ್ನಿರಿ ಮತ್ತು ನಿಮ್ಮ ಮುಂದೆ ಕೈಯೊಡ್ಡದ ಬಡವರಿಗೆ ಮತ್ತು ಬೇಡಿ ತಿನ್ನುವವರಿಗೆ ತಿನ್ನಿಸಿರಿ. ಈ ರೀತಿ ನಾವು ಅವುಗಳನ್ನು ನಿಮಗೆ ಅಧೀನಗೊಳಿಸಿದ್ದೇವೆ. ನೀವು ಕೃತಜ್ಞರಾಗುವುದಕ್ಕಾಗಿ.} (سورة الحج
: 36).
وَٱلۡبُدۡنَ جَعَلۡنَٰهَا لَكُم مِّن شَعَٰٓئِرِ ٱللَّهِ لَكُمۡ فِيهَا خَيۡرٞۖ فَٱذۡكُرُواْ ٱسۡمَ ٱللَّهِ عَلَيۡهَا صَوَآفَّۖ فَإِذَا وَجَبَتۡ جُنُوبُهَا فَكُلُواْ مِنۡهَا وَأَطۡعِمُواْ ٱلۡقَانِعَ وَٱلۡمُعۡتَرَّۚ كَذَٰلِكَ سَخَّرۡنَٰهَا لَكُمۡ لَعَلَّكُمۡ تَشۡكُرُونَ
{ಅವುಗಳ ಮಾಂಸ ಅಥವಾ ರಕ್ತ ಅಲ್ಲಾಹನಿಗೆ ತಲುಪುವುದಿಲ್ಲ. ಆದರೆ ನಿಮ್ಮಲ್ಲಿರುವ ದೇವಭಯವು ಅವನಿಗೆ ತಲುಪುತ್ತದೆ. ಈ ರೀತಿ ಅವನು ಅವುಗಳನ್ನು ನಿಮಗೆ ಅಧೀನಗೊಳಿಸಿದ್ದಾನೆ. ಅಲ್ಲಾಹು ನಿಮಗೆ ಸನ್ಮಾರ್ಗವನ್ನು ತೋರಿಸಿದ್ದಕ್ಕಾಗಿ ನೀವು ಅವನ ಮಹತ್ವವನ್ನು ಕೊಂಡಾಡಲು. ಒಳಿತು ಮಾಡುವವರಿಗೆ ಸುವಾರ್ತೆಯನ್ನು ತಿಳಿಸಿರಿ.} (سورة الحج
: 37).
لَن يَنَالَ ٱللَّهَ لُحُومُهَا وَلَا دِمَآؤُهَا وَلَٰكِن يَنَالُهُ ٱلتَّقۡوَىٰ مِنكُمۡۚ كَذَٰلِكَ سَخَّرَهَا لَكُمۡ لِتُكَبِّرُواْ ٱللَّهَ عَلَىٰ مَا هَدَىٰكُمۡۗ وَبَشِّرِ ٱلۡمُحۡسِنِينَ